ಸ್ಟಿಂಗ್, ಹನಿಟ್ರ್ಯಾಪ್ ನಮ್ಮ ಸಂಸ್ಕೃತಿ ಅಲ್ಲ: ಎಸ್.ಎಸ್. ಮಲ್ಲಿಕಾರ್ಜುನ್‌

1 Min Read

ದಾವಣಗೆರೆ: ಸ್ಟಿಂಗ್ (Sting), ಹನಿಟ್ರ್ಯಾಪ್ ಆಗಬಾರದು, ಇದು ನಮ್ಮ ಸಂಸ್ಕಾರ ಸಂಸ್ಕೃತಿ ಅಲ್ಲ. ಈಗ ಎಲ್ಲೆಂದರಲ್ಲಿ ಕ್ಯಾಮೆರಾಗಳನ್ನು ಇಟ್ಟು ವಿಡಿಯೋ ಮಾಡುತ್ತಾರೆ. ಇದು ಆಗಬಾರದು ಎಂದು ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ (S.S Mallikarjun) ಹೇಳಿದರು.

ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯ ಹಿನ್ನೆಲೆಯಲ್ಲಿ ದಾವಣಗೆರೆಯಲ್ಲಿ ಮತ ಚಲಾಯಿಸಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದರು. ಈ ವೇಳೆ, ಮಾಜಿ ಸಿಎಂ ಸಿದ್ಧರಾಮಯ್ಯರ ಸ್ಟಿಂಗ್ ಆಪರೇಷನ್ ಕುರಿತು ಮಾತನಾಡಿದರು. ಯತೀಂದ್ರ ಅವರು ಏನು ಹೇಳಿಕೆ ನೀಡಿದ್ದಾರೆ ಎಂಬುದರ ಬಗ್ಗೆ ನನಗೆ ಗೊತ್ತಿಲ್ಲ ಎಂದರು. ಇದನ್ನೂ ಓದಿ: ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮಧ್ಯಪ್ರವೇಶ ಮಾಡಲಿ: ಭೋಜೇಗೌಡ

ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ ವಿಚಾರವಾಗಿ, ನಮ್ಮ ಕಾಂಗ್ರೆಸ್ (Congress) ಪಕ್ಷದ ಅಭ್ಯರ್ಥಿ ಹೆಚ್ಚಿನ ಬಹುಮತದಿಂದ ಗೆಲ್ಲುತ್ತಾರೆ ಎನ್ನುವ ಭರವಸೆ ಇದೆ. ನಮ್ಮ ಕಾರ್ಯಕರ್ತರು ಪ್ರತಿಯೊಬ್ಬರ ಬಳಿ ಮತ ಕೇಳಿದ್ದಾರೆ. ನಮ್ಮ ಪಕ್ಷ ಸೂಕ್ತ ಅಭ್ಯರ್ಥಿಗೆ ಟಿಕೆಟ್ ಕೊಟ್ಟಿದೆ. ನಮ್ಮ ಅಭ್ಯರ್ಥಿ ಗೆಲ್ಲುತ್ತಾರೆ ಎನ್ನುವ ಭರವಸೆ ಇದೆ. ಇದು ನೂರಕ್ಕೆ ನೂರರಷ್ಟು ಮುಂದಿನ ಚುನಾವಣೆಗೆ ದಿಕ್ಸೂಚಿ ಆಗಲಿದೆ ಎಂದು ತಿಳಿಸಿದರು.

ನಂದಿನಿ ಹಾಲಿನ ದರ ಹೆಚ್ಚಳ ವಿಚಾರವಾಗಿ, ಈಗ ಚುನಾವಣಾ ನೀತಿ ಸಂಹಿತೆ ಇದೆ. ಆದ್ದರಿಂದ ನಂತರದಲ್ಲಿ ಕ್ಯಾಬಿನೆಟ್‌ನಲ್ಲಿ ಚರ್ಚೆ ಮಾಡಲಾಗುವುದು ಎಂದರು. ಮೈಸೂರು ದಸರಾದಲ್ಲಿ ಸಚಿವರನ್ನು ತಡೆಹಿಡಿದಿರುವ ಬಗ್ಗೆ ಸಿಎಂ ಈಗಾಗಲೇ ಸಿ.ಎಸ್. ಅವರಿಗೆ ಹೇಳಿದ್ದಾರೆ. ಏನಾಗಿದೆ ಅಂತ ವರದಿ ಬಂದ ಮೇಲೆ ಸಿ.ಎಸ್ ತಿಳಿಸಲಿದ್ದಾರೆ ಎಂದರು. ಇದನ್ನೂ ಓದಿ: ನನ್ನನ್ನು ಬ್ಲಾಕ್‌ಮೇಲ್ ಮಾಡಲು ಸ್ಟಿಂಗ್‌, ನಾನು ಯಾವುದೇ ತಪ್ಪು ಮಾಡಿಲ್ಲ: ಸಿದ್ದರಾಮಯ್ಯ

Share This Article
Exit mobile version