Advertisements

ಶಿವರಾಜ್ ಕುಮಾರ್ ಹೊಸ ಚಿತ್ರಕ್ಕೆ ‘ಅವನೇ ಶ್ರೀಮನ್ನಾರಾಯಣ’ನ ನಿರ್ದೇಶಕ

ವನೇ ಶ್ರೀಮನ್ನಾರಾಯಣ ನಿರ್ದೇಶಕ ಸಚಿನ್ ರವಿ ಇದೀಗ ಮತ್ತೊಂದು ಸಿನಿಮಾವನ್ನು ಕೈಗೆತ್ತಿಕೊಂಡಿದ್ದಾರೆ. ಈ ಬಾರಿ ಅವರು ಸ್ಪೈ ಥ್ರಿಲ್ಲರ್ ಕಥೆಯೊಂದನ್ನು ಸಿನಿಮಾ ಮಾಡುತ್ತಿದ್ದು, ಈ ಚಿತ್ರಕ್ಕೆ ಶಿವರಾಜ್ ಕುಮಾರ್ ಅವರನ್ನು ನಾಯಕನನ್ನಾಗಿ ಆಯ್ಕೆ ಮಾಡಿಕೊಂಡಿದ್ದಾರೆ. ಇದೊಂದು ಪಕ್ಕಾ ಆಕ್ಷನ್ ಸಿನಿಮಾವಾಗಿರಲಿದೆ ಎಂದಿದ್ದಾರೆ ಸಚಿನ್. ಇದನ್ನೂ ಓದಿ:  ಫ್ಯಾಟ್‌ ಸರ್ಜರಿ ಎಫೆಕ್ಟ್‌ – ಕಿರುತೆರೆ ನಟಿ ಚೇತನಾ ರಾಜ್‌ ಸಾವು

Advertisements

ರಕ್ಷಿತ್ ಶೆಟ್ಟಿ  ನಟನೆಯ ಅವನೇ ಶ್ರೀಮನ್ನಾರಾಯಣ ಸಿನಿಮಾಗೆ ಕೇವಲ ನಿರ್ದೇಶಕರಾಗಿದ್ದ ಸಚಿನ್, ಈ ಹೊಸ ಸಿನಿಮಾಗೆ ನಿರ್ದೇಶನದ ಜೊತೆಗೆ ನಿರ್ಮಾಣ ಕೂಡ ಮಾಡುತ್ತಿದ್ದಾರಂತೆ. ತಮ್ಮದೇ ಹೋಮ್ ಬ್ಯಾನರ್ ಜೊತೆಗೆ ಕಾರ್ಪೊರೇಟ್ ಕಂಪೆನಿಯೊಂದು ಇವರ ಜೊತೆ ಕೈ ಜೋಡಿಸುತ್ತಿರುವುದು ವಿಶೇಷ. ಈ ಹಿಂದೆ ಹೊಸ ಚಿತ್ರಕ್ಕೆ ಅಶ್ವತ್ಥಾಮ ಎಂದು ಹೆಸರಿಡಲು ಹೊರಟಿತ್ತು, ಇದೀಗ ಆ ಶೀರ್ಷಿಕೆ ಕೂಡ ಬದಲಾಗಲಿದೆ.

Advertisements

ಟೈಟಲ್ ಬದಲಾದರೂ, ಅಶ್ವತ್ಥಾಮನ ಆಶಯ ಮತ್ತು ಅವನ ಹಿನ್ನೆಲೆಯನ್ನೇ ಕಥೆಯಲ್ಲಿ ಬಳಸಿಕೊಂಡಿದ್ದಾರಂತೆ ನಿರ್ದೇಶಕರು. ಅಶ್ವತ್ಥಾಮನು ಹಾದು ಬಂದ ದಾರಿಯೇ ಸಿನಿಮಾದ ಕಥಾ ನಾಯಕನ ಕಥೆಗೆ ಸ್ಪೂರ್ತಿ ಕೂಡ ಎಂದಿದ್ದಾರೆ. ಹಾಗಾಗಿ ಸಿನಿಮಾದ ಕಥೆಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದಿದ್ದಾರೆ. ಇದನ್ನೂ ಓದಿ: ರಾಖಿ ಸಾವಂತ್ ಹೊಸ ಬಾಯ್‌ಫ್ರೆಂಡ್‌ ಮೈಸೂರಿನವನು : ಗೆಳೆಯ ಕೊಟ್ಟ ದುಬಾರಿ ಉಡುಗೊರೆ

Advertisements

ಸದ್ಯ ಶಿವರಾಜ್ ಕುಮಾರ್ ವೇದ ಸಿನಿಮಾದ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದರೆ, ಈ ಸಿನಿಮಾದ ಶೂಟಿಂಗ್ ಮುಗಿಯುತ್ತಿದ್ದಂತೆಯೇ ಯೋಗರಾಜ್ ಭಟ್ ನಿರ್ದೇಶನದ ಚಿತ್ರದಲ್ಲಿ ಶಿವಣ್ಣ ನಟಿಸಲಿದ್ದಾರೆ. ಈ ಮಧ್ಯೆ ಸಚಿನ್ ಅವರ ಸಿನಿಮಾಗೂ ಡೇಟ್ಸ್ ಕೊಟ್ಟಿದ್ದಾರೆ ಎನ್ನಲಾಗುತ್ತಿದೆ. ಅಂದುಕೊಂಡಂತೆ ಆದರೆ, ಸೆಪ್ಟಂಬರ್ ಹೊತ್ತಿಗೆ ಸಚಿನ್ ಸಿನಿಮಾ ಸೆಟ್ಟೇರಲಿದೆ.

Advertisements
Exit mobile version