ಬೆಳಗಾವಿ: ರಮೇಶ್ ಜಾರಕಿಹೊಳಿ ಒಡೆತನದ ಸೌಭಾಗ್ಯಲಕ್ಷ್ಮೀ ಸಕ್ಕರೆ ಕಾರ್ಖಾನೆಯಿಂದ 600 ಕೋಟಿ ಸಾಲ ಬಾಕಿ ಆರೋಪದ ವಿಚಾರವಾಗಿ ಸಚಿವ ಎಸ್.ಟಿ ಸೋಮಶೇಖರ್ ಪ್ರತಿಕ್ರಿಯೆ ನೀಡಿದ್ದಾರೆ.
Advertisement
ರಮೇಶ್ ಜಾರಕಿಹೊಳಿ ಅಷ್ಟೇ ಅಲ್ಲ, ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಒಡೆತನದ ಸಕ್ಕರೆ ಕಾರ್ಖಾನೆ ಸಾಲವೂ ಬಾಕಿ ಇದೆ. ಜೆಡಿಎಸ್‍ನ ಬಂಡೆಪ್ಪ ಕಾಶೆಂಪೂರ್ ಸೇರಿ ಹಲವರು ಬಾಕಿ ಉಳಿಸಿಕೊಂಡಿದ್ದಾರೆ. ರಾಜ್ಯದ ವಿವಿಧ ಸಕ್ಕರೆ ಕಾರ್ಖಾನೆಗಳು 6 ಸಾವಿರ ಕೋಟಿಗೂ ಹೆಚ್ಚು ಸಾಲ ಬಾಕಿ ಉಳಿಸಿಕೊಂಡಿವೆ ಎನ್ನುವ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ಗೆ ಅವರು ಪರೋಕ್ಷವಾಗಿ ಟಾಂಗ್ ನೀಡಿದರು. ಇದನ್ನೂ ಓದಿ: ವಂಶಾಡಳಿತ ರಾಜಕಾರಣಕ್ಕೆ ಬಿಜೆಪಿಯಲ್ಲಿ ಸ್ಥಾನವಿಲ್ಲ: ಜ್ಯೋತಿರಾದಿತ್ಯ ಸಿಂಧಿಯಾ
Advertisement
Advertisement
ರಾಜ್ಯದಲ್ಲಿ 21 ಡಿಸಿಸಿ ಬ್ಯಾಂಕ್‍ಗಳು ಇದೆ. ಅದರಲ್ಲಿ 16 ಡಿಸಿಸಿ ಬ್ಯಾಂಕ್ ರಿವ್ಯೂ ಮಾಡಿದ್ದೇನೆ. ಇವತ್ತು ಬೆಳಗಾವಿ ಡಿಸಿಸಿ ಬ್ಯಾಂಕ್ ನೋಟಿಸ್ ಮಾಡೋದಕ್ಕೆ ಬಂದಿದ್ದೇನೆ. ರಮೇಶ್ ಒಬ್ಬರೇ ಸಾಲ ಪಡೆದಿಲ್ಲ. 23 ಸಕ್ಕರೆ ಕಾರ್ಖಾನೆಗೂ ಸಾಲ ಕೊಟ್ಟಿದ್ದೇವೆ. ಅಪೆಕ್ಸ್ ಬ್ಯಾಂಕ್‍ಗೆ ಗಂಭೀರವಾಗಿ ಹೇಳಿದ್ದೇವೆ. ನೋಟಿಸ್ ನೀಡಿ ವಸೂಲಾತಿ ಮಾಡುತ್ತಿದ್ದಾರೆ. ಒಟ್ಟಾರೆ 23 ಜನ ಸಾಲ ಪಡೆದಿದ್ದಾರೆ ಎಂದರು.
Advertisement
ನಗರದ ಡಿಸಿಸಿ ಬ್ಯಾಂಕ್‍ನಿಂದ ಒಟ್ಟು 1,024 ಕೋಟಿ ರೂ. ಸಾಲ ನೀಡಲಾಗಿದೆ. ಯಾರಿಗೆ ಸಾಲ ಕೊಟ್ಟಿದ್ದಾರೆ? ಯಾರು ಮರುಪಾವತಿಸಿಲ್ಲ. ಅವರಿಗೆ ನೋಟಿಸ್ ನೀಡಲಾಗಿದೆ. ಅಪೆಕ್ಸ್ ಬ್ಯಾಂಕ್ ಗಂಭಿರವಾಗಿ ಕ್ರಮ ಕೈಗೊಳ್ಳಲು ಮುಂದಾಗಿದೆ. ಕಾಂಗ್ರೆಸ್, ಬಿಜೆಪಿ, ಜೆಡಿಎಸ್‍ನವರೂ ನಮ್ಮಲ್ಲಿ ಸಾಲ ಪಡೆದಿದ್ದಾರೆ. ಕಾಂಗ್ರೆಸ್‍ನಿಂದ ಲಕ್ಷ್ಮೀ ಹೆಬ್ಬಾಳ್ಕರ್ ಕಾರ್ಖಾನೆ ಸಾಲ ತೆಗೆದುಕೊಂಡಿದೆ. ಜೆಡಿಎಸ್‍ನಿಂದ ಬಂಡೆಪ್ಪ ಕಾಂಶೆಪೂರ್ ಸಾಲ ತೆಗೆದುಕೊಂಡಿದ್ದಾರೆ. ಎಸ್. ಆರ್ ಪಾಟೀಲ್ ಕೂಡ ಸಾಲ ತೆಗೆದುಕೊಂಡಿದ್ದಾರೆ ಎಂದು ಮಾಹಿತಿ ನೀಡಿದರು.
ಯಾರೂ ಸಾಲ ಕಟ್ಟಿಲ್ಲ ಅವರಿಗೆ ನೋಟಿಸ್ ನೀಡಲಾಗುತ್ತಿದೆ. ಯಾರದು ಎಷ್ಟು ಸಾಲ ಬಾಕಿ ಇದೆ ಸಾರ್ವಜನಿಕ ವೇದಿಕೆಯಲ್ಲಿ ಪ್ರಕಟಿಸಲಾಗುವುದು. ಇದರಲ್ಲಿ ರಾಜಕೀಯವೇನಿಲ್ಲ, ಮುಚ್ಚು ಮರೆಯೂ ಇಲ್ಲ ಎಂದು ತಿಳಿಸಿದರು.