ವಿಜಯಪುರ: ಗುಮ್ಮಟ ನಗರಿ ವಿಜಯಪುರ (Vijayapura) ಜಿಲ್ಲೆಯ ಯುವತಿಯೊಬ್ಬರು ದೇಶದ ಅತ್ಯಂತ ಕಿರಿಯ ಪೈಲಟ್ (Youngest Pilot) ಆಗುವ ಮೂಲಕ ರಾಜ್ಯದ ಹಿರಿಮೆ ಹೆಚ್ಚಿಸಿದ್ದಾರೆ.
ಐತಿಹಾಸಿಕ ಜಿಲ್ಲೆಯಾಗಿ ವಿಜಯಪುರ ಜಗತ್ ವಿಖ್ಯಾತಿ ಪಡೆದಿದೆ. ಜೊತೆಗೆ ಜಿಲ್ಲೆಯ ಅನೇಕರು ರಾಜ್ಯ ಸೇರಿದಂತೆ ದೇಶಕ್ಕೆ ಕೀರ್ತಿ ತಂದಿದ್ದಾರೆ. ಕ್ರೀಡೆ, ವಿಜ್ಞಾನ, ಸಾಹಿತ್ಯ ಸೇರಿದಂತೆ ಅನೇಕ ಕ್ಷೇತ್ರದಲ್ಲಿ ಸಾಧನೆಗೈದವರಿದ್ದಾರೆ. ಇದೀಗ ಮತ್ತೊಂದು ಸಾಧನೆಯಿಂದ ಜಿಲ್ಲೆಯ ಹಾಗೂ ರಾಜ್ಯದ ಹಿರಿಮೆ ಹೆಚ್ಚಿದೆ.ಇದನ್ನೂ ಓದಿ: ಎಫ್‌ಬಿಐ ನಿರ್ದೇಶಕನಾಗಿ ಭಾರತೀಯ ಮೂಲದ ಕಶ್ಯಪ್ ನಾಮನಿರ್ದೇಶನ
18 ವರ್ಷದ ಸಮೈರಾ ಹುಲ್ಲೂರು ಕಮರ್ಶಿಯಲ್ ಪೈಲಟ್ ಲೈಲೆನ್ಸ್ ಪಡೆಯುವ ಮೂಲಕ ಅಭೂತಪೂರ್ವ ಸಾಧನೆಗೈದಿದ್ದಾರೆ. ಈ ಸಾಧನೆಯಿಂದ ಕುಟುಂಬದಲ್ಲಿ ಸಂತೋಷ ಮನೆ ಮಾಡಿದೆ. ಇತಿಹಾಸ ಸೃಷ್ಟಿಸಿರುವ ಸಮೈರಾ ವಿಜಯಪುರ ಜಿಲ್ಲೆ ಮಾತ್ರವಲ್ಲದೇ ರಾಜ್ಯದ ಕೀರ್ತಿಯ ಪತಾಕೆಯನ್ನು ಹಾರಿಸಿದ್ದಾರೆ.
ತಮ್ಮ ಶಿಕ್ಷಣವನ್ನು ವಿಜಯಪುರದಲ್ಲಿ ಮುಗಿಸಿ, 6 ತಿಂಗಳ ಕಾಲ ದೆಹಲಿಯಲ್ಲಿ ಪೈಲಟ್ ಟ್ರೇನಿಂಗ್ ಮುಗಿಸಿ 18ನೇ ವಯಸ್ಸಿಗೆ ಪೈಲಟ್ ಆಗಿ ಹೊರಹೊಮ್ಮಿದ್ದಾರೆ. 25ನೇ ವಯಸ್ಸಿಗೆ ಪೈಲಟ್ ಆಗಿರುವ ಕ್ಯಾಪ್ಟನ್ ತಪೇಶ್ ಕುಮಾರ್ ಇವರ ಈ ಸಾಧನೆಗೆ ಪ್ರೇರಣೆಯಾಗಿದ್ದಾರೆ.
ಸಮೈರಾಳ ಸಾಧನೆಗೆ ಜಿಲ್ಲೆ, ರಾಜ್ಯ ಹಾಗೂ ದೇಶದ ಹಲವೆಡೆಯಿಂದ ಶುಭಾಶಯಗಳ ಮಹಾಪೂರ ಹರಿದು ಬರುತ್ತಿದೆ. ಹೆಣ್ಣು ಮಕ್ಕಳನ್ನು ಕಡೆಗಣೆಸುವ ಜನರಿಗೆ ಸಮೈರಾ ಕುಟುಂಬ ಮಾದರಿ ಆಗಿದೆ. ಜೊತೆಗೆ ಇಂದಿನ ಕಾಲದ ಯುವ ಪೀಳಿಗೆಗೆ ಸಮೈರಾ ಸಾಧನೆ ಪ್ರೇರಣೆ ಆಗಿದೆ.ಇದನ್ನೂ ಓದಿ: ಶೋ ಕಂಟಿನ್ಯೂ ಮಾಡೋಕೆ ಆಗಲ್ಲ ಎಂದು ಕಣ್ಣೀರಿಟ್ಟ ಶೋಭಾ- ಕಿಚ್ಚನ ಮಾತಿಗೆ ಡೋರ್ ಓಪನ್