ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲಕ್ಕೆ ತೆರಳಿದ್ದ ವೇಳೆ, ಕೇರಳದ ದೇವಸ್ವಂ ಸಚಿವ ಕೆ. ರಾಧಾಕೃಷ್ಣನ್ ಅವರು ದೇವರಿಗೆ ಮತ್ತು ಹಿಂದೂ ಸಂಪ್ರದಾಯಗಳಿಗೆ ಅವಮಾನ ಮಾಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.
ವಾರ್ಷಿಕ ಯಾತ್ರೆಗೆ ಶಬರಿಮಲೆ ದೇಗುಲದ ಭಾಗಿಲ ತೆರೆದ ದಿನ ಸಚಿವ ರಾಧಾಕೃಷ್ಣನ್ ಅಯ್ಯಪ್ಪ ದೇಗುಲಕ್ಕೆ ತೆರಳಿದ್ದರು. ಈ ವೇಳೆ ಅವರು ಪೂಜೆ ವೇಳೆ ದೇವರಿಗೆ ಕೈಮುಗಿದಿರಲಿಲ್ಲ. ಜೊತೆಗೆ ಬಳಿಕ ಅರ್ಚಕರು ತೀರ್ಥ ನೀಡಿದಾಗ ಅದನ್ನು ಸೇವಿಸುವ ಬದಲು ಕೈಗೆ ಒರೆಸಿಕೊಂಡು ಸುಮ್ಮನಾಗಿದ್ದಾರೆ. ಈ ಕುರಿತ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಜೊತೆಗೆ ಸಚಿವರ ವರ್ತನೆ ಬಗ್ಗೆ ಟೀಕೆ ವ್ಯಕ್ತವಾಗುತ್ತಿದೆ. ಇದನ್ನೂ ಓದಿ: ಅತ್ಯಾಚಾರಿಗಳ ಲೈಂಗಿಕ ಶಕ್ತಿಗೆ ಕತ್ತರಿ ಶಿಕ್ಷೆ
Advertisement
Advertisement
ಈ ಕುರಿತಾಗಿ ಪ್ರತಿಕ್ರಿಯಿಸಿರುವ ಅವರು, ನಾನು ದಿನವೂ ನನ್ನ ತಾಯಿಗೆ ಕೈ ಮುಗಿಯುವುದಿಲ್ಲ ಎಂದ ಮಾತ್ರಕ್ಕೆ ನನಗೆ ನನ್ನ ತಾಯಿಯ ಮೇಲೆ ಗೌರವವಿಲ್ಲ ಎಂದರ್ಥವಲ್ಲ. ನಾನು ಕೆಲವೊಂದು ಪದಾರ್ಥಗಳನ್ನು ಸೇವಿಸುವುದಿಲ್ಲ. ಭಕ್ತಿಯ ಹೆಸರಿನಲ್ಲಿ ಯಾರೇ ಒತ್ತಾಯಿಸಿದರೂ ನಾನು ಅದನ್ನು (ತೀರ್ಥ) ಸೇವಿಸುವುದಿಲ್ಲ ಎಂದು ತಮ್ಮನ್ನು ಸಮರ್ಥಿಸಿಕೊಂಡಿದ್ದಾರೆ. ಇದನ್ನೂ ಓದಿ: ಸೋನಿಯಾ ಮಗಳು, ಉಪೇಂದ್ರ ಪತ್ನಿ ಹೆಸರು ಪ್ರಿಯಾಂಕಾ ಆದ್ರೆ ಖರ್ಗೆ ಪುತ್ರ ಯಾವ ಪ್ರಿಯಾಂಕ: ಪ್ರತಾಪಸಿಂಹ ಪ್ರಶ್ನೆ