ಬೀದರ್: ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ ಪ್ರಕರಣದ ಪ್ರಮುಖ ಆರೋಪಿ, ಪ್ರಿಯಾಂಕ್ ಖರ್ಗೆ ಆಪ್ತ ರಾಜು ಕಪನೂರು ಅವರನ್ನು ಸಿಐಡಿ ಕಸ್ಟಡಿಗೆ ವಹಿಸಿ ಕೋರ್ಟ್ ಆದೇಶ ಹೊರಡಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜು ಕಪನೂರು, ನಂದಕುಮಾರ್ ನಾಗಭುಜಂಗೇ, ಘೋರ್ಕನಾಥ ಸಜ್ಜನಾ, ಸತೀಶ್ ಅವರಿಗೆ ನೋಟಿಸ್ ನೀಡಲಾಗಿತ್ತು. ಎಲ್ಲರೂ ವಿಚಾರಣೆಗೆ ಹಾಜರಾಗಿದ್ದರು. ಆರೋಪಿ ರಾಜು ಮತ್ತು ಗ್ಯಾಂಗ್ ಅನ್ನು ಸಿಐಡಿಯ ಡಿವೈಎಸ್‌ಪಿ ಸುಲೇಮಾನ್ ತೀವ್ರ ವಿಚಾರಣೆಗೆ ಒಳಪಡಿಸಿದರು. ಬಳಿಕ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದರು.
- Advertisement 2-
ಬಳಿಕ ಬೀದರ್ ಜಿಲ್ಲಾ ಸತ್ರ ನ್ಯಾಯಾಲಯದಲ್ಲಿ ನ್ಯಾಯಾಧೀಶರ ಮುಂದೆ ಆರೋಪಿಗಳನ್ನು ಹಾಜರುಪಡಿಸಲಾಯಿತು. ಹೆಚ್ಚಿನ ವಿಚಾರಣೆಗಾಗಿ ಆರೋಪಿಗಳನ್ನ 5 ದಿನ ಸಿಐಡಿ ವಶಕ್ಕೆ ನೀಡಿ ಕೋರ್ಟ್ ಆದೇಶ ಹೊರಡಿಸಿತು.
- Advertisement 3-
ಬೀದರ್ ಜಿಲ್ಲಾ ಸತ್ರ ನ್ಯಾಯಾಲಯ ಐದು ದಿನಗಳ ಸಿಐಡಿ ಕಸ್ಟಡಿಗೆ ನೀಡಿದ ಹಿನ್ನೆಲೆ, ಸಿಐಡಿ ತನಿಖೆಗಾಗಿ ಬೆಂಗಳೂರಿಗೆ ರಾಜು ಕಪನೂರು ಮತ್ತು ಗ್ಯಾಂಗ್‌ನ್ನು ಕರೆತರಲಾಯಿತು.