ಮುಂಬೈ: ಬಾಲಿವುಡ್ ಭಾಯ್‍ಜಾನ್ ಸಲ್ಮಾನ್ ಖಾನ್ ಅವರು ಸಾಮಾಜಿಕ ಜಾಲತಾಣದಲ್ಲಿ ರಾತ್ರೋರಾತ್ರಿ ಸ್ಟಾರ್ ಆದ ರಾನು ಮೊಂಡಲ್ ಅವರಿಗೆ 55 ಲಕ್ಷ ರೂ. ಮೌಲ್ಯದ ಮನೆ ಕೊಡಿಸಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.
ಸಲ್ಮಾನ್ ಖಾನ್ ಅವರು ರಾನು ಮೊಂಡಲ್ ಅವರ ಸಹಾಯಕ್ಕೆ ಮುಂದಾಗಿದ್ದಾರೆ. ಅಲ್ಲದೆ ಅವರಿಗೆ 55 ಲಕ್ಷ ರೂ. ಬೆಲೆಯ ಮನೆ ಕೊಡಿಸಿದ್ದಾರೆ ಎಂಬ ಮಾತುಗಳು ಹರಿದಾಡುತ್ತಿದೆ. ಆದರೆ ಈ ಬಗ್ಗೆ ಸಲ್ಮಾನ್ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ. ಈ ಮೊದಲು ಸಲ್ಮಾನ್ ತಮ್ಮ ಮುಂಬರುವ ‘ದಬಾಂಗ್-3’ ಚಿತ್ರದಲ್ಲಿ ಹಾಡಲು ಅವಕಾಶ ನೀಡಲಿದ್ದಾರೆ ಎಂಬ ವಿಷಯ ಕೇಳಿ ಬರುತ್ತಿತ್ತು. ಸದ್ಯ ಸಲ್ಮಾನ್ ಕಷ್ಟದಲ್ಲಿ ಇರುವವರಿಗೆ ಯಾವಾಗಲೂ ಸಹಾಯ ಮಾಡುತ್ತಾರೆ. ಹಾಗೆಯೇ ಅವರು ರಾನು ಅವರಿಗೂ ಸಹಾಯ ಮಾಡಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಬಾಲಿವುಡ್‍ಗೆ ಕಾಲಿಟ್ಟ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಮಹಿಳೆ
ರೈಲ್ವೆ ನಿಲ್ದಾಣದಲ್ಲಿ ಹಾಡಿದ ವಿಡಿಯೋ ವೈರಲ್ ಆದ ಬೆನ್ನಲ್ಲೇ ರಾನು ಅವರು ರಿಯಾಲಿಟಿ ಶೋಗೆ ಎಂಟ್ರಿ ಕೊಟ್ಟಿದ್ದರು. ಇದಾದ ಬಳಿಕ ಬಾಲಿವುಡ್ ಗಾಯಕ ಹಿಮೇಶ್ ರೇಶ್ಮಿಯಾ ಅವರು ತಮ್ಮ ಹೊಸ ಚಿತ್ರದಲ್ಲಿ ಹಾಡಲು ರಾನು ಮೊಂಡಲ್ ಅವರಿಗೆ ಅವಕಾಶ ನೀಡಿದ್ದರು. ಈ ವಿಷಯವನ್ನು ಸ್ವತಃ ಹಿಮೇಶ್ ತಮ್ಮ ಇನ್‍ಸ್ಟಾಗ್ರಾಂನಲ್ಲಿ ವಿಡಿಯೋ ಹಾಕುವ ಮೂಲಕ ಅಭಿಮಾನಿಗಳಿಗೆ ತಿಳಿಸಿದ್ದರು. ಇದನ್ನೂ ಓದಿ: 10 ವರ್ಷದ ಬಳಿಕ ರಾನು ಮೊಂಡಲ್ ಭೇಟಿಯಾದ ಮಗಳು
ರಾನು ಅವರ ಮೊದಲ ಹಾಡಿಗೆ 6ರಿಂದ 7 ಲಕ್ಷ ರೂ. ಸಂಭಾವನೆ ಸಿಕ್ಕಿದ್ದು, ಇದನ್ನು ಅವರು ನಿರಾಕರಿಸಿದ್ದರು. ಬಳಿಕ ಗಾಯಕ ಹಿಮೇಶ್ ರೇಶ್ಮಿಯಾ ಅವರು ನೀವು ಬಾಲಿವುಡ್‍ನಲ್ಲಿ ಸೂಪರ್ ಸ್ಟಾರ್ ಆಗುವುದನ್ನು ಯಾರು ತಡೆಯಲು ಸಾಧ್ಯವಿಲ್ಲ ಎಂದು ಹೇಳುವ ಮೂಲಕ ಹಣವನ್ನು ನೀಡಿದ್ದಾರೆ ಎನ್ನಲಾಗಿದೆ. ಬಾಲಿವುಡ್‍ನಲ್ಲಿ ಈಗಾಗಲೇ ಒಂದು ಹಾಡನ್ನು ರೆಕಾರ್ಡ್ ಮಾಡಿದ ರಾನು, ಈಗ ಭೋಜ್‍ಪುರಿ ಸಿನಿಮಾದಲ್ಲಿ ಅವಕಾಶ ಗಿಟ್ಟಿಸಿಕೊಂಡಿದ್ದಾರೆ. ಇದನ್ನೂ ಓದಿ: ಬೇಡ ಎಂದ್ರೂ ರಾನುಗೆ 7 ಲಕ್ಷ ಸಂಭಾವನೆ ನೀಡಿದ ಹಿಮೇಶ್