ವಾಷಿಂಗ್ಟನ್: ಪಶ್ಚಿಮ ನ್ಯೂಯಾರ್ಕ್‍ನಲ್ಲಿ ನಿನ್ನೆ ನಡೆದ ಸಾಹಿತ್ಯ ಕಾರ್ಯಕ್ರಮದಲ್ಲಿ ಚಾಕು ಇರಿತದಿಂದ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಲೇಖಕ ಸಲ್ಮಾನ್ ರಶ್ದಿ (75) ಆರೋಗ್ಯ ಗಂಭೀರವಾಗಿದ್ದು, ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ.
ಅಮೆರಿಕದ ನ್ಯೂಯಾರ್ಕ್‍ನಲ್ಲಿ ನಿನ್ನೆ ನಡೆದ ಸಾಹಿತ್ಯ ಕಾರ್ಯಕ್ರಮದಲ್ಲಿ ತಮ್ಮನ್ನು ಪರಿಚಯಿಸುತ್ತಿದ್ದ ವೇಳೆ ಏಕಾಏಕಿ ದಾಳಿ ನಡೆಸಿದ ದಾಳಿಕೋರ ಕುತ್ತಿಗೆ ಮತ್ತು ಹೊಟ್ಟೆಗೆ 15 ರಿಂದ 20 ಬಾರಿ ಇರಿದಿದ್ದ. ತೀವ್ರ ರಕ್ತಸ್ರಾವದಿಂದ ಕುಸಿತಗೊಂಡಿದ್ದ ರಶ್ದಿಯನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ರಶ್ದಿ ಪ್ರಸ್ತುತ ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಶ್ದಿ ಅವರ ಕುತ್ತಿಗೆ, ಹೊಟ್ಟೆ ಮತ್ತು ಕಣ್ಣುಗಳಿಗೆ ಚಾಕು ಇರಿತವಾಗಿದ್ದು, ಅವರು ಕಣ್ಣು ಕಳೆದುಕೊಳ್ಳುವ ಸಾಧ್ಯತೆ ಹೆಚ್ಚಿದೆ ಎಂದು ಆಸ್ಪತ್ರೆ ಮೂಲಗಳಿಂದ ತಿಳಿದುಬಂದಿದೆ. ಇದನ್ನೂ ಓದಿ: ಖ್ಯಾತ ಕಾದಂಬರಿಕಾರ ಸಲ್ಮಾನ್ ರಶ್ದಿ ಮೇಲೆ ದುಷ್ಕರ್ಮಿಗಳಿಂದ ಚಾಕು ಇರಿತ
ಆಸ್ಪತ್ರೆ ಮೂಲಗಳ ಪ್ರಕಾರ ಸಲ್ಮಾನ್ ರಶ್ದಿ ಅವರ ತೋಳಿನಲ್ಲಿ ನರಗಳು ತುಂಡಾಗಿದ್ದು, ಅವರ ಯಕೃತ್ತಿಗೆ ಹಾನಿಯಾಗಿದೆ. ಕಣ್ಣುಗಳಿಗೆ ಗಂಭೀರ ಹಾನಿಯಾಗಿದ್ದು, ಕಣ್ಣುಗಳು ಶಾಶ್ವತವಾಗಿ ಕಾರ್ಯನಿರ್ವಹಿಸದೇ ಇರಬಹುದು ಎಂಬ ಆತಂಕಕಾರಿ ಮಾಹಿತಿ ಹಂಚಿಕೊಂಡಿದ್ದಾರೆ. ಈ ಬಗ್ಗೆ ಅಮೆರಿಕದ ಲೇಖಕ ಆಂಡ್ರ್ಯೂ ವೈಲಿ ಮಾಹಿತಿ ಹಂಚಿಕೊಂಡಿದ್ದು, ಸಲ್ಮಾನ್ ಒಂದು ಕಣ್ಣನ್ನು ಕಳೆದುಕೊಳ್ಳುವ ಸಾಧ್ಯತೆಯಿದ್ದು, ಅವರ ತೋಳಿನ ನರಗಳು ತುಂಡಾಗಿದೆ. ಯಕೃತ್ತಿಗೆ ಚಾಕು ಇರಿತವಾಗಿದ್ದು, ಗಂಭೀರವಾಗಿ ಹಾನಿಯಾಗಿದೆ ಎಂದಿದ್ದಾರೆ. ಇದನ್ನೂ ಓದಿ: ಇಂದಿನಿಂದ ಮೂರು ದಿನಗಳ ಕಾಲ ಹರ್ ಘರ್ ತಿರಂಗಾ ಅಭಿಯಾನ
NOW – Salman Rushdie is stabbed on stage in New York.pic.twitter.com/qFmYE6BC5E
— Disclose.tv (@disclosetv) August 12, 2022
ದಾಳಿಕೋರನ ಗುರುತು ಪತ್ತೆ:
ಸಲ್ಮಾನ್ ರಶ್ದಿ ಮೇಲೆ ದಾಳಿ ಮಾಡಿದ ದಾಳಿಕೋರನನ್ನು ನ್ಯೂಯಾರ್ಕ್ ಪೊಲೀಸರು ಬಂಧಿಸಿದ್ದು, ದಾಳಿಕೋರನನ್ನು 24 ವರ್ಷದ ಹದಿ ಮಾತರ್ ಎಂದು ಗುರುತಿಸಲಾಗಿದ್ದು, ಈತ ನ್ಯೂಜೆರ್ಸಿಯ ನಿವಾಸಿ ಎನ್ನಲಾಗಿದೆ. ರಶ್ದಿ ಅವರ ಮೇಲೆ ದಾಳಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಸೈದ್ದಾಂತಿಕ ವಿರೋಧಗಳು ದಾಳಿಗೆ ಕಾರಣವಾಗಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.