‘ಸುಪ್ರೀಂ ಹೀರೋ’ ಸಾಯಿಧರಮ್ ತೇಜ್ ಅಭಿನಯದ ಪ್ಯಾನ್-ಇಂಡಿಯಾ ಮಿಸ್ಟಿಕ್ ಥ್ರಿಲ್ಲರ್ ಚಿತ್ರಕ್ಕೆ ‘ವಿರೂಪಾಕ್ಷ’ ಎಂಬ ಹೆಸರಿಡಲಾಗಿದ್ದು, ಟೈಟಲ್ ಗ್ಲಿಂಪ್ಸ್ ಬಿಡುಗಡೆಯಾಗಿದೆ. ‘ವಿರೂಪಾಕ್ಷ’ ಚಿತ್ರವನ್ನು ಸುಕುಮಾರ್ ರೈಟಿಂಗ್ಸ್ ಸಹಯೋಗದಲ್ಲಿ ಶ್ರೀ ವೆಂಕಟೇಶ್ವರ ಸಿನಿ ಚಿತ್ರ ಎಲ್‌ಎಲ್‌ಪಿ ನಿರ್ಮಿಸುತ್ತಿದೆ. ಈ ಚಿತ್ರವನ್ನು ಖ್ಯಾತ ನಿರ್ಮಾಪಕ ಬಿ.ವಿ.ಎಸ್.ಎನ್. ಪ್ರಸಾದ್ ನಿರ್ಮಿಸಿದರೆ, ಬಾಪಿನೀಡು ಪ್ರಸ್ತುತಪಡಿಸಿದ್ದಾರೆ.
Advertisement
ಇದು 1990ರ ಕಾಲಘಟ್ಟದಲ್ಲಿ ನಡೆಯುವ ಕಥೆಯಾಗಿದ್ದು, ಕಾಡಿಗೆ ಅಂಟಿಕೊಂಡಿರುವ ಹಳ್ಳಿಯೊಂದರಲ್ಲಿ ಮೂಢನಂಬಿಕೆಗಳ ಹೆಸರಿನಲ್ಲಿ ನಡೆಯುವ ಕೆಲವು ವಿಲಕ್ಷಣ ಘಟನೆಗಳನ್ನು ನಾಯಕ ಹೇಗೆ ನಿಭಾಯಿಸುತ್ತಾನೆ ಎಂಬುದು ತೋರಿಸಲಾಗಿದೆ. ಇದನ್ನೂ ಓದಿ: ‘ಸೀತಾ ಸರ್ಕಲ್ ಶ್ರೀ ಕೃಷ್ಣನ್ ಮನೆ’ ಸಿನಿಮಾ ಫಸ್ಟ್ ಲುಕ್ ರಿಲೀಸ್
Advertisement
Advertisement
ಕಳೆದ ವರ್ಷ ಹೈದರಾಬಾದ್ನಲ್ಲಿ ನಡೆದ ಭೀಕರ ರಸ್ತೆ ಅಪಘಾತದಿಂದ ಚೇತರಿಸಿಕೊಂಡಿರುವ ಸಾಯಿಧರಮ್ ತೇಜ್ ಈ ಚಿತ್ರದಲ್ಲಿ ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದು, ಹೊಸ ಅವತಾರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರವನ್ನು ಕಾರ್ತಿಕ್ ದಂಡು ನಿರ್ದೇಶಿಸಿದ್ದು, ಶ್ಯಾಮ್ ದತ್ ಅವರ ಛಾಯಾಗ್ರಹಣ ಮತ್ತು ಕನ್ನಡದ ಅಜನೀಶ್ ಲೋಕನಾಥ್ ಸಂಗೀತವಿದೆ. ‘ವಿರೂಪಾಕ್ಷ’ ಚಿತ್ರವು ಏಪ್ರಿಲ್ 21, 2023ರಂದು ತೆಲುಗು, ತಮಿಳು, ಕನ್ನಡ, ಹಿಂದಿ ಮತ್ತು ಮಲಯಾಳಂ ಭಾಷೆಗಳಲ್ಲಿ ಪ್ಯಾನ್ ಇಂಡಿಯಾ ಚಿತ್ರವಾಗಿ ವಿಶ್ವದಾದ್ಯಂತ ಬಿಡುಗಡೆಯಾಗಲಿದೆ.