ಬಾಲಿವುಡ್ ನಟ ಸಲ್ಮಾನ್ ಖಾನ್ ಕೊಲೆ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನ ಬಂಧನವಾಗಿದೆ. ಇ-ಮೇಲ್ ಮೂಲಕ ಬೆದರಿಕೆ ಕಳುಹಿಸಿದ್ದ ರಾಜಸ್ಥಾನ (Rajasthan) ಭೂಗತ ಪಾತಕಿ ಎನ್ನಲಾದ ವ್ಯಕ್ತಿಯನ್ನು ಮುಂಬೈ ಪೊಲೀಸರು ರಾಜಸ್ಥಾನದಲ್ಲಿ ಬಂಧಿಸಿದ್ದಾರೆ. 21ರ ವಯಸ್ಸಿನ ಧಕದ್ ರಾಮ್ ಬಿಷ್ಣೋಯಿ (Dhakad Ram Bishnoi) ಎಂಬಾತನೇ ಬಂಧಿದನಾದ ವ್ಯಕ್ತಿ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ. ಈತ ರಾಜಸ್ಥಾನದ ಜೋದ್ ಪುರ್ ಬಳಿಯ ಸಿಯೋಗಿ ಕಿ ಧಾನಿ ನಿವಾಸಿ ಎಂದು ಹೇಳಲಾಗುತ್ತಿದೆ.
Advertisement
ಕೃಷ್ಣಮೃಗ ಕೊಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ಯಾಂಗ್ ಸ್ಟರ್ (gangster) ಲಾರೆನ್ಸ್ ಬಿಷ್ಣೋಯ್ (Lawrence Bishnoi) ಮತ್ತು ಬಾಲಿವುಡ್ ನಟ ಸಲ್ಮಾನ್ ಖಾನ್ (Salman Khan) ನಡುವಿನ ಕಾಳಗ ಸದ್ಯಕ್ಕೆ ಮುಗಿಯುವಂತೆ ಕಾಣುತ್ತಿಲ್ಲ. ಈಗಾಗಲೇ ಸಲ್ಮಾನ್ ಖಾನ್ ಕೊಲ್ಲಲು (Death Threats) ಬಿಷ್ಣೋಯ್ ಮತ್ತು ಟೀಮ್ ಹಲವು ರೀತಿಯಲ್ಲಿ ಪ್ರಯತ್ನ ಮಾಡಿ ವಿಫಲವಾಗಿದೆ. ಈ ಸಂಬಂಧವಾಗಿ ಅನೇಕರು ಬಂಧನ ಕೂಡ ಆಗಿದ್ದಾರೆ. ಸ್ವತಃ ಬಿಷ್ಣೋಯ್ ಜೈಲಿನಲ್ಲೇ ಇದ್ದಾನೆ. ಜೈಲಿನಿಂದಲೇ ಮತ್ತೆ ಸಲ್ಮಾನ್ ಬಗ್ಗೆ ಮಾತನಾಡಿದ್ದಾನೆ. ಇದನ್ನೂ ಓದಿ: ʻಅಮೃತಧಾರೆʼ ಶೂಟಿಂಗ್ನಲ್ಲಿ ಯೋಧರಿಂದ ಜೀವದಾನ ಸಿಕ್ಕಿದನ್ನ ಸ್ಮರಿಸಿದ ರಮ್ಯಾ
Advertisement
Advertisement
ಮಾಧ್ಯಮವೊಂದರ ಸಂದರ್ಶನದಲ್ಲಿ ಮಾತನಾಡಿರುವ ಲಾರೆನ್ಸ್ ಬಿಷ್ಣೋಯ್ ‘ನನ್ನ ಜೀವನದ ಅಂತಿಮ ಗುರಿ ಅಂತಿದ್ದರೆ ಅದು ನಟ ಸಲ್ಮಾನ್ ಖಾನ್ ಅವರನ್ನು ಕೊಲ್ಲುವುದೇ ಆಗಿದೆ. ಸಲ್ಮಾನ್ ಖಾನ್ ಬಿಷ್ಣೋಯ್ ಸಮುದಾಯಕ್ಕೆ ಕ್ಷಮೆಯಾಚಿಸಿದ ನಂತರವೇ ಈ ದ್ವೇಷ ಕೊನೆಗೊಳ್ಳುತ್ತದೆ’ ಎಂದು ಮಾತನಾಡಿದ್ದಾನೆ. ಅವನ ಈ ಮಾತು ಬಾಲಿವುಡ್ ನಲ್ಲಿ ಭಾರೀ ಆತಂಕ ಸೃಷ್ಟಿ ಮಾಡಿದೆ.
Advertisement
ಸಲ್ಮಾನ್ ಖಾನ್ ಜೀವ ಉಳಿಯಬೇಕು ಎಂದರೆ, ತನ್ನ ಮಾತನ್ನು ಕೇಳಲೇಬೇಕು ಎಂದು ಲಾರೆನ್ಸ್ ಹೇಳಿಕೊಂಡಿದ್ದಾನೆ. ಯಾವುದೋ ಜಾಗದಲ್ಲಿ ನಿಂತು ಕ್ಷಮೆ ಕೇಳಿದರೆ ನಾವು ಒಪ್ಪುವುದಿಲ್ಲ. ಬಿಕಾನೇರ್ ನಲ್ಲಿರುವ ಅವರ ದೇವಸ್ಥಾನಕ್ಕೆ ಹೋಗಿ ಕ್ಷಮೆ ಕೇಳಬೇಕು ಎಂದು ಲಾರೆನ್ಸ್ ಮಾತನಾಡಿದ್ದಾನೆ. ಸಲ್ಮಾನ್ ಖಾನ್ ಗೆ ತುಂಬಾ ಅಹಂ ಇದೆ. ಆ ನಟನಿಗೆ ಅಂಗರಕ್ಷಕರು ಇಲ್ಲದಿದ್ದರೆ ಇಷ್ಟೊತ್ತಿಗೆ ಪ್ರಾಣ ಹೋಗಿರುತ್ತಿತ್ತು ಎಂದಿದ್ದಾನೆ.
ಸಲ್ಮಾನ್ ಖಾನ್ ವಿರುದ್ಧ ಪ್ರಕರಣ ದಾಖಲಾದರೂ, ಅವರು ಕ್ಷಮೆ ಕೇಳಿಲ್ಲ. ಅವರು ಕ್ಷಮೆ ಕೇಳುವತನಕ ಈ ಯುದ್ಧ ನಿಲ್ಲುವುದಿಲ್ಲ. ಮುಂದಿನ ಎಲ್ಲ ಪರಿಣಾಮಗಳಿಗೆ ಸಲ್ಮಾನ್ ಸಿದ್ಧವಾಗಿರಬೇಕು ಎಂದು ಲಾರೆನ್ಸ್ ಗುಡುಗಿದ್ದಾನೆ. ಹಾಗಾಗಿ ಪೊಲೀಸರು ಈ ಪ್ರಕರಣವನ್ನು ಗಂಭೀರವಾಗಿ ತಗೆದುಕೊಂಡಿದ್ದು, ಲಾರೆನ್ಸ್ ಅಂಡ್ ಗ್ಯಾಂಗ್ ಮೇಲೆ ಹದ್ದಿನ ಕಣ್ಣು ಇಟ್ಟಿದ್ದಾರೆ. ಈಗಾಗಲೇ ಶೋಧ ಕಾರ್ಯವನ್ನೂ ಶುರು ಮಾಡಿದ್ದಾರೆ.