ಉಡುಪಿ: ಶಬರಿಮಲೆ ಅಯ್ಯಪ್ಪನ ಸನ್ನಿಧಿಗೆ ಮಹಿಳೆಯರ ಪ್ರವೇಶ ವಿಚಾರ ಸಾಕಷ್ಟು ವಿವಾದ ಸೃಷ್ಟಿಮಾಡಿದೆ. ಸುಪ್ರೀಂ ಕೋರ್ಟ್ ಆದೇಶನ ನಂತರ ವೃತಾಚರಣೆ ಮಾಡದ ಹೋರಾಟಗಾರ್ತಿಯರು ಸನ್ನಿಧಾನಕ್ಕೆ ತೆರಳಲು ಯತ್ನಿಸಿ ಹೈಡ್ರಾಮ ಸೃಷ್ಟಿಸಿದ್ದರು. ಇದೀಗ ಅಯ್ಯಪ್ಪ ಭಕ್ತರು ಐದು ರಾಜ್ಯಗಳಲ್ಲಿ ಲಕ್ಷ ಜನ ಸೇರಿಸಿ ತಮ್ಮ ಅಭಿಪ್ರಾಯವನ್ನು ಹೊರಹಾಕಲಿದ್ದಾರೆ. ಈ ಮೂಲಕ ದೇಶಾದ್ಯಂತ ಶಬರಿಗಿರಿ ಮೂವ್‍ಮೆಂಟ್ ಶುರುವಾಗಿದೆ.
ವೀರ ಮಣಿಕಂಠನ ಸನ್ನಿಧಾನ ಶಬರಿಮಲೆ ಈಗ ವಿವಾದದ ಕೇಂದ್ರ ಬಿಂದುವಾಗಿದೆ. ಸುಪ್ರೀಂಕೋರ್ಟ್ ಆದೇಶ ಕೊಟ್ರೂ ಮಹಿಳೆಯರು ದೇಗುಲ ಪ್ರವೇಶಿಸಲು ಆಗ್ತಿಲ್ಲ. ಈ ನಡುವೆ ಹರಿಹರ ಸುತನ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶ ತಡೆಯಲು ಅಯ್ಯಪ್ಪನ ಭಕ್ತರು ದೇಶಾದ್ಯಂತ ಜನಾಂದೋಲನ ಮಾಡಲು ಹೊರಟಿದ್ದಾರೆ. ಕರ್ನಾಟಕದ ಜನಾಂದೋಲನಾ ಜಾಥಾ ಮತ್ತು ಸಭೆ ಕೃಷ್ಣನೂರು ಉಡುಪಿಯಲ್ಲಿ ನಡೆಯಲಿದ್ದು, ನವೆಂಬರ್ 1ಕ್ಕೆ ಡೇಟ್ ಫಿಕ್ಸ್ ಆಗಿದೆ. ಈ ಸಂಬಂಧ ಉಡುಪಿಯ ಕೃಷ್ಣಮಠದಲ್ಲಿ ಪೂರ್ವಭಾವಿ ಸಭೆ ನಡೀತು. ಇದ್ರಲ್ಲಿ ಕಾರ್ಯಕ್ರಮಗಳ ಬಗ್ಗೆ ಚರ್ಚಿಸಿ, ಅಯ್ಯಪ್ಪ ಭಕ್ತರ ಬಳಿ ಅಭಿಪ್ರಾಯ ಪಡೆಯಲಾಯ್ತು.
Advertisement
Advertisement
ನವೆಂಬರ್ 1ಕ್ಕೆ ಉಡುಪಿಯ ಎಂಜಿಎಂ ಮೈದಾನದಲ್ಲಿ ನಡೆಯಲಿರುವ ಸಾಂಪ್ರದಾಯಿಕ ರೀತಿಯ ಪ್ರತಿಭಟನೆಯಲ್ಲಿ ಒಂದು ಲಕ್ಷ ಜನ ಸೇರುವ ನಿರೀಕ್ಷೆಯಿದೆ. ಜನಾಂದೋಲನ ಮತ್ತು ಕಾನೂನಾತ್ಮಕವಾಗಿ ಯಾವ ರೀತಿ ಹೋರಾಟ ಮಾಡಬೇಕು ಎಂಬ ಬಗ್ಗೆಯೂ ನಿರ್ಧಾರವಾಗಲಿದೆ. ಈ ಜನಾಂದೋಲನ ಜಾಥಾದಲ್ಲಿ ಮಹಿಳೆಯರು ಮತ್ತು ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಇದೇ ರೀತಿಯ ಜನಾಂದೋಲನ ದೆಹಲಿ, ಮಹಾರಾಷ್ಟ್ರ, ತಮಿಳುನಾಡು, ಆಂಧ್ರಪ್ರದೇಶದಲ್ಲೂ ನಡೆಯಲಿದೆ ಅಂತ ಅಯ್ಯಪ್ಪ ಸೇವಾ ಸಮಾಜಂ ಸಂಚಾಲಕ ಗಿರೀಶ್ ಪಬ್ಲಿಕ್ ಟಿವಿ ಜೊತೆ ಮಾತನಾಡುತ್ತಾ ತಿಳಿಸಿದ್ದಾರೆ.
Advertisement
Advertisement
ಉಡುಪಿ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರದಿಂದ ತಲಾ 20 ಸಾವಿರ ಜನರಂತೆ ಒಂದು ಲಕ್ಷ ಜನ ಸೇರುವ ಸಾಧ್ಯತೆಯಿದೆ. ಮೈದಾನದಲ್ಲಿ ಅಯ್ಯಪ್ಪನಿಗೆ ಸಹಸ್ರ ಅರ್ಚನೆ ನಡೆಯಲಿದ್ದು ಇದಕ್ಕಾಗಿ 10 ಲಕ್ಷ ರೂಪಾಯಿಯನ್ನು ಭಕ್ತರೇ ದೇಣಿಗೆ ರೂಪದಲ್ಲಿ ಸಂಗ್ರಹಿಸುವ ನಿರ್ಧಾರ ಮಾಡಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv