ಬೆಂಗಳೂರು: ಸಾಲುಮರದ ತಿಮ್ಮಕ್ಕ ಅವರನ್ನು ಪರಿಸರ ರಾಯಭಾರಿಯಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಸಾಲುಮರದ ತಿಮ್ಮಕ್ಕ ಅವರನ್ನು ಪರಿಸರ ರಾಯಭಾರಿಯನ್ನಾಗಿ ನೇಮಿಸಿರುವುದರ ಜೊತೆಗೆ ಅವರಿಗೆ ರಾಜ್ಯ ಸಂಪುಟ ದರ್ಜೆಯ ಸ್ಥಾನಮಾನ ಕೂಡ ಸರ್ಕಾರ ನೀಡಿದೆ. ರಾಜ್ಯದ ಉದ್ದಗಲಕ್ಕೂ ಪರಿಸರ ರಕ್ಷಣೆಯ ಕುರಿತು ಪ್ರಚಾರ ಮಾಡಲು ತಿಮ್ಮಕ್ಕ ಅವರಿಗೆ ಈ ಸ್ಥಾನಮಾನ ನೀಡಲಾಗಿದೆ. ಹೊರ ರಾಜ್ಯಕ್ಕೆ ತೆರಳಿದರೆ ಸರ್ಕಾರವೇ ಖರ್ಚು ಭರಿಸಲಿದೆ. ಇದನ್ನೂ ಓದಿ: ರಾಜ್ಯಸಭೆ ಸದಸ್ಯರಾಗಿ ಜಗ್ಗೇಶ್, ಲೆಹರ್ ಸಿಂಗ್, ಜೈರಾಮ್ ರಮೇಶ್, ನಿರ್ಮಲಾ ಸೀತಾರಾಮನ್ ಪ್ರಮಾಣ ವಚನ ಸ್ವೀಕಾರ
Advertisement
Advertisement
ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರಿಗೆ ಪರಿಸರ ರಾಯಭಾರಿ ಗೌರವ ನೀಡುವ ಜೊತೆಗೆ ಕ್ಯಾಬಿನೆಟ್ ದರ್ಜೆಯ ಸ್ಥಾನಮಾನ ನೀಡಲಾಗುವುದು ಎಂದು ಕೆಲದಿನಗಳ ಹಿಂದೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಕಟಿಸಿದ್ದರು.
Advertisement
ತಿಮ್ಮಕ್ಕ ಅವರು ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಹೊಸೂರು ಗ್ರಾಮದವರು. ಅವರಿಗೆ ಯಾವುದೇ ಔಪಚಾರಿಕ ಶಿಕ್ಷಣ ಲಭಿಸಲಿಲ್ಲ. ಅನಕ್ಷರಸ್ಥೆಯಾಗಿದ್ದರೂ ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದ್ದಾರೆ. ತಿಮ್ಮಕ್ಕ ಅವರು ಮಕ್ಕಳಿಲ್ಲದ ಕಾರಣ ರಸ್ತೆಯ ಬದಿಯಲ್ಲಿ ಆಲದ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಬೆಳೆಸಿದ ಪರಿಸರವಾದಿ.
Advertisement
ಮುಂದಿನ ಪೀಳಿಗೆ ಹಿತದೃಷ್ಟಿಯನ್ನು ಮನಗಂಡು ಮರಗಳಿಗೆ ನೀರುಣಿಸಿ ಬೆಳೆಸಿದರು ತಿಮ್ಮಕ್ಕ. ಅವರ ಪರಿಸರ ಸಂರಕ್ಷಣೆ ಕಾರ್ಯವನ್ನು ಶ್ಲಾಘಿಸಿ ಹಲವಾರು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸಂಸ್ಥೆಗಳು ಗೌರವಿಸಿವೆ. ತಿಮ್ಮಕ್ಕ ಅವರಿಗೆ ರಾಜ್ಯ ಮತ್ತು ರಾಷ್ಟ್ರಮಟ್ಟದ ಪ್ರಶಸ್ತಿಗಳೂ ಲಭಿಸಿವೆ. ಇದನ್ನೂ ಓದಿ: ಹಿಂದೂಗಳಿಗೆ ಕಾನೂನು ನೆರವು ನೀಡಲು ವಿಹೆಚ್‌ಪಿ, ಭಜರಂಗದಳದಿಂದ ಸಹಾಯವಾಣಿ