ಪ್ರಭಾಸ್ ಹುಟ್ಟುಹಬ್ಬಕ್ಕೆ ‘ಸಲಾರ್’ ಸಿನಿಮಾದ ಟ್ರೈಲರ್

Public TV
2 Min Read
salaar

ಲಾರ್ ಸಿನಿಮಾದ ಟ್ರೈಲರ್ (Trailer) ಬಗ್ಗೆ ಅತೀ ನಿರೀಕ್ಷೆ ಹೊಂದಲಾಗಿದೆ. ಎರಡ್ಮೂರು ವರ್ಷಗಳಿಂದ ಚಿತ್ರ ನೋಡಲು ಅಭಿಮಾನಿಗಳು ತುದಿಗಾಲಲ್ಲಿ ನಿಂತಿದ್ದಾರೆ. ಅಂದುಕೊಂಡಂತೆ ಆಗಿದ್ದರೆ ಕಳೆದ ತಿಂಗಳಿವೆ ಈ ಸಿನಿಮಾ ರಿಲೀಸ್ ಆಗಬೇಕಿತ್ತು. ಅದು ಕೂಡ ಮುಂದೆ ಹೋಗಿದೆ. ಹೀಗಾಗಿ ಅಭಿಮಾನಿಗಳನ್ನು ಇನ್ನೂ ನಿರಾಸೆ ಮಾಡಬಾರದು ಎನ್ನುವ ಉದ್ದೇಶಕ್ಕಾಗಿ ಚಿತ್ರತಂಡ ಭರ್ಜರಿಯಾಗಿ ಟ್ರೈಲರ್ ರೆಡಿ ಮಾಡಿದೆ.

Salaar 3

ಸಲಾರ್ ಸಿನಿಮಾದ ಟ್ರೈಲರ್ ಯಾವಾಗ ಬಿಡುಗಡೆ ಆಗಲಿದೆ ಎನ್ನುವ ಪ್ರಶ್ನೆ ಎಲ್ಲರದ್ದಾಗಿತ್ತು. ಮೂಲಗಳು ಪ್ರಕಾರ ಪ್ರಭಾಸ್ ಅವರ ಹುಟ್ಟು ಹಬ್ಬದ ದಿನದಂದು ಟ್ರೈಲರ್ ಬಿಡುಗಡೆ ಆಗಲಿದೆಯಂತೆ. ಅಕ್ಟೋಬರ್ 23ರಂದು ಪ್ರಭಾಸ್ ಅವರ ಹುಟ್ಟು ಹಬ್ಬವಿದ್ದು, ಅಂದು ಟ್ರೈಲರ್ ರಿಲೀಸ್ ಆಗಲಿದೆ ಎನ್ನುವ ಮಾಹಿತಿ ಸಿಕ್ಕಿದೆ. ವಿತರಕರೂ ಕೂಡ ಈ ಮಾಹಿತಿಯನ್ನು ಖಚಿತ ಪಡಿಸಿದ್ದಾರೆ.

Salaar 1

ಸಲಾರ್ ರಿಲೀಸ್ ಯಾವಾಗ?

ಅಂದುಕೊಂಡಂತೆ ಆಗಿದ್ದರೆ ನಿನ್ನೆಯೇ ಪ್ರಭಾಸ್ ನಟನೆಯ ‘ಸಲಾರ್’ ಸಿನಿಮಾ ರಿಲೀಸ್ ಆಗಬೇಕಿತ್ತು. ನಾನಾ ಕಾರಣಗಳಿಂದಾಗಿ ಅದು ಸಾಧ್ಯವಾಗಲಿಲ್ಲ. ಆದರೆ, ಸಲಾರ್ ಯಾವಾಗ ರಿಲೀಸ್ ಎನ್ನುವುದಕ್ಕೆ ಉತ್ತರ ಸಿಕ್ಕಿದೆ. ಸ್ವತಃ ನಿರ್ಮಾಣ ಸಂಸ್ಥೆಯೇ (Hombale Films)  ಹೊಸ ದಿನಾಂಕವನ್ನು ಘೋಷಣೆ ಮಾಡಿದ್ದು, ಡಿಸೆಂಬರ್ 22 ರಂದು ವಿಶ್ವದಾದ್ಯಂತ ಸಲಾರ್ ಚಿತ್ರವನ್ನು ಬಿಡುಗಡೆ ಮಾಡುವುದಾಗಿ ಹೇಳಿದೆ.

salaar1 3

ಭಾರತೀಯ ಸಿನಿಮಾ ರಂಗದಲ್ಲಿ ಅಚ್ಚರಿಯ ಬೆಳವಣಿಗೆಯೊಂದು ನಡೆದಿದೆ. ಇದೇ ಮೊದಲ ಬಾರಿಗೆ ಶಾರುಖ್ (Shah Rukh Khan) ಚಿತ್ರದ ಎದುರು ವಿಶ್ವಮಟ್ಟದಲ್ಲಿ ಪ್ರಭಾಸ್ ಸಿನಿಮಾ ಎದುರಾಗಿದೆ. ಇಂಥದ್ದೊಂದು ಮಾಹಿತಿಯನ್ನು ಅಧಿಕೃತವಾಗಿ ಚಿತ್ರತಂಡಗಳೇ ಹೇಳಿಕೊಂಡಿವೆ.

Salaar

ಈಗಾಗಲೇ ಶಾರುಖ್ ಖಾನ್ ನಟನೆಯ ಡಂಕಿ (Dunki) ಸಿನಿಮಾವನ್ನು  ಕ್ರಿಸ್ ಮಸ್ ಹಬ್ಬಕ್ಕಾಗಿ ಬಿಡುಗಡೆ ಮಾಡಲು ಚಿತ್ರತಂಡ ಸಿದ್ಧ ಮಾಡಿಕೊಂಡಿದೆ. 22 ಡಿಸೆಂಬರ್ 2023ರಂದು ಡಂಕಿ ಸಿನಿಮಾವನ್ನು ರಿಲೀಸ್ ಮಾಡುವುದಾಗಿ ಚಿತ್ರತಂಡವೇ ಅಧಿಕೃತವಾಗಿ ಘೋಷಣೆ ಮಾಡಿದೆ. ಅಂದೇ ಪ್ರಭಾಸ್ (Prabhas) ಮತ್ತು ಪ್ರಶಾಂತ್ ನೀಲ್ ಕಾಂಬಿನೇಷನ್ ನ ‘ಸಲಾರ್’ ಚಿತ್ರವನ್ನೂ ಬಿಡುಗಡೆ ಮಾಡಲು ಹೊಂಬಾಳೆ ಫಿಲ್ಮ್ಸ್ ರೆಡಿಯಾಗಿದೆ.

salaar1 1

ಅಂದುಕೊಂಡಂತೆ ಆಗಿದ್ದರೆ, ಸೆಪ್ಟೆಂಬರ್ 28ರಂದು ಸಲಾರ್ (Salaar) ಸಿನಿಮಾ ರಿಲೀಸ್ ಆಗಬೇಕಿತ್ತು. ಈ ದಿನಾಂಕವನ್ನು ಘೋಷಿಸಿಯೂ ಆಗಿತ್ತು. ಆದರೆ, ಕೆಲ ತಾಂತ್ರಿಕ ಕಾರಣಗಳಿಂದಾಗಿ ರಿಲೀಸ್ ಆಗಲಿಲ್ಲ. ಮುಂದಿನ ದಿನಾಂಕವನ್ನೂ ಹೊಂಬಾಳೆ ಫಿಲ್ಮ್ಸ್ ಘೋಷಿಸುವುದಾಗಿ ತಿಳಿಸಿತ್ತು ಅದರಂತೆ ಇಂದು ದಿನಾಂಕ ಘೋಷಣೆ ಮಾಡಿದೆ.

 

ಈಗಾಗಲೇ ಒಂದರ ಹಿಂದೆ ಒಂದು ಸಿನಿಮಾವನ್ನು ಗೆಲ್ಲಿಸಿಕೊಂಡಿದ್ದಾರೆ ಶಾರುಖ್ ಖಾನ್, ಪಠಾಣ್ ಮತ್ತು ಜವಾನ್ ಸಾವಿರಾರು ಕೋಟಿ ಕಲೆಕ್ಷನ್ ಮಾಡಿ ದಾಖಲೆ ಬರೆದಿವೆ. ಈ ಗೆಲುವಿನ ನಂತರ ಡಂಕಿ ಕೂಡ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಈ ಹೊತ್ತಲ್ಲಿ ಸಲಾರ್ ಸಿನಿಮಾ ಕೂಡ ರಿಲೀಸ್ ( Release) ಆಗುತ್ತಿದೆ. ಎರಡೂ ಚಿತ್ರಗಳು ಬಾಕ್ಸ್ ಆಫೀಸಿನಲ್ಲಿ ಹೇಗೆ ಕಮಾಯಿ ಮಾಡಲಿವೆ ಎಂದು ಕಾದು ನೋಡಬೇಕು.

Web Stories

Share This Article