ಕೋಲ್ಕತ್ತಾ: ಕ್ರಿಕೆಟ್ (Cricket) ದಂತಕತೆ ಸಚಿನ್ ತೆಂಡೂಲ್ಕರ್ (Sachin Tendulkar) ನನ್ನ ಹೀರೋ, ಎಂದಿಗೂ ನಾನು ಅವರಿಗೆ ಸಮನಲ್ಲ ಎಂದು ಟೀಮ್ ಇಂಡಿಯಾ ಆಟಗಾರ ವಿರಾಟ್ ಕೊಹ್ಲಿ (Virat Kohli) ಹೇಳಿದ್ದಾರೆ. ಕೊಹ್ಲಿ ಅಂತರಾಷ್ಟ್ರೀಯ ಕ್ರಿಕೆಟ್‍ನಲ್ಲಿ 49ನೇ ಶತಕವನ್ನು ಸಿಡಿಸಿ ಸಚಿನ್ ದಾಖಲೆ ಸರಿಗಟ್ಟಿದ ಬಳಿಕ ಈ ರೀತಿ ಹೇಳಿಕೊಂಡಿದ್ದಾರೆ.
ನಾನು ತೆಂಡೂಲ್ಕರ್ ಬ್ಯಾಟಿಂಗ್ ನೋಡುತ್ತಾ ಬೆಳೆದಿದ್ದೇನೆ. ಅವರ ಬ್ಯಾಟಿಂಗ್ ಶೈಲಿ ಅತ್ಯುತ್ತಮವಾದದ್ದು. ನಾನು ಆ ಮಟ್ಟಕ್ಕೆ ಏರಲು ಸಾಧ್ಯವಿಲ್ಲ. ಏನೇ ಆದರೂ ಸಚಿನ್ ನನ್ನ ನಾಯಕರಾಗಿರುತ್ತಾರೆ ಎಂದು ಕೊಹ್ಲಿ ಹೇಳಿದ್ದಾರೆ.
Advertisement
Advertisement
ನಾನು ಎಲ್ಲಿಂದ ಬಂದಿದ್ದೇನೆ ಎಂದು ನನಗೆ ತಿಳಿದಿದೆ ಮತ್ತು ಇಲ್ಲಿ ನಿಂತು ಸಚಿನ್ ಅವರಿಂದ ಮೆಚ್ಚುಗೆಯನ್ನು ಪಡೆಯುವುದು ನನಗೆ ತುಂಬಾ ಖುಷಿಕೊಟ್ಟಿದೆ ಎಂದಿದ್ದಾರೆ.
Advertisement
Advertisement
ಭಾನುವಾರ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ 49ನೇ ಶತಕವನ್ನು ಕೊಹ್ಲಿ ಸಿಡಿಸಿದ್ದಾರೆ. ಅಂಗಳದಲ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶನ ಮಾಡಿದ ಅವರು 119 ಎಸೆತಗಳಲ್ಲಿ ಶತಕ ಸಿಡಿಸಿದ್ದು, ಸಚಿನ್ ದಾಖಲೆ ಮೀರಿಸಲು ಒಂದೇ ಸೆಂಚುರಿ ಬಾಕಿಯಿದೆ. ಇದು ಅವರಿಗೆ ವಿಶೇಷ ದಿನವಾಗಿತ್ತು, ಕೇವಲ ದಾಖಲೆಯಿಂದಾಗಿ ಮಾತ್ರವಲ್ಲದೆ ಅವರ ಜನ್ಮದಿನ ಕೂಡ ಆಗಿತ್ತು. ಸಚಿನ್ ತೆಂಡೂಲ್ಕರ್ 452 ಇನ್ನಿಂಗ್ಸ್‌ಗಳಲ್ಲಿ 49 ಶತಕಗಳನ್ನು ಸಿಡಿಸಿ ಸಾಧನೆ ಮಾಡಿದರೆ, ವಿರಾಟ್ ಕೊಹ್ಲಿ ಕೇವಲ 277 ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದ್ದಾರೆ.