ಐಸಿಸ್ ಉಗ್ರ ಸಂಘಟನೆಗೆ ಹಿಂದುತ್ವ ಹೋಲಿಕೆ – ವಿವಾದಕ್ಕೆ ಸಿಲುಕಿದ ಖುರ್ಷಿದ್ ಪುಸ್ತಕ

Public TV
2 Min Read
salman khurshid

ನವದೆಹಲಿ: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಸಲ್ಮಾನ್ ಖುರ್ಷಿದ್ ಅವರು ತಮ್ಮ ಅಯೋಧ್ಯ ಪುಸ್ತಕದ ಮೂಲಕ ವಿವಾದಕ್ಕೆ ಗುರಿಯಾಗಿದ್ದಾರೆ.

ಖುರ್ಷಿದ್ ಅವರ ‘Sunrise Over Ayodhya: Nationhood in Our Times’ ಪುಸ್ತಕದಲ್ಲಿ ಹಿಂದುತ್ವವನ್ನು ಅಪಮಾನಿಸಿದ್ದಾರೆ. ಹಿಂದುತ್ವವನ್ನು ಇಸ್ಲಾಮಿಕ್ ಉಗ್ರ ಸಂಘಟನೆ ಐಸಿಸ್‍ಗೆ ಹೋಲಿಸಿರುವುದು ಸರಿಯಲ್ಲ ಎಂದು ಖುರ್ಷಿದ್ ವಿರುದ್ಧ ದೆಹಲಿಯ ವಕೀಲರೊಬ್ಬರು ದೂರು ದಾಖಲಿಸಿದ್ದಾರೆ.

salman book

ಮುಂದಿನ ವರ್ಷ ಐದು ರಾಜ್ಯಗಳಿಗೆ ಚುನಾವಣೆ ನಡೆಯಲಿದೆ. ಈ ಸಂದರ್ಭದಲ್ಲಿ ಕಾಂಗ್ರೆಸ್ “ಕೋಮುವಾದ ರಾಜಕೀಯ” ಮಾಡುತ್ತಿದೆ. ಮುಸಲ್ಮಾನ ಸಮುದಾಯದವರನ್ನು ಓಲೈಸಿ ಮತಗಳಿಸಲು ಈ ರೀತಿ ಮಾಡುತ್ತಿದೆ ಎಂದು ಬಿಜೆಪಿ ಗಂಭೀರ ಆರೋಪ ಮಾಡಿದೆ. ಇದನ್ನೂ ಓದಿ: ಬಿಟ್ ಕಾಯಿನ್ ಎಂದರೇನು? ನಮ್ಮಂತವರಿಗೆ ಸಿದ್ದರಾಮಯ್ಯನವರು ವಿವರಿಸಲಿ: ಪ್ರತಾಪ್ ಸಿಂಹ

ಹಿಂದೂ ಧರ್ಮವನ್ನು ಅವಹೇಳನ ಮಾಡಿರುವ ಸಲ್ಮಾನ್ ಖುರ್ಷಿದ್ ಅವರನ್ನು ಕಾಂಗ್ರೆಸ್ ಪಕ್ಷದಿಂದ ವಜಾಗೊಳಿಸಬೇಕು. ಸೋನಿಯಾ ಗಾಂಧಿ ಅವರು ಹಿಂದೂಗಳನ್ನು ಗೌರವಿಸುವುದಾದರೆ ತಮ್ಮ ಪಕ್ಷದ ನಾಯಕನ ಹೇಳಿಕೆಗೆ ಪ್ರತಿಕ್ರಿಯೆ ನೀಡಬೇಕು ಎಂದು ಬಿಜೆಪಿ ಆಗ್ರಹಿಸಿದೆ.

khurshid

ಪುಸ್ತಕದಲ್ಲಿ ಏನಿದೆ?
ಪುಸ್ತಕದಲ್ಲಿನ ದಿ ಸ್ಯಾಫ್ರಾನ್ ಸ್ಕೆ(ಉತ್ತುಂಗದತ್ತ ಕೇಸರಿ) ಎಂಬ ಅಧ್ಯಾಯದ 113ನೇ ಪುಟದಲ್ಲಿ ಒಂದು ಕಾಲದಲ್ಲಿ ಸನಾತನ ಧರ್ಮ ಮತ್ತು ಸಾಂಪ್ರದಾಯಿಕ ಹಿಂದು ಧರ್ಮವು ಋಷಿ-ಮುನಿಗಳಿಂದ ಪ್ರಸಿದ್ಧವಾಗಿತ್ತು. ಆದರೆ ಈಗ ಸನಾತನ ಧರ್ಮ, ಋಷಿಗಳು ಮತ್ತು ಸಂತರು ತಿಳಿಸಿರುವ ಶಾಸ್ತ್ರೀಯ ಹಿಂದೂ ಧರ್ಮವನ್ನು ಮರೆಮಾಚಲಾಗಿದೆ. ಪ್ರಸ್ತುತ ಹಿಂದುತ್ವವನ್ನು ಬಲವಂತವಾಗಿ ಹೇರಲಾಗುತ್ತಿದೆ. ಐಸಿಸ್, ಬೋಕೋ ಹರಾಂ ಉಗ್ರ ಸಂಘಟನೆ ಮಾದರಿಯಂತೆಯೇ ಹಿಂದುತ್ವವನ್ನು ಬಿತ್ತಲಾಗುತ್ತಿದೆ. ಇದು ಈಗಿನ ರಾಜಕೀಯ ಪ್ರವೃತ್ತಿಯಾಗಿದೆ ಎಂದು ಖುರ್ಷಿದ್ ಅವರು ತಮ್ಮ ಪುಸ್ತಕದಲ್ಲಿ ಬರೆದಿದ್ದಾರೆ. ಇದನ್ನೂ ಓದಿ: ಅಸ್ವಸ್ಥ ಯುವಕನನ್ನು ಹೆಗಲ ಮೇಲೆ ಹೊತ್ತು ನಡೆದ ಮಹಿಳಾ ಇನ್ಸ್‌ಪೆಕ್ಟರ್‌!

salman khurshid book

ಅಯೋಧ್ಯೆ ರಾಮ ಜನ್ಮಭೂಮಿ ವಿವಾದ ಕುರಿತು ಸುಪ್ರಿಂ ಕೋರ್ಟ್ ಯಾವ ಆಧಾರದಲ್ಲಿ ಯಾಕೆ ಮತ್ತು ಹೇಗೆ ಈ ತೀರ್ಪು ನೀಡಿದೆ ಎಂಬುದನ್ನು ಯಾರೂ ನೋಡಿಲ್ಲ. ಆದರೆ ಹಲವರು ತಮಗೆ ಬೇಕಾದಂತೆ ತೀರ್ಪಿನ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅಂಥವರಿಗೆ ಸುಪ್ರಿಂ ಕೋರ್ಟಿನ ತೀರ್ಪು ಮನದಟ್ಟು ಮಾಡುವುದು ನನ್ನ ಜವಾಬ್ದಾರಿ ಎಂದು ಖುರ್ಷಿದ್ ಹೇಳಿದ್ದಾರೆ

ಖುರ್ಷಿದ್ ಅವರ ಪುಸ್ತಕದ ವಿರುದ್ಧ ಬಿಜೆಪಿ ನಾಯಕರು ಹರಿಹಾಯ್ದಿದ್ದಾರೆ. ಮುಸ್ಲಿಂ ಸಮುದಾಯದ ಮತ ಗಳಿಸಲು ಕಾಂಗ್ರೆಸ್ ಈ ರೀತಿಯ ತಂತ್ರ ರೂಪಿಸಿದೆ ಎಂದು ಆರೋಪಿಸಿದ್ದಾರೆ. ಕೂಡಲೇ ಖುರ್ಷಿದ್ ಅವರನ್ನು ಕಾಂಗ್ರೆಸ್ ವಜಾಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *