ಉಡುಪಿ: ಸಾಲಿಗ್ರಾಮ ಡಿವೈನ್ ಪಾರ್ಕ್ (Saligrama Divine Park) ಸಂಸ್ಥಾಪಕ ಎ.ಚಂದ್ರಶೇಖರ್ ಉಡುಪ (A.Chandrashekhar Udupa) ಹೃದಯಾಘಾತದಿಂದ ನಿಧನರಾಗಿದ್ದಾರೆ.
ಉಡುಪಿ ಜಿಲ್ಲೆಯ ಸಾಲಿಗ್ರಾಮದಲ್ಲಿ ಡಿವೈನ್ ಪಾರ್ಕ್‌ನ್ನು ಸ್ಥಾಪಿಸಿ ಆ ಮೂಲಕ ಹಲವು ಸೇವಾ ಚಟುವಟಿಕೆಗಳನ್ನು ನಡೆಸಿಕೊಂಡು ಬಂದ ಇವರು ವೃತ್ತಿಯಲ್ಲಿ ವೈದ್ಯರಾಗಿದ್ದರು. ಎಪ್ಪತ್ತರ ದಶಕದಲ್ಲಿ ವೈದ್ಯಕೀಯ ವ್ಯಾಸಂಗ ಮಾಡುತ್ತಿರುವಾಗ ವಿವೇಕಾನಂದರ ಚಿಂತನೆಗಳ ಪ್ರಭಾವಕ್ಕೆ ಒಳಗಾಗಿ ಅನಂತರ ಡಿವೈನ್ ಪಾರ್ಕ್ ಎಂಬ ಸಂಸ್ಥೆಯನ್ನು ಹುಟ್ಟುಹಾಕಿದ್ದರು.
ಆರೋಗ್ಯ ಮತ್ತು ಅಧ್ಯಾತ್ಮದ ಚಿಂತನೆಯಲ್ಲಿ ಸಮಾಜಕ್ಕೆ ಮತ್ತು ರಾಷ್ಟ್ರಕ್ಕೆ ಒಳಿತು ಮಾಡುವ ನಿಟ್ಟಿನಿಂದ ನಾಡಿಗೆ ಸೇವೆಯನ್ನು ಸಲ್ಲಿಸುತ್ತಿದ್ದರು. ಲಕ್ಷಾಂತರ ಮಂದಿ ದೇಶ-ವಿದೇಶದಲ್ಲಿ ಇವರ ಭಕ್ತರು, ಅನುಯಾಯಿಗಳಿದ್ದಾರೆ. ಯೋಗ, ಪ್ರಕೃತಿ, ಆಯುರ್ವೇದಗಳ ಜತೆಗೆ ಆಧ್ಯಾತ್ಮಿಕ ಚಿಕಿತ್ಸೆಯ ಕ್ರಮವನ್ನೂ ಮುನ್ನೆಲೆಗೆ ತಂದಿದ್ದರು.

