ವಾಷಿಂಗ್ಟನ್: ಶುಕ್ರವಾರ ನ್ಯೂಯಾರ್ಕ್ನಲ್ಲಿ ನಡೆದ ಸಾಹಿತ್ಯ ಕಾರ್ಯಕ್ರಮವೊಂದರಲ್ಲಿ ಚಾಕು ಇರಿತಕ್ಕೆ ಒಳಗಾಗಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಲೇಖಕ ಸಲ್ಮಾನ್ ರಶ್ದಿ ಅವರನ್ನು ನಿನ್ನೆ ರಾತ್ರಿ ವೆಂಟಿಲೇಟರ್‌ನಿAದ ತೆಗೆಯಲಾಗಿದೆ. ರಶ್ದಿ ಅವರು ಇದೀಗ ಮಾತನಾಡುತ್ತಿದ್ದಾರೆ ಎಂದು ವರದಿಗಳು ತಿಳಿಸಿವೆ.
ಚಾಕು ಇರಿತಕ್ಕೊಳಗಾದ ರಶ್ದಿ ಅವರನ್ನು ವಾಯುವ್ಯ ಪೆನ್ಸಿಲ್ವೇನಿಯಾದ ಆಸ್ಪತ್ರೆಗೆ ಏರ್‌ಲಿಫ್ಟ್ ಮಾಡಲಾಗಿತ್ತು. ದಾಳಿಯಿಂದ ರಶ್ದಿಯ ತೋಳಿನ ನರಗಳು ಹಾಗೂ ಪಿತ್ತಜನಕಾಂಗ ಹಾನಿಗೊಂಡಿತ್ತು ಎಂದು ತಿಳಿದುಬಂದಿದೆ. ಇದನ್ನೂ ಓದಿ: ಬಂಧಿತ ಉಗ್ರರ ವಿಚಾರಣೆಯ ವೇಳೆ ಮಾಹಿತಿ ಬಹಿರಂಗ- ಗುಪ್ತಚರ ಇಲಾಖೆಯಿಂದ ಎಚ್ಚರಿಕೆ
Advertisement
Advertisement
ಸಲ್ಮಾನ್ ರಶ್ದಿ ಅವರನ್ನು ಚಾಕುವಿನಿಂದ ಇರಿದ ಆರೋಪಿ ಹದಿ ಮತರ್ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದಾನೆ. ಆತ ಪೂರ್ವಯೋಜಿತ ದಾಳಿ ನಡೆಸಿ, ರಶ್ದಿಗೆ 10 ಬಾರಿ ಚಾಕುವಿನಿಂದ ಇರಿದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಧ್ವಜಾರೋಹಣಕ್ಕೆ ಈದ್ಗಾ ಮೈದಾನದಲ್ಲಿ ಸಿದ್ಧತೆ- ಅಹಿತಕರ ಘಟನೆ ನಡೆಯದಂತೆ ಖಾಕಿ ಭದ್ರತೆ
Advertisement
ಸದ್ಯ ಇದೀಗ ರಶ್ದಿ ಅವರು ಚೇತರಿಸಿಕೊಳ್ಳುತ್ತಿದ್ದು, ಅವರಿಗೆ ಅಳವಡಿಸಲಾಗಿದ್ದ ವೆಂಟಿಲೇಟರ್ ಅನ್ನು ತೆಗೆಯಲಾಗಿದೆ. ಈಗ ಅವರು ಮಾತನಾಡುತ್ತಿದ್ದಾರೆ. ಅವರು ಬೇಗನೆ ಸಂಪೂರ್ಣವಾಗಿ ಗುಣಮುಖರಾಗಲಿ ಎಂದು ಎಲ್ಲರೂ ಪ್ರಾರ್ಥಿಸೋಣ ಎಂದು ಷಟೌಕ್ವಾ ಸಂಸ್ಥೆಯ ಅಧ್ಯಕ್ಷ ಮೈಕೆಲ್ ಹಿಲ್ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.