ಈಗಾಗಲೇ ಬಾಕ್ಸ್ ಆಫೀಸಿನಲ್ಲಿ ದಾಖಲೆ ಬರೆದಿರುವ ಪ್ರಶಾಂತ್ ನೀಲ್ ನಿರ್ದೇಶನದ ಸಲಾರ್ ಸಿನಿಮಾ ಸ್ಪ್ಯಾನಿಷ್ (Spanish0 ಭಾಷೆಯಲ್ಲಿ ರಿಲೀಸ್ ಆಗಲಿದೆ. ಈಗಾಗಲೇ ಸ್ಪ್ಯಾನಿಷ್ ಭಾಷೆಗೆ ಚಿತ್ರವನ್ನು ಡಬ್ ಮಾಡಲಾಗುತ್ತಿದ್ದು, ಮಾರ್ಚ್ 7 ರಂದು ಈ ಚಿತ್ರವನ್ನು ರಿಲೀಸ್ ಮಾಡುವುದಾಗಿ ಸಂಸ್ಥೆ ತಿಳಿಸಿದೆ.
ಸಲಾರ್ ಸಿನಿಮಾ ಬಾಕ್ಸಾಫೀಸಿನಲ್ಲಿ ಈವರೆಗೂ 627 ಕೋಟಿ ರೂಪಾಯಿ ಅಧಿಕ ಗಳಿಸಿ, ಇನ್ನೂ ಮುನ್ನುಗ್ಗುತ್ತಿದೆ. ಈ ನಡುವೆ ಸಲಾರ್ 2 ಸಿನಿಮಾದ ಬಗ್ಗೆ ಒಂದಷ್ಟು ಮಾಹಿತಿಗಳು ಹೊರ ಬಿದ್ದಿವೆ. ಆಂಗ್ಲ ವೆಬ್ ಸೈಟ್ ಜೊತೆ ನಿರ್ಮಾಪಕ ವಿಜಯ ಕಿರಗಂದೂರು (Vijaya Kirgandur) ಕೆಲ ಮಾಹಿತಿಗಳನ್ನು ಹಂಚಿಕೊಂಡಿದ್ದು, ಅದರ ಪ್ರಕಾರ ಸಲಾರ್ 2 ಸಿನಿಮಾ 2025ರಲ್ಲಿ ಬಿಡುಗಡೆ ಆಗಿದೆ.
ಇನ್ನೂ ಅಚ್ಚರಿಯ ಸಂಗತಿ ಅಂದರೆ, ಈಗಾಗಲೇ ಸಲಾರ್ 2 ಸಿನಿಮಾದ ಸ್ಕ್ರಿಪ್ಟ್ ರೆಡಿಯಾಗಿದ್ದು, ಇನ್ನೂ ಕೆಲವೇ ದಿನಗಳಲ್ಲಿ ಸಲಾರ್ 2 ಸಿನಿಮಾದ ಕುರಿತಂತೆ ನಿರ್ದೇಶಕ ಪ್ರಶಾಂತ್ ನೀಲ್ ಕೆಲಸ ಕೂಡ ಶುರು ಮಾಡಲಿದ್ದಾರಂತೆ. ಸಲಾರ್ ಸಿನಿಮಾಗಿಂತಲೂ ಸಲಾರ್ 2 ಇನ್ನೂ ಅದ್ಧೂರಿಯಾಗಿ ಇರಲಿದೆ ಎಂದು ವಿಜಯ್ ತಿಳಿಸಿದ್ದಾರೆ.
ಹೊಂಬಾಳೆ ಫಿಲ್ಮ್ಸ್ (Hombale Films) ನಿರ್ಮಾಣದ ಸಲಾರ್ (Salaar) ಸಿನಿಮಾ ತನ್ನ ಗೆಲುವಿನ ನಾಗಾಲೋಟವನ್ನು ಮುಂದುವರೆಸಿದೆ. ಈ ಸಿನಿಮಾ ಬಿಡುಗಡೆಯಾದ ಕೆಲವೇ ದಿನಗಳಲ್ಲಿ ವಿಶ್ವದಾದ್ಯಂತ ಕೋಟಿ ಕೋಟಿ ಹಣವನ್ನು ಗಳಿಸಿದೆ. ಬಾಕ್ಸ್ ಆಫೀಸಿಗೆ ಕೋಟಿ ಕೋಟಿ ಹಣ ಹರಿದು ಬರುತ್ತಿದೆ. ಈ ಮೂಲಕ ಭಾರತೀಯ ಚಿತ್ರರಂಗದಲ್ಲಿ, ಮೊದಲ ದಿನ ಅತೀ ಹೆಚ್ಚು ಗಳಿಕೆ ಮಾಡಿದ ಚಿತ್ರ ಎಂಬ ಹೊಸ ದಾಖಲೆಯನ್ನು ಮಾಡಿದೆ. ಕನ್ನಡದ ನಿರ್ಮಾಣದ ಸಂಸ್ಥೆಯೊಂದು ರಾಷ್ಟ್ರೀಯ ಮಟ್ಟದಲ್ಲಿ ಇಂಥದ್ದೊಂದು ದಾಖಲೆ ಮಾಡಿರುವುದು ಕನ್ನಡ ಚಿತ್ರರಂಗಕ್ಕೆ ಮತ್ತು ಕನ್ನಡಿಗರಿಗೆ ಹೆಮ್ಮೆಯ ವಿಷಯವಾಗಿದೆ.
ಕನ್ನಡದಲ್ಲಿ ‘ಮಾಸ್ಟರ್ ಪೀಸ್’, ‘ರಾಜಕುಮಾರ’, ‘ಯುವರತ್ನ’, ‘ಕೆಜಿಎಫ್ 1 ಮತ್ತು 2’, ‘ಕಾಂತಾರ’, ‘ರಾಘವೇಂದ್ರ ಸ್ಟೋರ್ಸ್’ ಮುಂತಾದ ಚಿತ್ರಗಳನ್ನು ನಿರ್ಮಿಸಿರುವ ಹೊಂಬಾಳೆ ಫಿಲಂಸ್, ತನ್ನ ನಿರ್ಮಾಣದ ಚಿತ್ರಗಳ ಮೂಲಕ ಜಗತ್ತಿನ ಗಮನ ಸೆಳೆದಿರುವುದಷ್ಟೇ ಅಲ್ಲ, ಕನ್ನಡ ಚಿತ್ರಗಳನ್ನು ಇನ್ನೊಂದು ಹಂತಕ್ಕೆ ತೆಗೆದುಕೊಂಡು ಹೋಗುವ ಮೂಲಕ ಎಲ್ಲರ ಗಮನ ಸೆಳೆದಿರುವ ಹೆಗ್ಗಳಿಕೆಗೆ ಪಾತ್ರವಾಗಿದೆ.
‘ಸಲಾರ್’ ಪ್ಯಾನ್ ಇಂಡಿಯಾ ಚಿತ್ರವಾದರೂ, ಈ ಚಿತ್ರದ ಹಿಂದಿರುವ ತಾಂತ್ರಿಕ ತಂಡದವರೆಲ್ಲರೂ ಕನ್ನಡದವರಾಗಿದ್ದಾರೆ. ನಿರ್ಮಾಪಕರಾದ ವಿಜಯ್ ಕಿರಗಂದೂರು, ನಿರ್ದೇಶಕ ಪ್ರಶಾಂತ್ ನೀಲ್ (Prashant Neel), ಛಾಯಾಗ್ರಾಹಕ ಭುವನ್ ಗೌಡ, ಸಂಗೀತ ನಿರ್ದೇಶಕ ರವಿ ಬಸ್ರೂರು, ಕಲಾ ನಿರ್ದೇಶಕ ಶಿವಕುಮಾರ್ ಸೇರಿದಂತೆ ಚಿತ್ರದಲ್ಲಿ ಕೆಲಸ ಮಾಡಿರುವ ಹಲವು ತಂತ್ರಜ್ಞರು ಹಾಗೂ ಕಲಾವಿದರು ಈ ನೆಲದ ಮಣ್ಣಿನವರಾಗಿದ್ದು, ಇದು ಕನ್ನಡದ ಪ್ರತಿಭಾ ಸಂಪತ್ತಿನ ಒಂದು ಉದಾಹರಣೆಯಷ್ಟೇ.