ಅಂದು ನಕ್ಕಿದ್ದೆ, ನೀವಿಂದು ನನ್ನ ಹೃದಯ ಮುಟ್ಟಿದ್ದೀರಿ – ತನ್ನ ದಾಖಲೆ ಮುರಿದ ಕೊಹ್ಲಿ ಅಭಿನಂದಿಸಿದ ಕ್ರಿಕೆಟ್‌ ದೇವರು

Public TV
2 Min Read
Virat Kohli And Sachin Tendulkar

ಮುಂಬೈ: ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್‌ನಲ್ಲಿ 50ನೇ ಶತಕ ಸಿಡಿಸುವ ಮೂಲಕ ತನ್ನ ದಾಖಲೆಯನ್ನು ಮುರಿದ ಕೊಹ್ಲಿಗೆ (Virat Kohli) ಲೆಜೆಂಡ್‌ ಸಚಿನ್‌ ತೆಂಡೂಲ್ಕರ್‌ (Sachin Tendulkar) ಅಭಿನಂದಿಸಿದ್ದಾರೆ.

ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ (Wankhede Stadium) ನಡೆದ ಪಂದ್ಯದಲ್ಲಿ, ಕೊಹ್ಲಿ ತಮ್ಮ ವೃತ್ತಿಬದುಕಿನ 80ನೇ ಶತಕವನ್ನು ದಾಖಲಿಸಿದ್ದಾರೆ. ಈ ಕುರಿತು ಮಾತನಾಡಿದ ಸಚಿನ್‌, ಕೊಹ್ಲಿಗೆ ಭಾವುಕ ನುಡಿಗಳ ಮೂಲಕ ಧನ್ಯವಾದ ಅರ್ಪಿಸಿದ್ದಾರೆ. ಅಂದು ನಾನು ನಿಮ್ಮನ್ನು ಮೊದಲ ಬಾರಿಗೆ ಡ್ರೆಸ್ಸಿಂಗ್ ರೂಮ್‌ನಲ್ಲಿ ಭೇಟಿಯಾದಾಗ, ನನ್ನ ಪಾದಗಳನ್ನು ಮುಟ್ಟುವಂತೆ ಇತರ ತಂಡದ ಸದಸ್ಯರು ನಿಮ್ಮನ್ನ ತಮಾಷೆ ಮಾಡಿದ್ದರು. ಆ ದಿನ ನನಗೆ ನಗು ತಡೆಯಲಾಗಲಿಲ್ಲ. ಆದ್ರೆ ಅತೀ ಶೀಘ್ರದಲ್ಲೇ, ನಿಮ್ಮ ಉತ್ಸಾಹ ಮತ್ತು ಕೌಶಲ್ಯದಿಂದ ನೀವು ನನ್ನ ಹೃದಯ ಮುಟ್ಟಿದ್ದೀರಿ. ಆ ಚಿಕ್ಕ ಹುಡುಗ ‘ವಿರಾಟ್’ ಆಟಗಾರನಾಗಿ ಬೆಳೆದಿದ್ದಕ್ಕೆ ನನಗೆ ತುಂಬಾ ಖುಷಿಯಾಗಿದೆ ಎಂದು ಭಾವುಕವಾಗಿ ಮಾತನಾಡಿದ್ದಾರೆ.

Virat Kohli breaks Sachin Tendulkars record of most runs in a single World Cup edition

ವಾಂಖೆಡೆ ಕ್ರೀಡಾಂಗಣದಲ್ಲಿ ಕೊಹ್ಲಿ ತಮ್ಮ ಏಕದಿನ ಕ್ರಿಕೆಟ್‌ನ 50ನೇ ಶತಕ ಸಿಡಿಸಿ ಸಂಭ್ರಮಿಸುತ್ತಿದ್ದಂತೆ ಅಭಿಮಾನಿಗಳು ಈ ದೃಶ್ಯಗಳನ್ನು ತಮ್ಮ ಮೊಬೈಲ್‌ನಲ್ಲಿ ಸೆರೆಹಿಡಿದರು. ಇದೇ ವೇಳೆ ಕೊಹ್ಲಿ ಸಚಿನ್‌ ತೆಂಡೂಲ್ಕರ್‌ ಅವರಿಗೆ ಸ್ಟೇಡಿಯಂನಿಂದಲೇ ಶಿರಬಾಗಿ ನಮಸ್ಕರಿದರು. ಪ್ರತಿಯಾಗಿ ಸಚಿನ್‌ ತೆಂಡೂಲ್ಕರ್‌ ಅವರು ಎದ್ದುನಿಂತು ಚಪ್ಪಾಳೆ ಬಾರಿಸುವ ಮೂಲಕ ಗೌರವ ತೋರಿದರು. ಇದನ್ನೂ ಓದಿ: 50th Century: ಶತಕ ಸಂಭ್ರಮದಲ್ಲಿ ಅನುಷ್ಕಾಗೆ ಫ್ಲೈಯಿಂಗ್‌ ಕಿಸ್‌ ಕೊಟ್ಟ ಕೊಹ್ಲಿ..!

Virat Kohl 3

2018ರ ಆಗಸ್ಟ್‌ 18ರಂದು ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ (International Cricket) ಎಂಟ್ರಿ ಕೊಟ್ಟ ಕೊಹ್ಲಿ ಇದೀಗ ಕ್ರಿಕೆಟ್‌ ಲೋಕದಲ್ಲಿ ಇತಿಹಾಸ ಪುಟ ಸೇರಿದ್ದಾರೆ. ಇತ್ತೀಚೆಗೆ ದಕ್ಷಿಣ ಆಫ್ರಿಕಾ ವಿರುದ್ಧ ಕೋಲ್ಕತ್ತಾದ ಈಡನ್‌ ಗಾರ್ಡನ್ಸ್‌ ಮೈದಾನದಲ್ಲಿ ತಮ್ಮ 35ನೇ ವರ್ಷದ ಹುಟ್ಟುಹಬ್ಬದ ದಿನದಂದೇ ಶತಕ ಸಿಡಿಸಿ ಸಚಿನ್‌ ತೆಂಡೂಲ್ಕರ್‌ ಅವರ 49 ಶತಕಗಳ ದಾಖಲೆಯನ್ನ ಸರಿಗಟ್ಟಿದ್ದರು. ಸಚಿನ್‌ ತೆಂಡೂಲ್ಕರ್‌ 452 ಇನ್ನಿಂಗ್ಸ್‌ಗಳಲ್ಲಿ 49 ಶತಕಗಳನ್ನು ಸಿಡಿಸಿದ್ದರೆ, ಕೊಹ್ಲಿ ಕೇವಲ 277 ಇನ್ನಿಂಗ್ಸ್‌ಗಳಲ್ಲೇ ಈ ಸಾಧನೆ ಮಾಡಿ ಸೈ ಎನಿಸಿಕೊಂಡಿದ್ದರು. ಬುಧವಾರ (ನ.15) ನ್ಯೂಜಿಲೆಂಡ್‌ ವಿರುದ್ಧದ ಪಂದ್ಯದಲ್ಲಿ 106 ಎಸೆತಗಳಲ್ಲಿ 8 ಬೌಂಡರಿ 1 ಸಿಕ್ಸರ್‌ನೊಂದಿಗೆ ಶತಕ ಸಿಡಿಸಿ ವಿಶ್ವದಾಖಲೆ ಬರೆದಿದ್ದಾರೆ. ಒಟ್ಟು 113 ಎಸೆತಗಳನ್ನು ಎದುರಿಸಿದ ಕೊಹ್ಲಿ 117 ರನ್‌ (2 ಸಿಕ್ಸರ್‌, 9 ಬೌಂಡರಿ) ಬಾರಿಸಿ ಔಟಾದರು.

ಕಿವೀಸ್‌ ವಿರುದ್ಧ ಶತಕ ಸಿಡಿಸುವ ಮೂಲಕ ವಿರಾಟ್‌ ಕೊಹ್ಲಿ ತಮ್ಮ ವೃತ್ತಿಜೀವನದ 80ನೇ ಶತಕ ಪೂರೈಸಿದ್ದಾರೆ. ಈ ಪೈಕಿ ಟೆಸ್ಟ್‌ ಕ್ರಿಕೆಟ್‌ನಲ್ಲಿ 29, ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ 1 ಹಾಗೂ ಏಕದಿನ ಕ್ರಿಕೆಟ್‌ನಲ್ಲಿ ಒಟ್ಟು 50 ಶತಕ ಸಿಡಿಸಿದ್ದಾರೆ. ಇನ್ನೂ 49 ಶತಕಗಳನ್ನು ಸಿಡಿಸಿರುವ ಸಚಿನ್‌ ತೆಂಡೂಲ್ಕರ್‌ 2ನೇ ಸ್ಥಾನಕ್ಕೆ ಕುಸಿದಿದ್ದಾರೆ. ಇದನ್ನೂ ಓದಿ: World Cup Semifinal: ಕ್ರಿಕೆಟ್‌ ದೇವರ ಶತಕಗಳ ದಾಖಲೆ ನುಚ್ಚುನೂರು ಮಾಡಿದ ಕಿಂಗ್‌ ಕೊಹ್ಲಿ

Share This Article