ಲಕ್ನೋ: ಕಾಂಗ್ರೆಸ್ ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಮತ್ತು ಮುಂಬರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯು ಪ್ರಿಯಾಂಕಾ ಗಾಂಧಿಯವರ ನೇತೃತ್ವದಲ್ಲಿ ನಡೆಯಲಿದೆ ಎಂದು ಮಾಜಿ ಕೇಂದ್ರ ಸಚಿವ ಸಲ್ಮಾನ್ ಖುರ್ಷಿದ್ ಹೇಳಿದ್ದಾರೆ.
Advertisement
ಕಾಂಗ್ರೆಸ್ ತನ್ನ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಇನ್ನೂ ನಿರ್ಧರಿಸಿಲ್ಲ. ಆದರೆ ಉತ್ತರ ಪ್ರದೇಶದ 403 ವಿಧಾನಸಭಾ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ನಿಲ್ಲಿಸುವುದಾಗಿ ತಿಳಿಸಿದ್ದಾರೆ. ಇದೇ ವೇಳೆ ಕಾಂಗ್ರೆಸ್ ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ. ನಾವು ದೃಢ ನಂಬಿಕೆಯಿಂದ ಚುನಾವಣೆಯಲ್ಲಿ ಸ್ಪರ್ಧಿಸುತ್ತೇವೆ. ಜನರು ಎದುರಿಸುತ್ತಿರುವ ಸಮಸ್ಯೆಗಳನ್ನು ತಿಳಿಯಲು ಪಕ್ಷ ಕಾರ್ಯಕರ್ತರು ಪ್ರತಿ ಕ್ಷೇತ್ರಕ್ಕೂ ಭೇಟಿ ನೀಡುತ್ತಾರೆ. ಇದನ್ನೂ ಓದಿ: ಇಂದಿನಿಂದ ಮಳೆಗಾಲದ ಅಧಿವೇಶನ ಆರಂಭ- ಕಾಂಗ್ರೆಸ್, ಬಿಜೆಪಿ ಮಧ್ಯೆ ಗದ್ದುಗೆ ಗುದ್ದಾಟ
Advertisement
Advertisement
ಈಗಾಗಲೆ ಆಗ್ರಾಗೆ ಭೇಟಿ ನೀಡುತ್ತಿರುವವರು ಜನರ ಸಮಸ್ಯೆಗಳ ಕುರಿತಂತೆ ಧ್ವನಿ ಎತ್ತಲಿದ್ದಾರೆ. ಅಯೋಧ್ಯೆ, ಜಾನ್ಸಿ, ಗೋರಖ್‍ಪುರ ಇತ್ಯಾದಿಗಳಿಗೆ ಭೇಟಿ ನೀಡಿದ್ದೇವೆ ಮತ್ತು ಆಗ್ರಾದ ತೋರಾ ಹಳ್ಳಿಯ ಸ್ಥಳೀಯರೊಂದಿಗೆ ಸಂವಾದ ನಡೆಸಿದ್ದೇವೆ. ಅಲ್ಲಿನ ಜನರು, ವಿಧವೆಯರು ಮತ್ತು ವೃದ್ಧರು ಪಿಂಚಣಿ ಹಣ ಸೇರಿದಂತೆ ಹಲವಾರು ಸಮಸ್ಯೆಗಳ ಕುರಿತಂತೆ ದೂರು ನೀಡಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಅಘ್ಘಾನಿಸ್ತಾನದಲ್ಲಿ ವಿದ್ಯಾರ್ಥಿನಿಯರು ಪ್ರತ್ಯೇಕವಾಗಿದ್ದರೆ ಮಾತ್ರ ಶಿಕ್ಷಣ
Advertisement