Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಫೆ. 13ರಂದು ಹಾವೇರಿಯಲ್ಲಿ ಬೃಹತ್ ಸಾಧನಾ ಸಮಾವೇಶ – ಒಂದು ಲಕ್ಷಕ್ಕೂ ಅಧಿಕ ಹಕ್ಕು ಪತ್ರ ವಿತರಣೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಫೆ. 13ರಂದು ಹಾವೇರಿಯಲ್ಲಿ ಬೃಹತ್ ಸಾಧನಾ ಸಮಾವೇಶ – ಒಂದು ಲಕ್ಷಕ್ಕೂ ಅಧಿಕ ಹಕ್ಕು ಪತ್ರ ವಿತರಣೆ

Districts

ಫೆ. 13ರಂದು ಹಾವೇರಿಯಲ್ಲಿ ಬೃಹತ್ ಸಾಧನಾ ಸಮಾವೇಶ – ಒಂದು ಲಕ್ಷಕ್ಕೂ ಅಧಿಕ ಹಕ್ಕು ಪತ್ರ ವಿತರಣೆ

Public TV
Last updated: January 18, 2026 6:42 pm
Public TV
Share
4 Min Read
Haveri Sadhana Samavesha Shivananda Patil
SHARE

– ಸ್ಥಳ ಪರಿಶೀಲನೆ ನಡೆಸಿದ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್

ಹಾವೇರಿ: ರಾಜ್ಯ ಸರ್ಕಾರ ಒಂದು ಸಾವಿರ ದಿನಗಳನ್ನು ಪೂರ್ಣಗೊಳಿಸುವ ಹಿನ್ನೆಲೆಯಲ್ಲಿ ಹಾವೇರಿಯಲ್ಲಿ (Haveri) ಫೆ. 13ರಂದು ಬೃಹತ್ ಸಾಧನಾ ಸಮಾವೇಶ (Sadhana Samavesha) ಆಯೋಜನೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಅಂದು ಹಕ್ಕು ಪತ್ರ ಸೇರಿದಂತೆ ಹಲವು ಸವಲತ್ತುಗಳನ್ನು ವಿತರಣೆ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್ (Shivananda Patil) ಹೇಳಿದರು.

ಸಮಾವೇಶ ಆಯೋಜನೆ ಮಾಡಲಿರುವ ಅಜ್ಜನ ಗುಡಿ ಪ್ರದೇಶದ ಸ್ಥಳಕ್ಕೆ ಭಾನುವಾರ ಸಂಜೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾವೇರಿ ಜಿಲ್ಲೆಯೂ ಸೇರಿದಂತೆ ಹಲವು ಜಿಲ್ಲೆಗಳ ಫಲಾನುಭವಿಗಳಿಗೆ ಒಂದು ಲಕ್ಷಕ್ಕೂ ಅಧಿಕ ಕಂದಾಯ ಗ್ರಾಮ ಹಕ್ಕು ಪತ್ರ ವಿತರಣೆ ಮಾಡಲಾಗುವುದು. ಪೋಡಿ ಮುಕ್ತ ಅಭಿಯಾನ ಕೂಡಾ ನಡೆದಿದ್ದು, ಇತರ ಹಲವು ಸವಲತ್ತುಗಳನ್ನು ವಿತರಣೆ ಮಾಡಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ದೆಹಲಿ, ಹರಿಯಾಣದಲ್ಲಿ ಪ್ರತ್ಯೇಕ ಅಪಘಾತ – ಮೂವರು ಸಾವು, 20ಕ್ಕೂ ಅಧಿಕ ಮಂದಿ ಗಾಯ

ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಜನರಿಗೆ ಕೊಟ್ಟ ಮಾತಿನಂತೆ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ಎಲ್ಲ ಗ್ಯಾರಂಟಿಗಳನ್ನು ಈಡೇರಿಸಿದೆ. ಹಕ್ಕು ಪತ್ರ ವಿತರಣೆ ಮಾಡುವುದಾಗಿ ಪಕ್ಷದ ರಾಷ್ಟ್ರೀಯ ನಾಯಕರಾದ ರಾಹುಲ್ ಗಾಂಧಿ ಭರವಸೆ ನೀಡಿದ್ದರು. ವಿಜಯನಗರದಲ್ಲಿ ಆಯೋಜಿಸಿದ್ದ ಸಮಾವೇಶದಲ್ಲಿ ಮೊದಲ ಹಂತದಲ್ಲಿ ಹಕ್ಕು ಪತ್ರ ವಿತರಣೆ ಮಾಡಲಾಗಿದೆ. ಹಾವೇರಿ ಸಮಾವೇಶದಲ್ಲಿ ಸುಮಾರು ಲಕ್ಷಕ್ಕೂ ಅಧಿಕ ಹಕ್ಕು ಪತ್ರ ವಿತರಣೆ ಮಾಡಲಾಗುತ್ತಿದೆ ಎಂದು ಹೇಳಿದರು. ಇದನ್ನೂ ಓದಿ: ಬೆಳೆ ವಿಮೆ ಯೋಜನೆ ಅನುಷ್ಠಾನದಲ್ಲಿ ರಾಜ್ಯ ಕೃಷಿ ಇಲಾಖೆಗೆ ದ್ವಿತೀಯ ಸ್ಥಾನ

Haveri Sadhana Samavesha Shivananda Patil 1

ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ ಸುಸಜ್ಜಿತ ಮೆಡಿಕಲ್ ಕಾಲೇಜು ಆಗಿದೆ. ಕುಡಿಯುವ ನೀರಿನ ಸಮಸ್ಯೆ ಪರಿಹಾರ ಉದ್ದೇಶದ ಯೋಜನೆಗಳು ಅನುಷ್ಠಾನ ಹಂತಕ್ಕೆ ಬಂದಿವೆ. ಹಾವೇರಿಯನ್ನು ಮಾದರಿ ಜಿಲ್ಲೆ ಮಾಡುವ ಕನಸು ಹೊಂದಿದ್ದು, ಈ ನಿಟ್ಟಿನಲ್ಲಿ ಎಲ್ಲರ ಸಹಕಾರದಿಂದ ಕೆಲಸ ಮಾಡುತ್ತಿದ್ದೇವೆ. ಹಾವೇರಿ ಸಮಾವೇಶವನ್ನೂ ಐತಿಹಾಸಿಕವಾಗಿ ಮಾಡಲಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: ಅಬಕಾರಿ ಇಲಾಖೆ ಕರ್ಮಕಾಂಡ | ಸನ್ನದು ಪಡೆಯಲು 2.30 ಕೋಟಿ ಬೇಡಿಕೆ ಆರೋಪದ ಆಡಿಯೋ ವೈರಲ್ – ಹೆಚ್‌ಟಿ ಮಂಜು ದೂರು

ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ನಾಯಕರಾದ ರಾಹುಲ್ ಗಾಂಧಿ, ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಸೇರಿದಂತೆ ಅನೇಕ ಮುಖಂಡರು, ಸಚಿವ ಸಂಪುಟದ ಸಹೋದ್ಯೋಗಿಗಳು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದು ವಿವರಿಸಿದರು. ಇದನ್ನೂ ಓದಿ: ಜೆಡಿಎಸ್‌ ಪಾಳಯದಲ್ಲಿ ಕ್ಷಿಪ್ರ ಕ್ರಾಂತಿ – ಜಿಟಿಡಿ ಕ್ಷೇತ್ರದಿಂದ ಸಾರಾ ಮಹೇಶ್‌ ಕಣಕ್ಕಿಳಿಸಲು ಪ್ಲ್ಯಾನ್‌!

ಸುಮಾರು ಒಂದು ಲಕ್ಷಕ್ಕೂ ಅಧಿಕ ಜನ ಸೇರುವ ನಿರೀಕ್ಷೆ ಇದೆ. ಅಕ್ಕಪಕ್ಕದ ಜಿಲ್ಲೆಗಳಿಂದಲೂ ಜನ ಆಗಮಿಸಲಿದ್ದು, ಎಲ್ಲಿಯೂ ಸಮಸ್ಯೆಯಾಗದಂತೆ ಕಾರ್ಯಕ್ರಮ ಆಯೋಜನೆ ಮಾಡಲು ರೂಪುರೇಷೆ ಸಿದ್ಧಪಡಿಸಲಾಗುತ್ತಿದೆ. ವಾಹನಗಳ ನಿಲುಗಡೆ, ಗಣ್ಯರ ವಾಹನಗಳ ನಿಲುಗಡೆ, ಹೆಲಿಪ್ಯಾಡ್‌ಗಳ ನಿರ್ಮಾಣಕ್ಕೆ ಈಗಾಗಲೇ ಯೋಜನೆ ರೂಪಿಸಲಾಗಿದೆ ಎಂದರು. ಇದನ್ನೂ ಓದಿ: ಸಿದ್ರಾಮಯ್ಯಗೂ ಟ್ರಾಫಿಕ್‌ ಬಿಸಿ – ವಾಹನಗಳ ತೆರವಿಗೆ ಹರಸಾಹಸ; ಬೈಕ್ ಸವಾರನಿಗೆ ಒದಿಯಲು ಮುಂದಾದ ಎಸ್ಪಿ!

ವೇದಿಕೆ ನಿರ್ಮಾಣದ ಬಗ್ಗೆ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಡಾ. ವಿಜಯ ಮಹಾಂತೇಶ ದಾನಮ್ಮನವರ್, ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜನೆ ಮಾಡಿದ ಮಾದರಿಯಲ್ಲೇ ಸಾಧನಾ ಸಮಾವೇಶದ ಸಿದ್ಧತೆ ಮಾಡಲಾಗುವುದು. ವಾಹನಗಳ ನಿಲುಗಡೆಗೆ ವೇದಿಕೆ ಸಮೀಪದಲ್ಲೇ ವ್ಯವಸ್ಥೆ ಮಾಡಲಾಗುವುದು. ವೈದ್ಯಕೀಯ ಕಾಲೇಜು ಆವರಣದಲ್ಲಿ ಹೆಲಿಪ್ಯಾಡ್ ನಿರ್ಮಿಸಿದರೆ ಸೂಕ್ತವಾಗಲಿದೆ ಎಂದು ತಿಳಿಸಿದರು. ಇದನ್ನೂ ಓದಿ: ಕರೂರು ಕಾಲ್ತುಳಿತ – ಮತ್ತೆ ವಿಚಾರಣೆಗೆ ಹಾಜರಾಗುವಂತೆ ಸಿಬಿಐನಿಂದ ವಿಜಯ್‌ಗೆ ಸಮನ್ಸ್

ವಿಜಯನಗರದಲ್ಲಿ ಆಯೋಜಿಸಿದ್ದ ಸಮಾವೇಶದ ಮಾದರಿಯಲ್ಲೇ ವೇದಿಕೆಯನ್ನು ನಿರ್ಮಿಸಬೇಕು. ಗಣ್ಯರಿಗೆ ಸೂಕ್ತ ಭದ್ರತೆ ವ್ಯವಸ್ಥೆ ಮಾಡಬೇಕು. ಸಮಾವೇಶದಲ್ಲಿ ಭಾಗವಹಿಸುವ ಜನರಿಗೂ ಯಾವುದೇ ಸಮಸ್ಯೆಯಾಗಬಾರದು ಎಂದು ಸಚಿವರು ನಿರ್ದೇಶನ ನೀಡಿದರು. ಇದನ್ನೂ ಓದಿ: `ಧಮ್ಕಿʼ ರಾಜೀವ್‌ ಬಂಧಿಸದಂತೆ ಡಿಕೆಶಿ, ಮುನಿಯಪ್ಪ ಪೊಲೀಸರ ಮೇಲೆ ಒತ್ತಡ ಹಾಕಿದ್ದಾರೆ – ಶಾಸಕ ರವಿಕುಮಾರ್

ಎಎಸ್ಪಿ ಲಕ್ಷ್ಮಣ ಶಿರೋಳ್ಕರ್ ಅವರು ವಾಹನ ನಿಲುಗಡೆ ಸ್ಥಳದ ಬಗ್ಗೆ ಸಚಿವರಿಗೆ ಮಾಹಿತಿ ನೀಡಿದರು. ವೇದಿಕೆಯನ್ನು ವ್ಯವಸ್ಥಿತವಾಗಿ ನಿರ್ಮಿಸಬೇಕು. ಅತಿ ಗಣ್ಯರು, ಗಣ್ಯರಿಗೆ ಆಸನದ ವ್ಯವಸ್ಥೆಯಲ್ಲಿ ಲೋಪಗಳಾಗಬಾರದು. ಕಾರ್ಯಕ್ರಮ ಅಚ್ಚುಕಟ್ಟಾಗಿ ನಡೆಯಬೇಕು. ಹಕ್ಕುಪತ್ರ ಸೇರಿದಂತೆ ಸರ್ಕಾರದ ವಿವಿಧ ಯೋಜನೆಗಳ ಸವಲತ್ತುಗಳ ವಿತರಣೆಯಲ್ಲಿ ಗೊಂದಲಗಳಾಗದಂತೆ ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ಸಚಿವರು ಸೂಚನೆ ನೀಡಿದರು. ಇದನ್ನೂ ಓದಿ: ಮೆಟ್ರೋ ಪ್ರಯಾಣಿಕರಿಗೆ ಗುಡ್‌ನ್ಯೂಸ್ – ನಾಳೆ ಬೆಂಗಳೂರಿಗೆ ತಲುಪಲಿದೆ ಹಳದಿ ಮಾರ್ಗದ 8ನೇ ರೈಲು

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಂಜೀವಕುಮಾರ್ ನೀರಲಗಿ, ವಿಧಾನಸಭೆ ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ, ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ, ಶಾಸಕ ಬಸವರಾಜ ಶಿವಣ್ಣವರ್, ಹೆಸ್ಕಾಂ ಅಧ್ಯಕ್ಷ ಸೈಯದ್ ಅಜ್ಜಂಪೀರ ಖಾದ್ರಿ, ಆನಂದ ಗಡ್ಡದ್ದೇವರ ಮಠ ಮತ್ತಿತರ ಮುಖಂಡರು ಉಪಸ್ಥಿತರಿದ್ದರು. ಇದನ್ನೂ ಓದಿ: ಯುಪಿ ಟೋಲ್ ಬೂತ್ ಬಳಿ ಕಾರುಗಳಿಗೆ ಡಿಕ್ಕಿ; 50 ಮೀಟರ್‌ವರೆಗೆ ಸಿಬ್ಬಂದಿ ಎಳೆದೊಯ್ದ ಟ್ರಕ್‌

TAGGED:congresshaverisadhana samaveshashivananda patilಕಾಂಗ್ರೆಸ್ಶಿವಾನಂದ ಪಾಟೀಲ್ಸಾಧನಾ ಸಮಾವೇಶಹಾವೇರಿ
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

Vijayapura Father Kills Son
Crime

ನೋಡಲು ತನ್ನಂತೆ ಇಲ್ಲ ಎಂದು ಮಗನನ್ನೇ ಕೊಲೆಗೈದ ತಂದೆ

Public TV
By Public TV
8 minutes ago
Samrat Choudhary Nitish Kumar
Latest

ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಆಯ್ಕೆ

Public TV
By Public TV
51 minutes ago
Whitefield Mother Kills Daughter And Commits Suicide
Bengaluru City

17 ವರ್ಷದ ಮಗಳನ್ನು ಕೊಂದು ತಾಯಿ ಆತ್ಮಹತ್ಯೆ

Public TV
By Public TV
51 minutes ago
Nitish Kumar Bihar
Latest

ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್‌ ಕುಮಾರ್‌ ರಾಜೀನಾಮೆ – ನಾಳೆ ಹೊಸ ಸಿಎಂ ಪ್ರಮಾಣವಚನ ಸಾಧ್ಯತೆ

Public TV
By Public TV
1 hour ago
Vijayanagara Rain Papaya Crop Destroyed
Bellary

ವಿಜಯನಗರ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆ – ಪಪ್ಪಾಯ ಬೆಳೆ ಸಂಪೂರ್ಣ ನಾಶ

Public TV
By Public TV
1 hour ago
Sanju Samson 1
Cricket

ಒಡೆದ ಡಿಸ್‌ಪ್ಲೇನಲ್ಲೇ ಸೆಲ್ಫಿ ಕ್ಲಿಕ್ಕಿಸಿದ ಅಭಿಮಾನಿ – 40,000 ಮೌಲ್ಯದ ಫೋನನ್ನೇ ಗಿಫ್ಟ್‌ ಕೊಟ್ಟ ಸಂಜು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?