ಲಕ್ನೋ: ಗೋರಖ್ಪುರ ಲೋಕಸಭಾ ಕ್ಷೇತ್ರದ ಸಮಾಜವಾದಿ ಪಕ್ಷದ (Samajwadi Party) ಅಭ್ಯರ್ಥಿ ಕಾಜಲ್ ನಿಶಾದ್ (Kajal Nishad) ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಲಕ್ನೋದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
Advertisement
ಈ ಸಂಬಂಧ ಪತಿ ಸಂಜಯ್ ನಿಶಾದ್ ಸುದ್ದಿಗಾರರಿಗೆ ಪ್ರತಿಕ್ರಿಯಿಸಿ, ಕಾಜಲ್ ಅವರು ರಕ್ತದೊತ್ತಡ ಮತ್ತು ಹೃದಯದ ಕೆಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಏಪ್ರಿಲ್ 5 ರಂದು ಆಕೆಯ ಆರೋಗ್ಯ ಹಠಾತ್ ಹದಗೆಟ್ಟ ನಂತರ ಕಾಜಲ್ ಅವರನ್ನು ಸ್ಟಾರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಭಾನುವಾರ ನಿಶಾದ್ ಅವರಿಗೆ ಹೃದಯ ಸ್ತಂಭನವಾಗಿದ್ದು, ವೈದ್ಯರು ಅವರನ್ನು ಲಕ್ನೋಗೆ ಕಳುಹಿಸಿದ್ದಾರೆ ಎಂದರು. ಇದನ್ನೂ ಓದಿ: ಆರೋಗ್ಯವಾಗಿದ್ದರೂ ಹೃದಯ ಸ್ತಂಭನ ಯಾಕೆ ಆಗುತ್ತೆ? – ಎಲ್ಲ ಪ್ರಶ್ನೆಗಳಿಗೆ ಡಾ. ಮಂಜುನಾಥ್ ಉತ್ತರ
Advertisement
Advertisement
41 ವರ್ಷದ ಕಾಜಲ್ ನಿಶಾದ್ ಅವರು ಗೋರಖ್ಪುರ ಕ್ಷೇತ್ರದಿಂದ ನಟ ಮತ್ತು ಹಾಲಿ ಬಿಜೆಪಿ ಸಂಸದ ರವಿ ಕಿಶನ್ ಶುಕ್ಲಾ ವಿರುದ್ಧ ಕಣದಲ್ಲಿದ್ದಾರೆ. 2019 ರಲ್ಲಿ ಮೊದಲ ಬಾರಿಗೆ ಈ ಸ್ಥಾನವನ್ನು ಗೆದ್ದ ನಂತರ ಮರುಚುನಾವಣೆಗೆ ಸ್ಪರ್ಧಿಸುತ್ತಿರುವ ರವಿ ಕಿಶನ್, ಈ ಸ್ಥಾನದಲ್ಲಿ ಗೆಲುವು ಸಾಧಿಸುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ. ಆದರೆ ಕಾಜಲ್ ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷದ ನಡುವಿನ ಒಪ್ಪಂದದ ಅಡಿಯಲ್ಲಿ ಇಂಡಿಯಾ ಬ್ಲಾಕ್ ಅಭ್ಯರ್ಥಿಯಾಗಿದ್ದಾರೆ.
Advertisement
2024 ರ ಏಳು ಹಂತದ ಲೋಕಸಭಾ ಚುನಾವಣೆಯ ಕೊನೆಯ ಹಂತದಲ್ಲಿ ಜೂನ್ 1 ರಂದು ಗೋರಖ್ಪುರ ಮತದಾನ ನಡೆಯಲಿದೆ. ಜೂನ್ 4 ರಂದು ಫಲಿತಾಂಶ ಹೊರಬೀಳಲಿವೆ.