ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ (Karnataka Maharshi Valmiki Scheduled Tribe Development Corporation Ltd) 187 ಕೋಟಿ ರೂ.ಹಗರಣಕ್ಕೆ ಸಂಬಂಧಿಸಿ ರಾಜ್ಯದ ಯುವಜನ ಸೇವೆ, ಕ್ರೀಡೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರಾದ ಬಿ.ನಾಗೇಂದ್ರ (Nagendra) ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಯುವ ಮೋರ್ಚಾ (BJP Yuva Morcha) ವತಿಯಿಂದ ನಾಳೆ ಬೆಳಗ್ಗೆ ರಾಜ್ಯಾದ್ಯಂತ ಬಿಜೆಪಿ ರಸ್ತೆ ತಡೆ ಜಾಥಾ ಇಟ್ಟುಕೊಂಡಿದೆ. ಇದನ್ನೂ ಓದಿ: 94 ಕೋಟಿ ಹಗರಣ – ಸಿಬಿಐಗೆ ದೂರು ನೀಡಿ ಮೂವರನ್ನು ಅಮಾನತುಗೊಳಿಸಿದ ಯೂನಿಯನ್ ಬ್ಯಾಂಕ್
ಸಚಿವ ನಾಗೇಂದ್ರ ಅವರ ಮೌಖಿಕ ಸೂಚನೆ ಮೇರೆಗೆ ಈ ಬೃಹತ್ ಹಗರಣ (Scam) ನಡೆದಿದೆ. ಅಲ್ಲದೆ ನಿಗಮದ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಅವರ ಡೆತ್ ನೋಟಿನಲ್ಲೂ ಸಚಿವರ ಹೆಸರನ್ನು ಉಲ್ಲೇಖಿಸಿದ್ದಾರೆ. ಆದರೂ, ರಾಜ್ಯ ಸರಕಾರ ಅವರ ರಕ್ಷಣೆಗೆ ನಿಂತಿದೆ ಎಂದು ಹೇಳಿದೆ. ಇದನ್ನೂ ಓದಿ: ಡೆತ್‌ನೋಟ್‌ನಲ್ಲಿರುವ ನಾಗರಾಜ್ ಜೊತೆ ನಾಗೇಂದ್ರಗೆ ವ್ಯವಹಾರ ಇದೆ: ಸಿಟಿ ರವಿಯಿಂದ ಫೋಟೋ ರಿಲೀಸ್
ಮುಖ್ಯಮಂತ್ರಿಗಳು ಕೂಡಲೇ ಈ ಬ್ರಹ್ಮಾಂಡ ಭ್ರಷ್ಟಾಚಾರ ಮಾಡಿದ ಸಚಿವರ ನ್ನು ಸಂಪುಟದಿಂದ ವಜಾ ಮಾಡಬೇಕೆಂದು ಯುವಾ ಮೋರ್ಚಾ ಆಗ್ರಹಿಸಿದೆ.