ನವದೆಹಲಿ: ರಿಯೋ ಒಲಿಂಪಿಕ್ಸ್ ನಲ್ಲಿ ಕಂಚಿನ ಪದಕ ಗೆದ್ದು ಭಾರತದ ಕೀರ್ತಿ ಪತಾಕೆಯನ್ನು ಹಾರಿಸಿದ್ದ ಕುಸ್ತಿಪಟು ಸಾಕ್ಷಿ ಮಲಿಕ್ ಸೇರಿದಂತೆ ಐವರು ಮಹಿಳಾ ಕುಸ್ತಿಪಟುಗಳು 2018ರ ಕಾಮನ್‍ವೆಲ್ತ್ ಕೂಟಕ್ಕೆ ಅರ್ಹತೆ ಪಡೆದುಕೊಂಡಿದ್ದಾರೆ.
ಆಸ್ಟ್ರೇಲಿಯಾದ ಗೋಲ್ಡ್ ಕೋಸ್ಟ್ ನಲ್ಲಿ 2018ರಲ್ಲಿ ನಡೆಯಲಿರೋ ಕಾಮನ್‍ವೆಲ್ತ್ ಕೂಟದಲ್ಲಿ ಭಾಗವಹಿಸುವ ಅರ್ಹತೆ ಪಡೆಯಲು ಶನಿವಾರ ಲಕ್ನೋ ಕ್ರೀಡಾಂಗಣದಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು.
Advertisement
Advertisement
62 ಕೆ.ಜಿ ವಿಭಾಗದಲ್ಲಿ ಸಾಕ್ಷಿ ಮಲಿಕ್ ಆರ್ಹತೆ ಪಡೆಯುವುದರೊಂದಿಗೆ, ವಿನಿಶ್ ಫೊಗತ್ (50ಕೆ.ಜಿ), ಬಬಿತಾ ಕುಮಾರಿ (54ಕೆ.ಜಿ), ಪೂಜಾ ಧಂಡಾ(57ಕೆ.ಜಿ), ದಿವ್ಯ ಕರಣ್ (68 ಕೆ.ಜಿ) ಮತ್ತು ಕಿರಣ್ (76ಕೆ.ಜಿ) ವಿಭಾಗಗಳಲ್ಲಿ ಸ್ಪರ್ಧಿಸುವ ಅವಕಾಶ ಪಡೆದರು.
Advertisement
ಇಲ್ಲಿನ ಭಾರತೀಯ ಕ್ರೀಡಾ ಪ್ರಾಧಿಕಾರದ ತರಬೇತಿ ಕೇಂದ್ರದಲ್ಲಿ ಒಟ್ಟು 6 ವಿಭಾಗಗಳಲ್ಲಿ ಆಯ್ಕೆ ಪ್ರಕ್ರಿಯೇ ನಡೆಯಿತು. ಇದೇ ಸಂದರ್ಭದಲ್ಲಿ ಮುಂದಿನ ವರ್ಷ ಕಿರ್ಗಿಸ್ತಾನದಲ್ಲಿ ನಡೆಯುವ ಸೀನಿಯರ್ ಏಷ್ಯನ್ ಕುಸ್ತಿ ಚಾಂಪಿಯನ್‍ಷಿಪ್‍ನಲ್ಲಿ ಸ್ಪರ್ಧಿಸಲಿರುವ ಭಾರತ 6 ಫ್ರೀಸ್ಟೈಲ್ ಕುಸ್ತಿಪಟುಗಳು ಆಯ್ಕೆಯಾಗಿದ್ದಾರೆ.
Advertisement