ಸೌತ್ ನಟಿ ಸಮಂತಾ (Samantha) ಇದೀಗ ಬಾತ್‌ರೂಮ್ ಫೋಟೋವೊಂದನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಕಾಲೆಳೆಯುವವರಿಗೆ ನಟಿ ಸಂದೇಶ ಕೂಡ ಕೊಟ್ಟಿದ್ದಾರೆ. ಸದ್ಯ ಸಮಂತಾ ಲುಕ್, ನೆಟ್ಟಿಗರ ಗಮನ ಸೆಳೆಯುತ್ತಿದೆ. ಇದನ್ನೂ ಓದಿ:ಅನಂತ್ ಅಂಬಾನಿ ಪ್ರೀ-ವೆಡ್ಡಿಂಗ್‌ನಲ್ಲಿ 3ನೇ ದಿನ ಸೆಲೆಬ್ರಿಟಿಗಳು ಮಿಂಚಿದ್ದು ಹೀಗೆ
ಬಾತ್‌ರೂಮ್‌ನಲ್ಲಿ ಸ್ಯಾಮ್ ವಿವಿಧ ಭಂಗಿಯಲ್ಲಿ ಫೋಟೋಶೂಟ್ ಮಾಡಿಸಿದ್ದಾರೆ. ಬಿಳಿ ಬಣ್ಣದ ಶರ್ಟ್ ಮತ್ತು ನೀಲಿ ಬಣ್ಣದ ಜೀನ್ಸ್ ಧರಿಸಿ ಮಿಂಚಿದ್ದಾರೆ. ಅದಕ್ಕೆ ತಲೆಕೆಡಿಸಿಕೊಳ್ಳಲ್ಲ ಎಂದು ಕ್ಯಾಪ್ಷನ್ ನೀಡಿದ್ದಾರೆ. ಯಾರಿಗೆ ನಟಿ ವಾರ್ನ್ ಮಾಡ್ತಿದ್ದಾರೆ ಎಂದು ನೆಟ್ಟಿಗರಲ್ಲಿ ಪ್ರಶ್ನೆ ಮೂಡಿದೆ. ಈ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಗ್ರಾಸವಾಗಿದೆ.
Advertisement
Advertisement
ವಿವಾದ, ಅನಾರೋಗ್ಯ, ಯಶಸ್ಸು ಎಲ್ಲವೂ ಅನುಭವಿಸಿರುವ ಜೀವ ಸಮಂತಾ. ನಾಗಚೈತನ್ಯ (Nagachaitanya) ಜೊತೆಗಿನ ದಾಂಪತ್ಯಕ್ಕೆ (Wedding) ಅಂತ್ಯ ಹಾಡಿದ ಮೇಲೆ ಸಮಂತಾ ಸಾಕಷ್ಟು ಟೀಕೆಗಳಿಗೆ ಗುರಿಯಾಗಿದ್ದರು. ಎಲ್ಲಾ ವಿಚಾರಕ್ಕೂ ಸಮಂತಾ ಕಡೆಯೇ ಬೆಟ್ಟು ಮಾಡಿ ತೋರಿಸುತ್ತಿದ್ದರು. ಸಹವಾಸವೇ ಬೇಡ ಅಂತ ವೃತ್ತಿರಂಗದಲ್ಲಿ ಬ್ಯುಸಿಯಾದರು. ‘ಪುಷ್ಪ’ (Pushpa) ಚಿತ್ರದಲ್ಲಿ ಸೊಂಟ ಬಳುಕಿಸಿದ ಮೇಲೆ ಸಮಂತಾ ಲಕ್ ಬದಲಾಯ್ತು.
Advertisement
Advertisement
ಆದರೆ ಯಶೋದ (Yashoda) ಮತ್ತು ಖುಷಿ (Kushi) ಸಿನಿಮಾ ಆದ್ಮೇಲೆ ಬಿಗ್ ಸ್ಕ್ರೀನ್ ಮೇಲೆ ಕಾಣಿಸಿಕೊಂಡಿರಲಿಲ್ಲ. ಎರಡೂ ಹೀನಾಯವಾಗಿ ಸೋತ ಚಿತ್ರಗಳು. ಸೋಲಿನ ಹೊಡೆತಕ್ಕೆ ಅನಾರೋಗ್ಯದ ಆಘಾತ ಎರಡನ್ನೂ ಸಹಿಕೊಳ್ಳೋಕೆ ಸ್ಯಾಮ್‌ಗೆ 6 ತಿಂಗಳು ಹಿಡಿಯಿತು. ಇದೀಗ ಮತ್ತೆ ಕೆಲಸಕ್ಕೆ ಮರಳಿದ್ದಾರೆ.
ಸದ್ಯ ಸಮಂತಾಗೆ ಟಾಲಿವುಡ್ ಮಾತ್ರವಲ್ಲ ಬಾಲಿವುಡ್‌ನಿಂದಲೂ ಬಂಪರ್ ಅವಕಾಶಗಳು ಅರಸಿ ಬರುತ್ತಿವೆ. ಹಾಗಾಗಿ ಸಮಂತಾ ಸಿನಿಮಾ ಮತ್ತು ಲುಕ್ ಹೇಗಿರಲಿದೆ ಎಂಬ ಚರ್ಚೆ ಕೂಡ ನಡೆದಿದೆ. ಹೊಸ ಕೆಲಸ ಅವರ ಕೆರಿಯರ್‌ಗೆ ತಿರುವು ಕೊಡಲಿ ಎಂದು ಸ್ಯಾಮ್ ಫ್ಯಾನ್ಸ್ ಆಶಿಸುತ್ತಿದ್ದಾರೆ.