ಬೆಂಗಳೂರು: ರಾಷ್ಟ್ರಧ್ವಜಕ್ಕೆ ಅವಮಾನ ಎಸಗಿದ ದೇಶದ್ರೋಹಿ ಕಲ್ಲಡ್ಕ ಪ್ರಭಾಕರ ಭಟ್ಟನನ್ನು ಯಾವಾಗ ಬಂಧಿಸುತ್ತೀರಿ ಎಂದು ಬಿಜೆಪಿ ಸರ್ಕಾರವನ್ನು ಕಾಂಗ್ರೆಸ್ ಟ್ವೀಟ್ ಮೂಲಕ ಪ್ರಶ್ನಿಸಿದೆ.
Advertisement
ಟ್ವೀಟ್‍ನಲ್ಲಿ ಏನಿದೆ:
ಮಾನ್ಯ ಬೊಮ್ಮಾಯಿ ಅವರೇ, ದೇಶ ವಿರೋಧಿಗಳನ್ನು ಸಹಿಸುವುದಿಲ್ಲ ಎಂದು ಹೇಳಿಕೆ ಕೊಟ್ಟು ವೀರಾವೇಶ ಮೆರೆದಿದ್ದೀರಿ, ಸಂತೋಷ. ರಾಷ್ಟ್ರಧ್ವಜಕ್ಕೆ ಅವಮಾನ ಎಸಗಿದ ದೇಶದ್ರೋಹಿ ಕಲ್ಲಡ್ಕ ಪ್ರಭಾಕರ ಭಟ್ಟನನ್ನು ಯಾವಾಗ ಬಂಧಿಸುತ್ತೀರಿ? ಆತನನ್ನು ಜೈಲಿಗಟ್ಟಿ ನಿಮ್ಮ ಹೇಳಿಕೆಗೆ ಬದ್ಧತೆ ತೋರಿಸಿ. ಹಾಗೆಯೇ ಈಶ್ವರಪ್ಪರ ರಾಜೀನಾಮೆ ಯಾವಾಗ ಪಡೆಯುವಿರಿ?. ಇದನ್ನೂ ಓದಿ: ಕುರಾನ್, ಬೈಬಲ್ ಎಲ್ಲರನ್ನು ಕೊಲ್ಲು ಎಂದು ಹೇಳುತ್ತದೆ: ಕಲ್ಲಡ್ಕ ಪ್ರಭಾಕರ ಭಟ್
Advertisement
ಬಿಜೆಪಿ ಸರ್ಕಾರದ ಸಾಧನೆಗಳು, ಸಿನೆಮಾ ಪ್ರಚಾರ ಮಾಡುವುದು, ಸಿನೆಮಾ ನೋಡುವುದು, ಸಿನೆಮಾ ಮಾಡುವುದು!. ಕೃಷಿ ಇಲಾಖೆಯಲ್ಲಿ ಜ್ವಲಂತ ಸಮಸ್ಯೆಗಳಿವೆ, ರೈತರ ಸಂಕಷ್ಟ ಹಲವಾರಿವೆ, ರಸಗೊಬ್ಬರ ಅಭಾವವಿದೆ. ಆದರೆ ಕೃಷಿ ಸಚಿವರು ನಟನೆಯಲ್ಲಿ ಬ್ಯುಸಿಯಾಗಿದ್ದಾರೆ!. ಬಿ.ಸಿ ಪಾಟೀಲ್ ಅವರೇ, ರೈತರಿಗೂ ನಿಮ್ಮ ಕಾಲ್‍ಶೀಟ್ ಬೇಕಿತ್ತು, ಯಾವಾಗ ಕೊಡುವಿರಿ?.
Advertisement
ಮಾನ್ಯ @BSBommai ಅವರೇ, ದೇಶ ವಿರೋಧಿಗಳನ್ನು ಸಹಿಸುವುದಿಲ್ಲ ಎಂದು ಹೇಳಿಕೆ ಕೊಟ್ಟು ವೀರಾವೇಶ ಮೆರೆದಿದ್ದೀರಿ, ಸಂತೋಷ.
ರಾಷ್ಟ್ರಧ್ವಜಕ್ಕೆ ಅವಮಾನ ಎಸಗಿದ ದೇಶದ್ರೋಹಿ ಕಲ್ಲಡ್ಕ ಪ್ರಭಾಕರ ಭಟ್ಟನನ್ನು ಯಾವಾಗ ಬಂಧಿಸುತ್ತೀರಿ?
ಆತನನ್ನು ಜೈಲಿಗಟ್ಟಿ ನಿಮ್ಮ ಹೇಳಿಕೆಗೆ ಬದ್ಧತೆ ತೋರಿಸಿ.
ಹಾಗೆಯೇ ಈಶ್ವರಪ್ಪರ ರಾಜೀನಾಮೆ ಯಾವಾಗ ಪಡೆಯುವಿರಿ?
— Karnataka Congress (@INCKarnataka) March 22, 2022
Advertisement
ಕೆಲದಿನಗಳ ಹಿಂದೆ ಮಂಗಳೂರಿನ ಕುತ್ತಾರು ಕೊರಗಜ್ಜ ಕ್ಷೇತ್ರದ ಆವರಣದಲ್ಲಿ ನಡೆದ ಕೊರಗಜ್ಜನ ಆದಿ ಕ್ಷೇತ್ರಕ್ಕೆ ನಮ್ಮ ನಡೆ ಕಾರ್ಯಕ್ರಮದ ಸಮಾರೋಪದಲ್ಲಿ ಮಾತನಾಡಿದ ಕಲ್ಲಡ್ಕ ಪ್ರಭಾಕರ್ ಭಟ್, ಕಾಂಗ್ರೆಸ್‍ನ ತುಷ್ಟೀಕರಣ ನೀತಿಯಿಂದ ಭಾರತದ ಧ್ವಜ ತುಂಡಾಯಿತು. ಇದು ಯಾಕೆ ಅಂತ ನಾನು ಈ ಬಗ್ಗೆ ಸ್ಪಷ್ಟೀಕರಣ ಕೊಡುತ್ತೇನೆ. ಈ ಮೂರು ಬಣ್ಣದ ಧ್ವಜ ಯಾರು ನಿರ್ಮಾಣ ಮಾಡಿದ್ದು, ಇದಕ್ಕೆ ಮೊದಲು ಯಾವ ಧ್ವಜ ಇತ್ತು ಅನ್ನೋದು ಹೆಚ್ಚಿನವರಿಗೆ ಗೊತ್ತಿಲ್ಲ. ಮೊದಲು ಬ್ರಿಟಿಷರ ಧ್ವಜ ಇತ್ತು. ಅದಕ್ಕೂ ಮೊದಲು ಹಸಿರು ನಕ್ಷತ್ರ, ಚಂದ್ರನ ಧ್ವಜ ಇತ್ತು, ಅಕಸ್ಮಾತ್ ರಾಜ್ಯಸಭೆ, ಪಾರ್ಲಿಮೆಂಟ್‍ನಲ್ಲಿ ಮೂರನೇಯವರ ಬಹುಮತ ಪಡೆದರೆ ಧ್ವಜ ಬದಲು ಮಾಡಬಹುದು. ಧ್ವಜ ಬದಲು ಮಾಡೋಕೆ ಆಗಲ್ಲ ಅಂತ ಏನೂ ಇಲ್ಲ, ಹೀಗೆಯೇ ಮುಂದುವರಿದರೆ ಹಿಂದೂ ಸಮಾಜ ಒಟ್ಟಾಗುತ್ತದೆ ಎಂದಿದ್ದರು. ಇದನ್ನೂ ಓದಿ: ಗುಜರಾತ್ ಹತ್ಯಾಕಾಂಡದ ಸಿನಿಮಾ ಬಂದ್ರೆ ಸಿದ್ದರಾಮಯ್ಯ ಊರು ಬಿಟ್ಟು ಓಡಬೇಕಾಗುತ್ತದೆ: ಕಲ್ಲಡ್ಕ ಪ್ರಭಾಕರ ಭಟ್