ಬಹುಮುಖ ಪ್ರತಿಭೆ ಪೃಥ್ವಿರಾಜ್ ಸುಕುಮಾರನ್ (Prithviraj Sukumaran) ‘ಸಲಾರ್’ (Salaar) ಸಿನಿಮಾದ ಸಕ್ಸಸ್ ನಂತರ ‘ಆಡು ಜೀವಿತಂ’ (Aadujeevitham) ಚಿತ್ರದ ಟ್ರೈಲರ್ ಮೂಲಕ ಸದ್ದು ಮಾಡ್ತಿದ್ದಾರೆ. ಟ್ರೈಲರ್ನಲ್ಲಿ ಪೃಥ್ವಿರಾಜ್ ಬೆಚ್ಚಿ ಬೀಳಿಸುವ ಅವತಾರ ಮತ್ತು ಅವರ ನಟನೆ ನೋಡಿ ಪ್ರಭಾಸ್ (Prabhas) ಭೇಷ್ ಎಂದಿದ್ದಾರೆ. ಇದನ್ನೂ ಓದಿ:‘ಗೂಗ್ಲಿ’ ನಟಿ ಕೃತಿ ಕರಬಂಧ ಮದುವೆ ಯಾವಾಗ, ಎಲ್ಲಿ?
Advertisement
‘ಆಡು ಜೀವಿತಂ’ ಇದೇ ಮಾರ್ಚ್ 28ಕ್ಕೆ ಬಹುಭಾಷೆಗಳಲ್ಲಿ ರಿಲೀಸ್ ಆಗುತ್ತಿದೆ. ಪೃಥ್ವಿರಾಜ್- ಅಮಲಾ ಪೌಲ್ (Amala Paul) ನಟಿಸಿರುವ ಈ ಚಿತ್ರದಲ್ಲಿ ಈ ಹಿಂದೆ ಎಂದೂ ಕಾಣಿಸಿಕೊಂಡಿರದ ಶೇಡ್ನಲ್ಲಿ ಪೃಥ್ವಿರಾಜ್ ನಟಿಸಿದ್ದಾರೆ. ಅವರ ಲುಕ್ ಭಯಂಕರವಾಗಿದೆ. ಸಲಾರ್ ನಟನ ನಯಾ ಲುಕ್ ನೋಡಿ ಫ್ಯಾನ್ಸ್ ಮೆಚ್ಚುಗೆ ಸೂಚಿಸಿದ್ದಾರೆ.
Advertisement
View this post on Instagram
Advertisement
ಇನ್ನೂ ಟ್ರೈಲರ್ನಲ್ಲಿ ಪೃಥ್ವಿರಾಜ್ ಅಲಿಯಾಸ್ ‘ಸಲಾರ್’ ಚಿತ್ರದ ವರದರಾಜ್ ಮನ್ನಾರ್ ಅವರ ಈ ಗೆಟಪ್ ಕಂಡು ಪ್ರಭಾಸ್ ಶಾಕ್ ಆಗಿದ್ದಾರೆ. ವರದರಾಜ ಮನ್ನಾರ್ ಪಾತ್ರ ಮಾಡಿದ್ದು, ಇದೇ ವ್ಯಕ್ತಿನಾ ಅಂತ ನಂಬಲಾಗುತ್ತಿಲ್ಲ ಎಂದಿದ್ದಾರೆ. ಪೃಥ್ವಿರಾಜ್ ಅವರಿಗೆ ಮನಪೂರ್ವಕವಾಗಿ ಶುಭಾಶಯವನ್ನೂ ಕೋರಿದ್ದಾರೆಕ್ಸಿನಿಮಾ ಬ್ಲ್ಯಾಕ್ ಬಸ್ಟರ್ ಗ್ಯಾರಂಟಿ ಎಂದು ಪ್ರಭಾಸ್ ಭವಿಷ್ಯ ನುಡಿದಿದ್ದಾರೆ.
Advertisement
ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಬ್ಲೆಸ್ಸಿ ನಿರ್ದೇಶನದ ಈ `ಆಡು ಜೀವಿತಂ’ ಚಿತ್ರದ ಕಥೆ ಇಮಿಗ್ರಟ್ಸ್ ಸುತ್ತವೇ ಸಾಗುತ್ತದೆ. ತನ್ನ ಹೊಟ್ಟೆ ಪಾಡಿಗಾಗಿ ಕೆಲಸ ಅರಸಿ ಸೌದಿ ಅರೇಬಿಯಾಗೆ ವಲಸೆ ಹೋಗುವ ನಸೀಬ್ ಮೊಹಮ್ಮದ್ ಎನ್ನುವ ಕೇರಳದ ವ್ಯಕ್ತಿ ಅಲ್ಲಿ ಅನುಭವಿಸುವ ಕಷ್ಟ, ಎದುರಿಸುವ ಸಮಸ್ಯೆ ಹೈಲೆಟ್. ಇನ್ನು ಆತನ ಪಾಸ್ಪೋರ್ಟ್ ಕಸಿದು ಆತನಿಗೆ ಕೊಡುವ ಹಿಂಸೆಗಳು ಆ ಬಿಸಿಲಿನ ಮರುಭೂಮಿಯಲ್ಲಿ ಆತ ಪಡುವ ಯಾತನೆ ಕುರಿತು ಸಾಗುವ ಕಥೆ ಇಲ್ಲಿದೆ.
View this post on Instagram
ನಿರ್ದೇಶಕ ಬ್ಲೆಸ್ಸಿ ಅವರ ಹದಿನೈದು ವರ್ಷದ ಕನಸಿನ ಕಥೆ ಇದು. ಅವರ ಕಲ್ಪನೆಯ ಪಾತ್ರದಲ್ಲಿ ವಲಸಿಗ ವ್ಯಕ್ತಿಯಾಗಿ ಹೊಸ ಲುಕ್ ಮೂಲಕ ಕಾಣಿಸಿಕೊಂಡಿರುವ ಪೃಥ್ವಿರಾಜ್ ಸುಕುಮಾರನ್, ಹಲವಾರು ವರ್ಷಗಳಿಂದ ಈ ಚಿತ್ರಕ್ಕಾಗಿ ದುಡಿದಿದ್ದಾರೆ. ಇಡೀ ಚಿತ್ರತಂಡ ಹಗಲು ರಾತ್ರಿ ಎನ್ನದೆ ಚಿತ್ರದ ಔಟ್ಪುಟ್ ಗಾಗಿ ದುಡಿದಿದೆ. ಪೃಥ್ವಿರಾಜ್ ನಿರೀಕ್ಷೆಯ ಚಿತ್ರ ಇದಾಗಿದ್ದು, ಬ್ಲೆಸ್ಸಿ ನಿರ್ದೇಶನದ ‘ಆಡುಜೀವಿತಂ’ 2008ರಲ್ಲಿ ಬೆನ್ಯಾಮಿನ್ ಬರೆದ ಅದೇ ಹೆಸರಿನ ಮಲಯಾಳಂ ಕಾದಂಬರಿ ಸಿನಿಮಾ ಇದು.
ನಜೀಬ್ ಎಂಬ ವಲಸಿಗ ಕಾರ್ಮಿಕನ ಕಥೆಯನ್ನು ಮತ್ತು ಸೌದಿ ಅರೇಬಿಯಾದ ಮರುಭೂಮಿಯಲ್ಲಿ ಅವನು ಅನುಭವಿಸುವ ದುಃಸ್ಥಿತಿ ಮತ್ತು ಅಸಹಾಯಕತೆಯ ಕಥೆ ಚಿತ್ರದ ಸಾರಾಂಶ ಎನ್ನುತ್ತಾರೆ. ಪೃಥ್ವಿರಾಜ್ ನಜೀಬ್ ಪಾತ್ರ ನಿರ್ವಹಿಸಿದ್ದಾರೆ.
ಚಿತ್ರದ ನಜೀಬ್ ಪಾತ್ರಕ್ಕಾಗಿ ಪೃಥ್ವಿರಾಜ್ ಸಾಕಷ್ಟು ದೇಹವನ್ನು ದಂಡಿಸಿದ್ದಾರೆ. ಅವರು ಸಿನುಮಾಗಾಗಿ ಸುಮಾರು 30 ಕೆಜಿ ತೂಕ ಇಳಿಸಿಕೊಂಡಿದ್ದಾರೆ ಕಳೆದ ಚಿತ್ರ ಐದು ವರ್ಷಗಳಿಂದ ತಯಾರಾಗುತ್ತಿದೆ ಎಂಬುದು ವಿಶೇಷ. ಚಿತ್ರದ ತಾಂತ್ರಿಕ ವಿಭಾಗದಲ್ಲಿ ಎ.ಆರ್.ರೆಹಮಾನ್ ಅವರ ಸಂಗೀತ, ಸುನಿಲ್ ಕೆ.ಎಸ್ ಅವರ ಕ್ಯಾಮೆರಾ ಕೈಚಳಕ, ರೆಸುಲ್ ಪೂಕುಟ್ಟಿ ಅವರ ಸೌಂಡ್ ಡಿಸೈನ್ ಮತ್ತು ಶ್ರೀಕರ್ ಪ್ರಸಾದ್ ಅವರ ಸಂಕಲನ ಕೆಲಸವಿದೆ.