ಬೆಂಗಳೂರು: ವಿಧಾನಸಭೆಯಲ್ಲಿ ನಡೆಯುತ್ತಿರುವ ಸದನದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರು ಬಿಜೆಪಿ ಅವರು ಕುದುರೆ ವ್ಯಾಪಾರ ಮಾಡುತ್ತಿದ್ದು, ಶ್ರೀನಿವಾಸ್ ಗೌಡರು 5 ಕೋಟ್ ಆಫರ್ ಬಂದಿತ್ತು ಎಂದು ಹೇಳಿದ ಬೆನ್ನಲ್ಲೆ ಸಚಿವ ಸಾರಾ ಮಹೇಶ್ ಎದ್ದು ನಿಂತು ವಿಶ್ವನಾಥ್‍ಗೆ ಬಿಜೆಪಿ ಅವರು 28 ಕೋಟಿ ರೂ. ಆಫರ್ ಕೊಟ್ಟಿದ್ದಾರೆ ಎಂದು ಗಂಭೀರವಾಗಿ ಆರೋಪ ಮಾಡಿದ್ದಾರೆ.
ಲೋಕಸಭಾ ಚುನಾವಣೆಗೆ ಮೊದಲು ಅಂದರೆ ನಾಲ್ಕು ತಿಂಗಳ ಹಿಂದೆ ಅವರೇ, “ಪ್ರತಿಪಕ್ಷಗಳಿಗೆ ಅಧಿಕಾರ ಹಿಡಿಯುವ ಹಂಬಲ, ಕಾತುರ ಇರುವುದು ಸಹಜವಾಗಿದೆ. ಆದರೆ ಅದಕ್ಕಾಗಿ ವಾಮ ಮಾರ್ಗ ಹಿಡಿಯುವುದು ಸರಿಯಿಲ್ಲ. ರಾಜ್ಯದಲ್ಲಿ ಸಂವಿಧಾನಾತ್ಮಕವಾಗಿ ಮೈತ್ರಿ ಸರ್ಕಾರ ಆಡಳಿತದಲ್ಲಿದೆ. ಅದನ್ನು ಉರುಳಿಸುತ್ತಿರುವ ಪ್ರಯತ್ನಕ್ಕೆ ಕೈ ಹಾಕುತ್ತಿರುವುದು ಬಿಜೆಪಿಗೆ ಶೋಭೆ ತರುವುದಲ್ಲ. ಅದೇ ರೀತಿ ಕಪ್ಪು ಹಣ ಉಪಯೋಗಿಸಬಾರದು” ಎಂದು ಹೇಳಿಕೆ ಕೊಟ್ಟಿದ್ದರು.
Advertisement
Advertisement
ಆದರೆ ನಾನು ಅಮೆರಿಕಕ್ಕೆ ಹೋಗುವ ಮೊದಲು ಸಾ.ರಾ ಮಹೇಶ್ ಸರಿಯಿಲ್ಲ. ಅವರ ಧೋರಣೆಗೆ ಬೇಸತ್ತು ಹೋಗುತ್ತಿದ್ದೇನೆ ಎಂದು ಹೇಳಿದ್ದರು. ಆಗ ನಾನು ಅವರನ್ನು ತೋಟಕ್ಕೆ ಕರೆಸಿ, ಏನ್ ಸರ್ ಮಂತ್ರಿ ಆಗಬೇಕೆಂಬ ಆಸೆ ಇದೆಯೇ ಹೇಳಿ ಸರ್ ಎಂದು ಕೇಳಿದೆ. ಅದಕ್ಕೆ ಅವರು ಇಲ್ಲ, ಇಲ್ಲ ನನಗೆ ಅದೇನು ಬೇಡ ಎಂದರು. ಅದಕ್ಕೆ ನಾನು ಮತ್ತೆ ಬೇರೆ ಏನ್ ಬೇಕು ಹೇಳಿ ಸರ್ ಎಂದು ಕೇಳಿದೆ. ಅದಕ್ಕೆ ಅವರು ಚುನಾವಣೆಗೆ ನಾನು ಸಾಲ ಮಾಡಿಕೊಂಡಿದ್ದೇನೆ. ಅದರಿಂದ ಸಮಸ್ಯೆಯಾಗಿದೆ ಎಂದಿದ್ದರು.
Advertisement
Advertisement
ಇದೇ ವೇಳೆ ಅವರು, ನನ್ನನ್ನು ಬಿಜೆಪಿಯವರು ಕರೆದಿದ್ದರು. ಜೊತೆಗೆ 28 ಕೋಟಿ ರೂ. ಕೊಡುತ್ತೇನೆ ಎಂದಿದ್ದಾರೆ. ಆದರೆ ದೇವೇಗೌಡರು ಈ ಕಾಲದಲ್ಲಿ ನನ್ನನ್ನು ನಂಬಿ ಮೂಲೆಯಲ್ಲಿ ಇದ್ದವನ ಕರೆದುಕೊಂಡು ಬಂದು ಶಾಸಕನ ಸ್ಥಾನ ಕೊಟ್ಟರು. ಅವರಿಗೆ ಮೋಸ ಮಾಡಲ್ಲ ಎಂದಿದ್ದೇನೆ. ನೀವು ಸಾಲ ತೀರಿಸಲು ಒಂದು ವ್ಯವಸ್ಥೆ ಮಾಡಿ ಎಂದು ಕೇಳಿಕೊಂಡರು. ಬೇಕಿದ್ದರೆ ಅವರನ್ನು ಕರೆಸಿ ಇಲ್ಲೆ ಕೇಳಿ ನಾನು ಹೇಳುತ್ತಿರುವುದು ಸತ್ಯ. ಇಲ್ಲವಾದಲ್ಲಿ ಇನ್ಮುಂದೆ ಯಾವತ್ತು ಬಿಳಿ ಬಟ್ಟೆ ಹಾಕಲ್ಲ. ಕೈ ಮುಗಿದು ಸಾರ್ವಜನಿಕರ ಮುಂದೆ ವೋಟು ಕೇಳಲ್ಲ ಎಂದು ಮಹೇಶ್ ಶಪಥ ಮಾಡಿದರು.
ಈ ಸಂದರ್ಭದಲ್ಲಿ, ಸರ್ ಬೇಸರ ಮಾಡಿಕೊಳ್ಳಬೇಡಿ, ಕುಮಾರಣ್ಣ ನಂಬಿ ನನ್ನನ್ನು ಮಂತ್ರಿ ಮಾಡಿದ್ದಾರೆ. ನಾನು ಜನರ ಸೇವೆ ಮಾಡಲೆಂದು ಮಂತ್ರಿಯಾಗಿದ್ದೇನೆ. ಹೀಗಾಗಿ ನನ್ನ ಬಳಿ ಯಾವುದೇ ಹಣ ಇಲ್ಲ. ಆದರೆ ನಾನು ಸಂಪಾದನೆ ಮಾಡಿರುವ ಹಣ ಇದೆ. ಅದನ್ನು ತಿಂಗಳಿಗೆ ಇಂತಿಷ್ಟು ಎಂದು ಕೊಡುತ್ತೇನೆ, ನೀವು ಸಾಲ ತೀರಿಸಿಕೊಳ್ಳಿ ಎಂದು ಸಾ.ರಾ ಮಹೇಶ್ ತಂದೆ-ತಾಯಿ, ಮಕ್ಕಳ ಮೇಲೆ ಆಣೆ ಮಾಡಿ ಹೇಳುತ್ತೇನೆ ಎಂದರು.
ನಾನು ಅಮೆರಿಕದಲ್ಲಿದ್ದೆ ಆಗಲೂ ಫೋನ್ ಮಾಡಿ ಸರ್ ಹಣವನ್ನು ಎಲ್ಲಿಗೆ ಕಳುಹಿಸಲಿ ಎಂದು ಕೇಳಿದೆ. ಆಗ ಮಹೇಶ್ ನಾನೇ ಬರುತ್ತೇನೆ, ಅಲ್ಲೆ ಬಂದು ಮಾತನಾಡುತ್ತೇನೆ ಎಂದಿದ್ದರು. ಆದರೆ ಇಂದು ಮುಂಬೈಗೆ ಹೋಗಿದ್ದಾರೆ. ನನ್ನಿಂದ ಬೇಸರವಾಗಿ ಹೋಗಿದ್ದೇನೆ ಎಂದು ಹೇಳಿದ್ದಾರೆ. ಹೀಗಾಗಿ ಅವರನ್ನು ಕರೆಸಿ ಎಂದು ಸ್ಪೀಕರ್ ಬಳಿ ಮಹೇಶ್ ಮನವಿ ಮಾಡಿಕೊಂಡರು.