‘ಟಿಲ್ಲು ಸ್ಕ್ವೇರ್’ ಸಿನಿಮಾ ಸಕ್ಸಸ್ ಬಳಿಕ ಅನುಪಮಾ ಪರಮೇಶ್ವರನ್ (Anupama Parameshwaran) ಹಲವು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯ ‘ಪರದಾ’ (Paradha) ಚಿತ್ರದಲ್ಲಿ ತೊಡಗಿಸಿಕೊಂಡಿರುವ ಅನುಪಮಾಗೆ ಸಮಂತಾ ಸಾಥ್ ನೀಡುತ್ತಿದ್ದಾರೆ. ನಟಿಯ ಹೊಸ ಸಿನಿಮಾದಲ್ಲಿ ಸಮಂತಾ ಅತಿಥಿ ಪಾತ್ರದಲ್ಲಿ ನಟಿಸುತ್ತಿದ್ದಾರೆ ಎನ್ನಲಾದ ಸುದ್ದಿಯೊಂದು ಚರ್ಚೆಗೆ ಗ್ರಾಸವಾಗಿದೆ.
View this post on Instagram
‘ಪರದಾ’ ಸಿನಿಮಾದಲ್ಲಿ ಅನುಪಮಾ ಮತ್ತು ದರ್ಶನಾ ರಾಜೇಂದ್ರನ್ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಸಮಂತಾ (Samantha) ಕೂಡ ವಿಶೇಷ ಪಾತ್ರದಲ್ಲಿ ನಟಿಸಲಿದ್ದಾರೆ ಎನ್ನಲಾಗಿದೆ. ಚಿತ್ರತಂಡ ಕೂಡ ನಟಿಯನ್ನು ಸಂಪರ್ಕಿಸಿ, ರೋಲ್ ಬಗ್ಗೆ ಮಾತುಕತೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಸದ್ಯ ಹರಿದಾಡುತ್ತಿರುವ ಸುದ್ದಿ ನಿಜನಾ? ಎಂಬುದನ್ನು ಸಮಂತಾ ಅಥವಾ ಚಿತ್ರತಂಡ ಅಧಿಕೃತವಾಗಿ ತಿಳಿಸುವವರೆಗೂ ಕಾದುನೋಡಬೇಕಿದೆ.
ಅಂದಹಾಗೆ, ಮಲಯಾಳಂನಲ್ಲಿ ಬ್ಯಾಕ್ ಟು ಬ್ಯಾಕ್ 3 ಸಿನಿಮಾಗಳಲ್ಲಿ ಅನುಪಮಾ ನಟಿಸುತ್ತಿದ್ದಾರೆ. ಚಿಯಾನ್ ವಿಕ್ರಮ್ ಪುತ್ರ ಧ್ರುವಗೆ ನಾಯಕಿಯಾಗಿ ಕಾಣಿಸಿಕೊಳ್ತಿದ್ದಾರೆ.
ಇತ್ತ ಸಮಂತಾ ಅವರು ನಿರ್ದೇಶಕಿ ನಂದಿನಿ ರೆಡ್ಡಿ ಜೊತೆ ಹೊಸ ಸಿನಿಮಾ ಮಾಡುತ್ತಿದ್ದಾರೆ. ಬಾಲಿವುಡ್‌ನಲ್ಲೂ ನಟಿಗೆ ಉತ್ತಮ ಅವಕಾಶಗಳು ಅರಸಿ ಬರುತ್ತಿವೆ.