ಮುಂಬೈ: ಉದ್ಯಮಿ ಮುಕೇಶ್ ಅಂಬಾನಿ (Mukesh Ambani) ಅವರ ಪುತ್ರ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ (Anant Ambani-Radhika Merchant Wedding) ಅವರ ಅದ್ಧೂರಿ ವಿವಾಹಕ್ಕೆ ಗಣ್ಯರು, ತಾರಾಗಣ ಸಾಕ್ಷಿಯಾಗಿದೆ. ಇಲ್ಲಿನ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆಯುತ್ತಿರುವ ವಿವಾಹ ಸಮಾರಂಭಕ್ಕೆ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ (Sachin Tendulkar), ಡಬ್ಲ್ಯೂಡಬ್ಲ್ಯೂಇ ಸ್ಟಾರ್ ಜಾನ್ ಸೀನಾ ಆಗಮಿಸಿದ್ದಾರೆ.
ಕುಟುಂಬದವರೊಂದಿಗೆ ತೆಂಡೂಲ್ಕರ್ ವಿವಾಹ ಸಮಾರಂಭಕ್ಕೆ ಆಗಮಿಸಿದ್ದಾರೆ. ಭಾರೀ ಮಳೆಯ ನಡುವೆ ಮಾಜಿ ಕ್ರಿಕೆಟಿಗ ಕಾರಿನಿಂದ ಇಳಿಯುತ್ತಿರುವ ದೃಶ್ಯ ಕ್ಯಾಮೆರಾಗಳ ಕಣ್ಣಲ್ಲಿ ಸೆರೆಯಾಗಿದೆ. ಮಧ್ಯರಾತ್ರಿಯ ಸುಮಾರಿಗೆ, ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ ಮದುವೆಯಲ್ಲಿ ಪಾಲ್ಗೊಳ್ಳಲು ಮುಂಬೈಗೆ ಬಂದಿಳಿದಿದ್ದರು. ಇದನ್ನೂ ಓದಿ: ಅಂಬಾನಿ ಮಗನ ಮದುವೆಯಲ್ಲಿ ರಾಕಿ ಭಾಯ್- ಯಶ್ ಗೆಟಪ್‌ಗೆ ಫ್ಯಾನ್ಸ್ ಫಿದಾ
ಅನಂತ್-ರಾಧಿಕಾ ವಿವಾಹ ಸಮಾರಂಭದಲ್ಲಿ ಪಾಲ್ಗೊಳ್ಳಲು ಜಾನ್ ಸೀನಾ (John Cena) ಕೂಡ ಮುಂಬೈಗೆ ಶುಕ್ರವಾರ ಬಂದಿಳಿದರು. ಆ ಮೂಲಕ ಭಾರತದ ಮೇಲಿನ ತಮ್ಮ ಪ್ರೀತಿಯನ್ನು ಡಬ್ಲ್ಯೂಡಬ್ಲ್ಯೂಇ ಸ್ಟಾರ್ ವ್ಯಕ್ತಪಡಿಸಿದ್ದಾರೆ.
ಅಲ್ಲದೇ, ಬಿಹಾರ್ ಮಾಜಿ ಸಿಎಂ ಲಾಲು ಪ್ರಸಾದ್ ಯಾದವ್ ಕುಟುಂಬ, ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್, ಕನ್ನಡದ ಸ್ಟಾರ್ ನಟ ಯಶ್-ರಾಧಿಕಾ ಪಂಡಿತ್ ದಂಪತಿ ಸೇರಿದಂತೆ ಅನೇಕ ಗಣ್ಯರು, ಸೆಲೆಬ್ರಿಟಿಗಳು ಅಂಬಾನಿ ಪುತ್ರನಿಗೆ ಶುಭಕೋರಲು ಆಗಮಿಸಿದ್ದಾರೆ. ಇದನ್ನೂ ಓದಿ: ನನ್ನ ಭೇಟಿಗೆ ಬರುವವರು ಕಡ್ಡಾಯವಾಗಿ ಆಧಾರ್ ತನ್ನಿ: ಕಂಗನಾ ರಣಾವತ್!