ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ಬಜೆಟ್‌ನ್ನು ಬಿಜೆಪಿ (BJP) ಶಾಸಕ ಎಸ್.ಟಿ ಸೋಮಶೇಖರ್ (S.T Somashekar) ಹಾಡಿ ಹೊಗಳಿದ್ದಾರೆ. ಈ ಬಜೆಟ್ 7 ಕೋಟಿ ಜನರ ಬಜೆಟ್ ಆಗಿದೆ. ನಾನು ಸಿಎಂ ಮತ್ತು ಡಿಸಿಎಂ ಅವರಿಗೆ ಅಭಿನಂದನೆ ತಿಳಿಸುತ್ತೇನೆ ಎಂದಿದ್ದಾರೆ.
ನಗರದಲ್ಲಿ (Be ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನ ಬಗ್ಗೆ ಮಾತ್ರ ನಾನು ಮಾತಾನಾಡುತ್ತೇನೆ. ನನ್ನ ಕ್ಷೇತ್ರದ ವ್ಯಾಪ್ತಿಯಲ್ಲಿ 5 ಕಸದ ಘಟಕಗಳು ಇದ್ದವು. ಅವುಗಳನ್ನ ಹೊರಗೆ ಹಾಕುವ ಬಗ್ಗೆ ಬಜೆಟ್‌ನಲ್ಲಿ ಉಲ್ಲೇಖಿಸಿದ್ದಾರೆ. ಜನರ ಸಂಕಷ್ಟ ನಿವಾರಣೆಗೆ ಸಿಎಂ ಕ್ರಮ ತೆಗೆದುಕೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಶಾಲಾ-ಕಾಲೇಜುಗಳ ಅಭಿವೃದ್ಧಿಗೆ 850 ಕೋಟಿ ರೂ. ಅನುದಾನ; ಸಿಎಂಗೆ ಮಧು ಬಂಗಾರಪ್ಪ ಅಭಿನಂದನೆ
110 ಹಳ್ಳಿಗಳಿಗೆ ಕಾವೇರಿ ನೀರಿನ ಸೌಲಭ್ಯ ಮಾಡುವ ಭರವಸೆ ನೀಡಿದ್ದಾರೆ. ಸಂಚಾರ ಸಮಸ್ಯೆ ನಿವಾರಣೆ ಬಗ್ಗೆ ಹೇಳಿದ್ದಾರೆ. ವೈಟ್ ಟ್ಯಾಪಿಂಗ್ ಕ್ಲಿಯರ್ ಮಾಡುವ ಬಗ್ಗೆ ಬಜೆಟ್‌ನಲ್ಲಿ ತಿಳಿಸಿದ್ದಾರೆ. ಇನ್ನೂ ಬೆಂಗಳೂರು ಬಿಟ್ಟು ಹೊರಗೆ ಏನಿದೆ ಎಂದು ನೋಡಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಬಜೆಟ್ ಮೊತ್ತ ನೋಡಿ ಬಿಜೆಪಿಗರಿಗೆ ಕುಳಿತುಕೊಳ್ಳಲು ಆಗದೆ ಕೈ ಹಿಸುಕಿಕೊಂಡಿದ್ದಾರೆ: ಡಿಕೆಶಿ