ತಿರುವನಂತಪುರ: 9 ವರ್ಷಗಳ ಬಳಿಕ ಪ್ರಥಮ ದರ್ಜೆ ಕ್ರಿಕೆಟ್‍ನಲ್ಲಿ ವಿಕೆಟ್ ಪಡೆದ ಕೇರಳ ತಂಡದ ವೇಗದ ಬೌಲರ್ ಎಸ್.ಶ್ರೀಶಾಂತ್ ಪಿಚ್‌ಗೆ ದೀರ್ಘದಂಡ ನಮಸ್ಕಾರ ಹಾಕಿದ್ದಾರೆ.
Advertisement
ಮೇಘಾಲಯ ಮತ್ತು ಕೇರಳ ನಡುವಿನ ರಣಜಿ ಪಂದ್ಯದಲ್ಲಿ 9 ವರ್ಷಗಳ ಬಳಿಕ ಶ್ರೀಶಾಂತ್ ಪ್ರಥಮ ದರ್ಜೆ ಕ್ರಿಕೆಟ್‍ನಲ್ಲಿ ವಿಕೆಟ್ ಪಡೆಯಲು ಸಫಲರಾದರು. ಈ ಸಂಭ್ರಮವನ್ನು ಶ್ರೀಶಾಂತ್ ಶಾಂತವಾಗಿ ಪಿಚ್‍ಗೆ ನಮಸ್ಕಾರ ಮಾಡುವ ಮೂಲಕ ಆಚರಿಸಿಕೊಂಡಿದ್ದಾರೆ. ಈ ವೀಡಿಯೋವನ್ನು ಸ್ವತಃ ಶ್ರೀಶಾಂತ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಇದನ್ನೂ ಓದಿ: ಐಪಿಎಲ್ ಮೆಗಾ ಹರಾಜಿಗೆ ಹೆಸರು ನೋಂದಾಯಿಸಿಕೊಂಡ ಶ್ರೀಶಾಂತ್ – ಮೂಲಬೆಲೆ ಎಷ್ಟು ಗೊತ್ತಾ?
Advertisement
Advertisement
ಶ್ರೀಶಾಂತ್ ಮೇಘಾಲಯ ವಿರುದ್ಧದ ಪಂದ್ಯದಲ್ಲಿ ಒಟ್ಟು 11.5 ಓವರ್ ಎಸೆದು 40 ರನ್ ನೀಡಿ 2 ವಿಕೆಟ್ ಪಡೆದಿದ್ದರು. 2013ರ ಸ್ಪಾಟ್ ಫಿಕ್ಸಿಂಗ್ ಆರೋಪದಲ್ಲಿ ನಿಷೇಧ ಶಿಕ್ಷೆಗೆ ಗುರಿಯಾಗಿದ್ದ ಶ್ರೀಶಾಂತ್ ಆ ಬಳಿಕ ಇದೀಗ ಕೇರಳ ರಾಜ್ಯ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ. ಇದನ್ನೂ ಓದಿ: 7 ವರ್ಷದ ಬಳಿಕ ವಿಕೆಟ್- ಕೈ ಮುಗಿದು ನಮಸ್ಕರಿಸಿದ ಶ್ರೀಶಾಂತ್
Advertisement
Now that’s my 1st wicket after 9 long years..gods grace I was just over joyed and giving my Pranaam to the wicket ..❤️❤️❤️❤️❤️❤️❤️ #grateful #cricket #ketalacricket #bcci #india #Priceless pic.twitter.com/53JkZVUhoG
— Sreesanth (@sreesanth36) March 2, 2022
38 ವರ್ಷದ ಶ್ರೀಶಾಂತ್ ಪ್ರಥಮ ದರ್ಜೆ ಕ್ರಿಕೆಟ್‍ನಲ್ಲಿ ಈಗಾಗಲೇ 213 ವಿಕೆಟ್ ಪಡೆದಿದ್ದು, 6 ಬಾರಿ ಐದು ವಿಕೆಟ್ ಗೊಂಚಲು ಪಡೆದಿದ್ದಾರೆ. ಭಾರತದ ಪರ 27 ಟೆಸ್ಟ್, 53 ಏಕದಿನ ಪಂದ್ಯ ಆಡಿರುವ ಶ್ರೀಶಾಂತ್ ಕ್ರಮವಾಗಿ 87, 75 ವಿಕೆಟ್ ಪಡೆದಿದ್ದು, 10 ಟಿ20 ಪಂದ್ಯಗಳಲ್ಲಿ 7 ವಿಕೆಟ್ ಉರುಳಿಸಿದ್ದಾರೆ. 2011ರ ಏಕದಿನ ವಿಶ್ವಕಪ್ ಗೆದ್ದ ತಂಡದಲ್ಲಿ ಶ್ರೀಶಾಂತ್ ಸದಸ್ಯರಾಗಿದ್ದರು. 2011 ಆಗಸ್ಟ್‌ನಲ್ಲಿ ಶ್ರೀಶಾಂತ್ ಕೊನೆಯ ಬಾರಿ ಟೀಂ ಇಂಡಿಯಾದಲ್ಲಿ ಕಾಣಿಸಿಕೊಂಡಿದ್ದರು.