ಬೆಂಗಳೂರು: ಆಸ್ಪತ್ರೆಗೆ ದಾಖಲಾಗಿರುವ ವೃಕ್ಷ ಮಾತೆ ಸಾಲು ಮರದ ತಿಮ್ಮಕ್ಕ (Saalu Marada Thimmakka) ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
- Advertisement -
ಮಂಗಳವಾರ ರಾತ್ರಿ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಜಯನಗರದ ಅಪೋಲೋ ಆಸ್ಪತ್ರೆಗೆ (Apollo Hospital) ದಾಖಲಾಗಿದ್ದರು. ಸದ್ಯ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಪೋಲೋ ಆಸ್ಪತ್ರೆ ವೈದ್ಯರು ಪಬ್ಲಿಕ್ ಟಿವಿಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಶಿವಮೊಗ್ಗದಲ್ಲಿ ಡಿಸಿಸಿ ಬ್ಯಾಂಕ್ ಅಧ್ಯಕ್ಷರ ಮನೆ ಮೇಲೆ ಇಡಿ ದಾಳಿ
- Advertisement -
- Advertisement -
ಕಳೆದ ಮೂರು ತಿಂಗಳ ಹಿಂದೆಯಷ್ಟೇ ವೃಕ್ಷ ಮಾತೆಯವರು ಬೆಂಗಳೂರಿನ ತಮ್ಮ ನಿವಾಸದಲ್ಲಿ ಜಾರಿ ಬಿದ್ದು ಗಾಯಗೊಂಡು ಚಿಕಿತ್ಸೆ ಪಡೆದಿದ್ದರು. ನಂತರ ದತ್ತು ಪುತ್ರ ಬಳ್ಳೂರು ಗ್ರಾಮದ ಉಮೇಶ್ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು. ಸೆ. 26 ರಂದು ಉಸಿರಾಟದಲ್ಲಿ ಏರು ಪೇರಾಗಿದ್ದರಿಂದ ಬೇಲೂರಿನ ಸರ್ಕಾರಿ ಆಸ್ಪತ್ರೆ ವೈದ್ಯರು ಚಿಕಿತ್ಸೆ ನೀಡಿದ್ದರು. ಆದರೆ ಸೋಮವಾರ ರಾತ್ರಿ ಉಸಿರಾಟದಲ್ಲಿ ತೀವ್ರ ಏರು ಪೇರಾಗಿದ್ದರಿಂದ ಮಂಗಳವಾರ ಬೆಂಗಳೂರಿಗೆ ತೆರಳಿದರು.
- Advertisement -
Web Stories