ಸಮಂತಾ (Samantha) ಆರೋಗ್ಯದ (health) ಬಗ್ಗೆ ಹಲವು ತಿಂಗಳಿನಿಂದ ನಾನಾ ರೀತಿಯ ಸುದ್ದಿಗಳು ಹರಿದಾಡುತ್ತಿವೆ. ಅವುಗಳಿಗೆ ಪುಷ್ಠಿ ಕೊಡುವಂತೆ ಸಮಂತಾ ಕೂಡ ಯಾರ ಕಣ್ಣಿಗೂ ಕಾಣಿಸಿಕೊಳ್ಳದೇ, ಸಿನಿಮಾ ಸಂಬಂಧಿ ಕಾರ್ಯಕ್ರಮದಲ್ಲೂ ಪಾಲ್ಗೊಳ್ಳದೇ, ಕೊನೆ ಪಕ್ಷ ಹರಡಿರುವ ಸುದ್ದಿಗೆ ಸ್ಪಷ್ಟನೆ ಕೊಡದೇ ಮತ್ತೆ ಮತ್ತೆ ಅಭಿಮಾನಿಗಳನ್ನು ಆತಂಕಕ್ಕೆ ದೂಡುತ್ತಿದ್ದಾರೆ.
ಸಮಂತಾ ಚರ್ಮದ ಸಮಸ್ಯೆಯಿಂದ ಬಳಲುತ್ತಿದ್ದು, ಅದಕ್ಕಾಗಿ ಅವರು ಅಮೆರಿಕಾದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಲಾಗಿತ್ತು. ಅಲ್ಲದೇ, ಖಾಯಿಲೆ ಕಾರಣದಿಂದಾಗಿ ಅವರು ಮನೆಯಿಂದ ಆಚೆ ಬರುತ್ತಿಲ್ಲ ಎನ್ನುವ ಸುದ್ದಿಯೂ ಇತ್ತು. ಈ ಕಾರಣದಿಂದಾಗಿಯೇ ಅವರು ನಟಿಸಿದ ಸಿನಿಮಾಗಳ ಬಿಡುಗಡೆ ದಿನಾಂಕ ಮುಂದೂಡಲಾಗಿದೆ ಎಂದೂ ಹೇಳಲಾಗಿತ್ತು. ಇಷ್ಟೆಲ್ಲ ಸುದ್ದಿಗಳು ಹರಡಿದರೂ, ಅವರು ಮಾತ್ರ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಇದನ್ನೂ ಓದಿ:ಕೊಟ್ಟ ಮಾತಿನಂತೆ ದಾವಣಗೆರೆ ಬೆಣ್ಣೆದೋಸೆ ಸವಿದ ಸ್ಯಾಂಡಲ್ ವುಡ್ ಕ್ವೀನ್
ಅಂದುಕೊಂಡಂತೆ ಆಗಿದ್ದರೆ, ವಿಜಯ್ ದೇವರಕೊಂಡ (Vijay Devarakonda) ನಾಯಕನಾಗಿ ನಟಿಸುತ್ತಿರುವ ಖುಷಿ (Khushi) ಸಿನಿಮಾದ ಚಿತ್ರೀಕರಣದಲ್ಲಿ ಸಮಂತಾ ತೊಡಗಿಕೊಳ್ಳಬೇಕಿತ್ತು. ಆದರೆ, ಅವರು ಚಿತ್ರೀಕರಣದಲ್ಲಿ ಭಾಗಿಯಾಗಿಲ್ಲ ಎಂದು ಹೇಳಲಾಗಿತ್ತು. ಖುಷಿ ಸಿನಿಮಾಗೆ ಎರಡು ಹಂತದಲ್ಲಿ ಚಿತ್ರೀಕರಣ ನಡೆದಿದ್ದೂ, ಎರಡೂ ಹಂತದ ಶೂಟಿಂಗ್‌ನಲ್ಲಿ ಅವರು ಭಾಗಿಯಾಗಿಲ್ಲ ಎಂದು ಹೇಳಲಾಗುತ್ತಿದೆ. ಹೀಗಾಗಿ ವಿಜಯ್ ದೇವರಕೊಂಡ ಡೇಟ್ ಸಮಸ್ಯೆ ಆಗುತ್ತಿದೆಯಂತೆ.
ಖುಷಿ ಸಿನಿಮಾದ ಚಿತ್ರೀಕರಣದಲ್ಲಿ ಸಮಂತಾ ಭಾಗಿ ಆಗಿಲ್ಲ ಎನ್ನುವ ಸುದ್ದಿ ಹೊರ ಬೀಳುತ್ತಿದ್ದಂತೆಯೇ ಮತ್ತೆ ಸಮಂತಾ ಅವರ ಆರೋಗ್ಯದ ಬಗ್ಗೆ ಚರ್ಚೆ ಶುರುವಾಗಿದೆ. ಅನಾರೋಗ್ಯದ ಕಾರಣದಿಂದಾಗಿಯೇ ಅವರು ಶೂಟಿಂಗ್‌ಗೆ ಬಂದಿಲ್ಲ ಎಂದು ಹೇಳಲಾಗುತ್ತಿದೆ. ಸಮಂತಾ ಈ ಕುರಿತು ಏನೂ ಹೇಳದೇ ಇರುವ ಕಾರಣದಿಂದಾಗಿ ಅಭಿಮಾನಿಗಳಿಗೆ ಸಹಜವಾಗಿ ಆತಂಕ ಮೂಡಿದೆ.