ನವದೆಹಲಿ: ಭಾರತ ಕ್ರಿಕೆಟ್ ತಂಡದ ವೇಗಿ ಎಸ್.ಶ್ರೀಶಾಂತ್ (s.sreesanth) ಎಲ್ಲಾ ಮಾದರಿಯ ಕ್ರಿಕೆಟ್‌ಗೆ ಬುಧವಾರ ನಿವೃತ್ತಿ ಘೋಷಿಸಿದ್ದಾರೆ.
ಮುಂದಿನ ಪೀಳಿಗೆಯ ಕ್ರಿಕೆಟಿಗರಿಗಾಗಿ ನನ್ನ ಪ್ರಥಮ ದರ್ಜೆ ಕ್ರಿಕೆಟ್ ವೃತ್ತಿ ಜೀವನವನ್ನು ಕೊನೆಗೊಳಿಸಲು ನಾನು ಆಯ್ಕೆ ಮಾಡಿಕೊಂಡಿದ್ದೇನೆ. ಈ ನಿರ್ಧಾರ ನನ್ನದು. ಇದು ನನಗೆ ಸಂತೋಷ ತರುವುದಿಲ್ಲ ಎಂದು ನನಗೆ ತಿಳಿದಿದ್ದರೂ, ನನ್ನ ಜೀವನದಲ್ಲಿ ತೆಗೆದುಕೊಳ್ಳುವ ಸರಿಯಾದ ಮತ್ತು ಗೌರವಾನ್ವಿತ ನಿರ್ಧಾರ ಇದಾಗಿದೆ. ನಾನು ಪ್ರತಿ ಕ್ಷಣವನ್ನೂ ಪ್ರೀತಿಸುತ್ತೇನೆ ಎಂದು ಶ್ರೀಶಾಂತ್ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಐಪಿಎಲ್‍ನ ಸಿಕ್ಸರ್ ಕಿಂಗ್ಸ್
Advertisement
Advertisement
ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ (IPL) ಸ್ಪಾಟ್ ಫಿಕ್ಸಿಂಗ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಶ್ರೀಶಾಂತ್ ಅವರನ್ನು ಆಗಸ್ಟ್ 2013ರಲ್ಲಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ನಿಷೇಧಿಸಿತ್ತು. ಆದರೂ ಅವರ ಜೀವಿತಾವಧಿ ನಿಷೇಧವನ್ನು 2019ರಲ್ಲಿ ಏಳು ವರ್ಷಗಳಿಗೆ ಇಳಿಸಲಾಯಿತು. ಅದು ಸೆಪ್ಟೆಂಬರ್ 2020ರಲ್ಲಿ ಪೂರ್ಣಗೊಂಡಿತ್ತು.
Advertisement
For the next generation of cricketers..I have chosen to end my first class cricket career. This decision is mine alone, and although I know this will not bring me happiness, it is the right and honorable action to take at this time in my life. I ve cherished every moment .❤️????????????
— Sreesanth (@sreesanth36) March 9, 2022
Advertisement
2021 ಮತ್ತು 2022ರಲ್ಲಿ ಶ್ರೀಶಾಂತ್ ಅವರು ಐಪಿಎಲ್ ಹರಾಜಿಗೆ ಶಾರ್ಟ್‌ಲಿಸ್ಟ್ ಆದರು. ಆದರೆ ಎರಡೂ ಸಂದರ್ಭದಲ್ಲಿ ಅವರನ್ನು ಖರೀದಿಸಲಿಲ್ಲ. ಇದನ್ನೂ ಓದಿ: ಐಸಿಸಿ ಟೆಸ್ಟ್ ರ‍್ಯಾಂಕಿಂಗ್ – ರವೀಂದ್ರ ಜಡೇಜಾ ವಿಶ್ವ ನಂಬರ್ 1 ಆಲ್‍ರೌಂಡರ್
ಮಾರ್ಚ್ 2006ರಲ್ಲಿ ಟೆಸ್ಟ್‌ಗೆ ಪಾದಾರ್ಪಣೆ ಮಾಡಿದ ಶ್ರೀಶಾಂತ್ 27 ಪಂದ್ಯಗಳನ್ನು ಆಡಿದ್ದು, 87 ವಿಕೆಟ್ ಗಳಿಸಿದ್ದಾರೆ. ಅವರು 53 ಅಂತಾರಾಷ್ಟ್ರೀಯ ಏಕದಿನ ಪಂದ್ಯಗಳನ್ನು ಆಡಿದ್ದು, 75 ವಿಕೆಟ್‌ಗಳನ್ನು ಪಡೆದಿದ್ದಾರೆ. ಒಟ್ಟು 10 ಟಿ20 ಪಂದ್ಯಗಳನ್ನಾಡಿದ್ದು, 7 ವಿಕೆಟ್ ಪಡೆದಿದ್ದಾರೆ. ಇದನ್ನೂ ಓದಿ: ರಾವಲ್ಪಿಂಡಿ ಮೈದಾನದಲ್ಲಿ ಭಾಂಗ್ರಾ ನೃತ್ಯ ಮಾಡಿದ ಡೇವಿಡ್ ವಾರ್ನರ್