ಮಡಿಕೇರಿ: ಶಬರಿಮಲೆ (Sabarimala) ಅಯ್ಯಪ್ಪ ಭಕ್ತರಿದ್ದ (Ayyappa Devotees) ಕಾರು (Car) ಅಪಘಾತವಾದ (Accident) ಪರಿಣಾಮ ಓರ್ವ ಸಾವನ್ನಪ್ಪಿದ್ದು, ಮೂವರು ಗಂಭೀರ ಗಾಯಗೊಂಡ ಘಟನೆ ಅಂಗಮಾಲಿ (Angamaly) ಪೆರುಂಬುರ್ ಬಳಿ ನಡೆದಿದೆ.
ಶಬರಿಮಲೆಯಿಂದ ಹಿಂದಿರುಗುತ್ತಿದ್ದ ವೇಳೆ ಅಪಘಾತ ಸಂಭವಿಸಿದ್ದು, ಕೊಡಗು (Kodagu) ಜಿಲ್ಲೆ ಕುಶಾಲನಗರದ ಹಾರಂಗಿ ದೊಡ್ಡತ್ತೂರು ನಿವಾಸಿ ರಾಮ ಎಂಬವರ ಪುತ್ರ ಚಂದ್ರ ಘಟನೆಯಲ್ಲಿ ಮೃತಪಟ್ಟಿದ್ದಾರೆ. ಇನ್ನೂ ಈ ಘಟನೆಯಲ್ಲಿ ಕಾರಿನಲ್ಲಿದ್ದ ಮೂವರು ಗಂಭೀರ ಗಾಯಗೊಂಡಿದ್ದಾರೆ. ಇದನ್ನೂ ಓದಿ: ಶಸ್ತ್ರಚಿಕಿತ್ಸೆ ವೇಳೆ ವೃದ್ಧೆಯ ತಲೆಗೆ 3 ಬಾರಿ ಪಂಚ್ ಕೊಟ್ಟ ವೈದ್ಯ- ಮುಂದೇನಾಯ್ತು?
- Advertisement
ಗಾಯಾಳುಗಳನ್ನು ಕುಶಾಲನಗರದ ಲಿಂಗಂ, ಹರೀಶ್ ಹಾಗೂ ಸಂತೋಷ್ ಎಂದು ಗುರುತಿಸಲಾಗಿದೆ. ಗಾಯಾಳುಗಳಿಗೆ ಪೆರಂಬೂರಿನ ರಾಜಗಿರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ವ್ಯಕ್ತಿಯ ಕಾಲಿಗೆ ಸರಪಳಿ ಹಾಕಿ ಜೀತಕ್ಕಿಟ್ಟ ಮಾಲೀಕ- ಕಾರ್ಮಿಕನ ರಕ್ಷಣೆ
- Advertisement