– ಸರ್ಕಾರದ ಖಜಾನೆ ಖಾಲಿಯಾಗಿದೆ ಎಂದು ಆಕ್ರೋಶ
ಮಂಡ್ಯ: ಮೈಶುಗರ್‌ನ ಹೊಸ ಕಾರ್ಖಾನೆ ಸ್ಥಾಪಿಸುವುದಾಗಿ ರಾಜ್ಯ ಸರ್ಕಾರ ಬಜೆಟ್‌ನಲ್ಲಿ ಘೋಷಿಸಿತ್ತು, ಈವರೆಗೆ ಯಾವುದೇ ಪ್ರಗತಿಯಾಗಿಲ್ಲ. ಅಲ್ಲದೇ 2 ವರ್ಷಗಳ ಹಿಂದೆಯೇ ಮಂಡ್ಯಕ್ಕೆ ಘೋಷಿಸಿದ್ದ ಎಥೆನಾಲ್ ಘಟಕವೂ (Ethanol Unit) ಆರಂಭವಾಗಿಲ್ಲ ಎಂದು ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದೆ ಸುಮಲತಾ (Sumalatha) ಅವರ ಆಪ್ತ ಇಂಡುವಾಳು ಸಚ್ಚಿದಾನಂದ ಟೀಕಿಸಿದ್ದಾರೆ.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೊತ್ತತ್ತಿ ಗ್ರಾಮದಲ್ಲಿ ನಡೆದ ಬಿಜೆಪಿ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳನ್ನು (Guarantee Scheme) ಜಾರಿಗೊಳಿಸಿದ ನಂತರ ರಾಜ್ಯ ಸರ್ಕಾರದ (Karnataka Govt) ಖಜಾನೆ ಖಾಲಿಯಾಗಿದೆ. ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಕ್ರಮಗಳು ನಡೆಯುತ್ತಿಲ್ಲ. ಅಭಿವೃದ್ಧಿ ಕಾಮಗಾರಿಗಳಿಗೆ ಹಾಗೂ ಶಾಸಕರಿಗೂ ಅನುದಾನವನ್ನು ನೀಡುತ್ತಿಲ್ಲ. ಇದರಿಂದ ಶಾಸಕರು ಕೈಕಟ್ಟಿ ಕೂರುವಂತಾಗಿದೆ ಅಸಮಾಧಾನ ಹೊರಹಾಕಿದ್ದಾರೆ.
ಗ್ಯಾರಂಟಿ ಯೋಜನೆಗಳಾದರೂ ಸಮರ್ಪಕವಾಗಿ ಅನುಷ್ಠಾನ ಆಗುತ್ತಿವೆಯೇ ಎಂದು ನೋಡಿದರೆ, ಅದೂ ಸರಿಯಾಗಿ ಆಗುತ್ತಿಲ್ಲ. ಹೆಣ್ಣುಮಕ್ಕಳಿಗೆ ಪ್ರತಿ ತಿಂಗಳು ಸರಿಯಾಗಿ ಗೃಹಲಕ್ಷ್ಮಿ ಯೋಜನೆ ಹಣ ಹೋಗುತ್ತಿಲ್ಲ. ಅನ್ನಭಾಗ್ಯ ಯೋಜನೆಯ ಅಕ್ಕಿ ಹಣವೂ ಜನರ ಕೈ ಸೇರುತ್ತಿಲ್ಲ. ನಿರುದ್ಯೋಗಿಗಳಿಗೆ ಉದ್ಯೋಗ ಕೊಡುವ ಕೆಲಸವಾಗುತ್ತಿಲ್ಲ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಹಕ್ಕಿಯಂತೆ ಹಾರಬಹುದು, ಆಕಾಶದಿಂದ ನಂದಿಬೆಟ್ಟ ನೋಡಬಹುದು – ನಂದಿಗಿರಿಧಾಮದಲ್ಲಿ ಪ್ಯಾರಾಗ್ಲೈಡಿಂಗ್ ಆಕರ್ಷಣೆ
ಮೈಶುಗರ್‌ನ ಹೊಸ ಕಾರ್ಖಾನೆ ಸ್ಥಾಪಿಸುವುದಾಗಿ ರಾಜ್ಯ ಸರ್ಕಾರ ಬಜೆಟ್‌ನಲ್ಲಿ ಘೋಷಿಸಿತ್ತು. ಆದರೆ, ಈ ವಿಚಾರದಲ್ಲಿ ಈವರೆಗೆ ಯಾವುದೇ ಪ್ರಗತಿಯಾಗಿಲ್ಲ. ಹೊಸ ಕಾರ್ಖಾನೆ ಸ್ಥಾಪಿಸುವುದಾಗಿ ಹೇಳಿದ್ದ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಈಗ ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ಮಾತನಾಡುತ್ತಿದ್ದಾರೆ ಎಂದು ಕಿಡಿ ಕಾರಿದ್ದಾರೆ. ಇದನ್ನೂ ಓದಿ: Mumbai | ಲಘು ಮೋಟರ್ ವಾಹನಗಳಿಗೆ ಟೋಲ್ ಫ್ರೀ ಪ್ರವೇಶ: ಸಿಎಂ ಶಿಂಧೆ
ಕನಿಷ್ಠ ಪಕ್ಷ ಮೂಲಸೌಕರ್ಯಗಳು ಕಲ್ಪಿಸಿಕೊಡಲು ಸರ್ಕಾರ ಹಾಗೂ ಶಾಸಕರಿಂದ ಸಾಧ್ಯವಾಗುತ್ತಿಲ್ಲ. ಮಂಡ್ಯ ಜಿಲ್ಲೆಯಲ್ಲಿ ಎಲ್ಲ ರಸ್ತೆಗಳು ಸಂಪೂರ್ಣ ಹಾಳಾಗಿವೆ. ಗುಂಡಿ ಬಿದ್ದ ರಸ್ತೆಗಳಲ್ಲಿ ಸಂಚರಿಸುವುದು ದುಸ್ತರವಾಗಿದೆ. ಪತ್ರಿಕೆಗಳಲ್ಲೂ ಈ ಬಗ್ಗೆ ನಿರಂತರವಾಗಿ ವರದಿಗಳು ಬರುತ್ತಿವೆ. ಇವುಗಳನ್ನು ನೋಡಿಯಾದರೂ ಸರ್ಕಾರ ಮತ್ತು ಶಾಸಕರು ರಸ್ತೆಗಳ ಅಭಿವೃದ್ಧಿಗೆ ಮುಂದಾಗಬೇಕೆಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: BBK 11:’ಬಿಗ್ ಬಾಸ್’ಗೆ ನೀವು ನೀಡಿರುವ ಕೊಡುಗೆಯ ಬಗ್ಗೆ ಹೆಮ್ಮೆಯಿದೆ: ಸಾನ್ವಿ ಸುದೀಪ್