ರಾಯಚೂರು: ಕೇಂದ್ರ ಸರ್ಕಾರ ಹಿಂಪಡೆದಂತೆ ರಾಜ್ಯ ಸರ್ಕಾರ ಕೂಡ ಕೃಷಿ ಕಾಯ್ದೆ ಹಿಂಪಡೆಯಬೇಕು. ಸರ್ಕಾರಕ್ಕೆ ಚುರುಕು ಮುಟ್ಟಿಸುವ ನಿಟ್ಟಿನಲ್ಲಿ ಫೆಬ್ರವರಿಯಲ್ಲಿ ಜನಾಂದೋಲ ಯಾತ್ರೆ ನಡೆಸುವುದಾಗಿ ಸಾಮಾಜಿಕ ಕಾರ್ಯಕರ್ತ ಎಸ್.ಆರ್.ಹಿರೇಮಠ ಹೇಳಿದ್ದಾರೆ.
Advertisement
ರಾಯಚೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸಬೇಕು. ಎಪಿಎಂಸಿ ತಿದ್ದುಪಡಿ ಕಾಯ್ದೆ, ಗೋ ಹತ್ಯೆ ನಿಷೇಧ ಕಾಯ್ದೆ ಹಾಗೂ ಕೃಷಿ ಕಾಯ್ದೆಯನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಸೋಂಕು ಕಡಿಮೆ ಇದ್ದಾಗ ಕರ್ಫ್ಯೂ ವಿಧಿಸಿ, ಹೆಚ್ಚಾದಾಗ ಕರ್ಫ್ಯೂ ಹಿಂಪಡೆದಿದ್ದಾರೆ: ಇದನ್ನೂ ಒದಿ: ಚಾಮುಂಡೇಶ್ವರಿಯಿಂದ ಓಡಿಸಲಾಗಿದೆ, ಬಾದಾಮಿಯಿಂದ ಓಡಿಸುವುದು ಬಾಕಿ ಇದೆ: ಸಿದ್ದು ವಿರುದ್ಧ ಹೆಚ್‌ಡಿಕೆ ವಾಗ್ದಾಳಿ
Advertisement
ಈ ಮೂರು ವಿಚಾರಗಳನ್ನು ಸರ್ಕಾರಕ್ಕೆ ಮುಟ್ಟಿಸುವ ನಿಟ್ಟಿನಲ್ಲಿ ಯಾತ್ರೆ ನಡೆಸಲಾಗುವುದು. ಮುಂದಿನ ತಿಂಗಳು ಬಸವಕಲ್ಯಾಣದಿಂದ ಬೆಂಗಳೂರು, ಮಲೆಮಹದೇಶ್ವರದಿಂದ ಬೆಂಗಳೂರಿಗೆ ಯಾತ್ರೆ ನಡೆಸುವುದಾಗಿ ತಿಳಿಸಿದ್ದಾರೆ.
Advertisement
Advertisement
ಕೇಂದ್ರದ ಮೂರು ಕೃಷಿ ಕಾಯ್ದೆಗಳನ್ನು ಹಿಂಪೆಡೆಯುವಂತೆ ದೆಹಲಿ ಗಡಿ ಭಾಗಗಳಲ್ಲಿ ರೈತ ಸಂಘಟನೆಗಳು ಸತತ ಒಂದು ವರ್ಷ ಪ್ರತಿಭಟನೆ ನಡೆಸಿದವು. ರೈತರ ಪ್ರತಿಭಟನೆಗೆ ಮಣಿದ ಕೇಂದ್ರ ಸರ್ಕಾರ ಕೃಷಿ ಕಾಯ್ದೆಗಳನ್ನು ಹಿಂಪಡೆಯಿತು. ಪ್ರತಿಭಟನೆ ಹಿಂಪಡೆದ ರೈತರು, ಕೇಂದ್ರ ಮುಂದೆ ಮತ್ತಷ್ಟು ಬೇಡಿಕೆಗಳನ್ನಿಟ್ಟಿದ್ದಾರೆ.