ಶಾರುಖ್ ಖಾನ್ ನಟನೆಯ ಪಠಾಣ್ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ಕೇಸರಿ ಬಿಕಿನಿ ಹಾಕಿದರು ಎನ್ನುವ ಕಾರಣಕ್ಕಾಗಿ ಮೂರು ದಿನದಿಂದ ವಿವಾದ ಭುಗಿಲೆದ್ದಿದೆ. ಪಠಾಣ್ ಸಿನಿಮಾವನ್ನು ಬಾಯ್ಕಾಟ್ ಮಾಡಬೇಕು ಎಂದು ಹಲವರು ಸೋಷಿಯಲ್ ಮೀಡಿಯಾದಲ್ಲಿ ಕ್ಯಾಂಪೇನ್ ಶುರು ಮಾಡಿದ್ದಾರೆ. ಶಾರುಖ್ ಖಾನ್ ಬೇರೆ ಧರ್ಮದವರು ಎನ್ನುವ ಕಾರಣಕ್ಕಾಗಿ ಈ ರೀತಿ ಮಾಡುತ್ತಿದ್ದಾರೆ ಎನ್ನುವ ಆರೋಪ ಕೂಡ ಇದೆ. ಕೆಲವರು ಶಾರುಖ್ ಪರವಾಗಿ ನಿಂತಿದ್ದು, ಅಕ್ಷಯ್ ಕುಮಾರ್ ನಟನೆಯ ಸಿನಿಮಾವೊಂದನ್ನು ಈ ಪ್ರಕರಣದಲ್ಲಿ ಎಳೆತಂದಿದ್ದಾರೆ.
ಅಕ್ಷಯ್ ಕುಮಾರ್ ಮತ್ತು ಕತ್ರೀನಾ ಕಾಂಬಿನೇಷನ್ ನ ‘ದೆ ದನಾ ದನ್’ ಸಿನಿಮಾದಲ್ಲೂ ಕತ್ರೀನಾ ಕೇಸರಿ ಬಣ್ಣದ ತುಂಡುಡುಗೆ ತೊಟ್ಟು ಸೆಕ್ಸಿಯಾಗಿ ಡಾನ್ಸ್ ಮಾಡಿದ್ದಾರೆ. ಆಗ ಮೌನವಹಿಸಿದವರು ಈಗೇಕೆ ಕೂಗಾಡುತ್ತಿದ್ದಾರೆ ಎಂದು ಹಲವರು ಕಾಮೆಂಟ್ ಮಾಡಿದ್ದಾರೆ. ಅಕ್ಷಯ್ ಕುಮಾರ್ ಏನೇ ಮಾಡಿದರೂ ಅದು ಸರೀನಾ? ಎಂದು ಹಲವರು ಪ್ರಶ್ನೆ ಮಾಡಿದ್ದಾರೆ. ದೇ ದನಾ ದನ್ ಸಿನಿಮಾದ ಫೋಟೋವನ್ನೂ ಸಾಕ್ಷಿಯಾಗಿ ನೀಡಿದ್ದಾರೆ. ಹಾಗಾಗಿ ಕೇಸರಿ ಬಿಕಿನಿಗೆ ಸಂಬಂಧಿಸಿದಂತೆ ಅಕ್ಷಯ್ ಕುಮಾರ್ ನನ್ನು ಎಳೆತರಲಾಗಿದೆ. ಇದನ್ನೂ ಓದಿ: ಆಲ್ವಿನ್ ಹೆನ್ರಿ ನಿರ್ದೇಶನದ ‘ಕ್ರಿಸ್ಟಿ’ ಚಿತ್ರದ ಫಸ್ಟ್ ಲುಕ್ ರಿಲೀಸ್
ಪಠಾಣ್ ಸಿನಿಮಾದ ಬೇಷರಂ ಹಾಡಿನಲ್ಲಿ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಕೇಸರಿ ಬಿಕಿನಿ ಹಾಕಿದ್ದಾರೆ ಎನ್ನುವ ವಿವಾದ ತಾರಕಕ್ಕೇರಿದೆ. ಇದು ಬೇಕು ಅಂತಾನೇ ಮಾಡಿದ ಹುನ್ನಾರ ಎಂದು ಹಿಂದೂಪರ ಸಂಘಟನೆಗಳು ಆರೋಪಿಸುತ್ತಿವೆ. ಕೆಲ ಪ್ರಗತಿಪರ ಹೋರಾಟಗಾರರ ಜೊತೆ ದೀಪಿಕಾ ಪಡುಕೋಣೆ ಗುರುತಿಸಿಕೊಂಡಿದ್ದಾರೆ ಎಂದು ಜೆಎನ್‌ಯು ಹೋರಾಟದಲ್ಲಿ ದೀಪಿಕಾ ಭಾಗಿಯಾಗಿದ್ದ ಫೋಟೋವನ್ನು ಟ್ರೋಲ್ ಮಾಡಲಾಗುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪ್ರಶಾಂತ್ ಸಂಬರಗಿ ಕೂಡ ಪ್ರತಿಕ್ರಿಯೆ ನೀಡಿದ್ದಾರೆ.
ಬಿಗ್ ಬಾಸ್ ಮನೆಯಿಂದ ಈ ವಾರ ಹೊರ ಬಂದಿರುವ ಪ್ರಶಾಂತ್ ಸಂಬರಗಿ ಪಠಾಣ್ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ಹಾಕಿರುವ ಕೇಸರಿ ಬಿಕಿನಿ ಬಗ್ಗೆ ತಕರಾರು ಎತ್ತಿದ್ದಾರೆ. ಬಾಲಿವುಡ್ ಚಿತ್ರೋದ್ಯಮ ಹಿಂದೂಗಳ ಭಾವನೆಗೆ ಹೀಗೆ ನೋವು ಮಾಡುತ್ತಿರುವುದು ಹೊಸದೇನೂ ಅಲ್ಲ. ಬಾಲಿವುಡ್ ನಟರ ಮದುವೆಗಳನ್ನು ನೋಡಿದರೆ ಲವ್ ಜಿಹಾದ್ ಬಗ್ಗೆ ಅನುಮಾನ ಮೂಡುತ್ತದೆ ಎಂದು ಅವರು ಮಾತನಾಡಿದ್ದಾರೆ. ದೀಪಿಕಾ ಅವರಿಗೆ ಬೇಕು ಅಂತಾನೇ ಕೇಸರಿ ಬಿಕಿನಿ ಹಾಕಿಸಲಾಗಿದೆ ಎಂದು ಅವರು ಆರೋಪ ಮಾಡಿದ್ದಾರೆ.