ಸದ್ಯ ದಕ್ಷಿಣ ಭಾರತದ ಚಿತ್ರೋದ್ಯಮದಲ್ಲಿ ಸಖತ್ ಹವಾ ಕ್ರಿಯೇಟ್ ಮಾಡಿದ್ದು ವಿಜಯ್ ದೇವರಕೊಂಡ ಮತ್ತು ಸಮಂತಾ (Samantha). ಈ ಜೋಡಿಯ ಖುಷಿ ಸಿನಿಮಾ ಇನ್ನಷ್ಟೇ ರಿಲೀಸ್ ಆಗಬೇಕಿದೆ. ಇದೀಗ ಇಬ್ಬರೂ ಆ ಸಿನಿಮಾದ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಖಾಸಗಿಯ ಅನೇಕ ಸಂಗತಿಗಳನ್ನು ಹಂಚಿಕೊಳ್ಳುತ್ತಿದ್ದಾರೆ.
ಮಾಧ್ಯಮದೊಂದಿಗೆ ಮಾತನಾಡಿರುವ ಸಮಂತಾ, ನಟ ವಿಜಯ್ ದೇವರಕೊಂಡ (Vijay Devarakonda) ಅವರ ಭಾವಿ ಪತ್ನಿ ಹೇಗಿರಬೇಕು ಎನ್ನುವುದನ್ನು ವಿವರಿಸಿದ್ದಾರೆ. ‘ವಿಜಯ್ ಅವರಿಗೆ ಪತ್ನಿಯಾಗಿ ಬರುವವರು ಸಾಮಾನ್ಯರಲ್ಲಿ ಸಾಮಾನ್ಯವಾಗಿರಬೇಕು, ಕುಟುಂಬದ ಜೊತೆ ಹೊಂದಾಣಿಕೆ ಮಾಡಿಕೊಂಡು ಹೋಗಬೇಕು. ಅತೀ ಹೆಚ್ಚು ಪ್ರೀತಿಸಬೇಕು’ ಎಂದೆಲ್ಲ ಹೇಳುತ್ತಾ ಹೋಗುತ್ತಾರೆ. ಸಮಂತಾ ಮತ್ತೆ ವಿಜಯ್ ಮತ್ತಷ್ಟು ವಿಷಯಗಳನ್ನು ಜೋಡಿಸುತ್ತಾರೆ.
‘ಖುಷಿ’ (Khushi) ಸಿನಿಮಾದ ಟ್ರೈಲರ್ (Trailer) ರಿಲೀಸ್ ಕಾರ್ಯಕ್ರಮ ಇತ್ತೀಚೆಗಷ್ಟೇ ಹೈದರಾಬಾದ್ ನಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಪತ್ರಕರ್ತರೊಂದಿಗೆ ಹಲವಾರು ವಿಷಯಗಳನ್ನು ಹಂಚಿಕೊಂಡರ ವಿಜಯ್ ದೇವರಕೊಂಡ. ಸಮಂತಾ ಈ ಸಿನಿಮಾದಲ್ಲಿ ಆರಾಧ್ಯ ಹೆಸರಿನ ಪಾತ್ರ ಮಾಡಿದ್ದು, ಸಿನಿಮಾ ಕಥೆ ಕೇಳಿದಾಗ ಮೊದಲು ನೆನಪಾಗಿದ್ದ ನಟಿ ಸಮಂತಾ ಎಂದಿದ್ದರು ವಿಜಯ್. ಇದನ್ನೂ ಓದಿ:ಮದುವೆ ಮುನ್ನ ಅಭಿಮಾನಿಗಳಿಗೆ ಹರ್ಷಿಕಾ-ಭುವನ್ ಕೊಟ್ಟರು ಗುಡ್ ನ್ಯೂಸ್
‘ಖುಷಿ’ ಸಿನಿಮಾದ ಟ್ರೈಲರ್ ಮೆಚ್ಚುಗೆಗೆ ಪಾತ್ರವಾಗಿದ್ದು ಕಾಶ್ಮೀರಕ್ಕೆ ಹೋಗುವ ಕ್ರಿಶ್ಚಿಯನ್ ಯುವಕ ವಿಪ್ಲವ್ ಹಾಗೂ ಮುಸ್ಲಿಂ ಯುವತಿ ಬೇಗಂ ಭೇಟಿಯಾಗುತ್ತದೆ. ಆಕೆಯನ್ನು ನೋಡಿ ನಾಯಕ ಪ್ರೀತಿಯಲ್ಲಿ ಬೀಳುತ್ತಾನೆ. ನಂತರ ಆಕೆ ಮುಸ್ಲಿಂ ಅಲ್ಲ ಬ್ರಾಹ್ಮಣ ಕುಟುಂಬದ ಯುವತಿ ಅನ್ನೋದು ಗೊತ್ತಾಗುತ್ತದೆ. ಅಂದರೆ ಇದು ಕ್ರಿಶ್ಚಿಯನ್ ಯುವಕ ಹಾಗೂ ಹಿಂದೂ ಯುವತಿಯ ಪ್ರೇಮಕಥೆ ಅನ್ನೋದು ಅರ್ಥವಾಗುತ್ತದೆ.
ಇಬ್ಬರ ಮನೆಯಲ್ಲೂ ಮದುವೆಗೆ ಒಪ್ಪುವುದಿಲ್ಲ. ನಾಯಕಿಯ ತಂದೆಯಂತೂ ಇವರಿಬ್ಬರು ಮದುವೆ ಆದರೆ ಭಾರೀ ಸಮಸ್ಯೆಗಳಾಗುತ್ತದೆ ಎಂದು ಭವಿಷ್ಯ ನುಡಿಯುತ್ತಾನೆ. ಆದರೆ ಅದನ್ನೆಲ್ಲಾ ಮೀರಿ ಇಬ್ಬರು ಮದುವೆ ಆಗಿ ಒಂದು ವರ್ಷ ನಾವು ಆದರ್ಶ ದಂಪತಿಗಳಾಗಿ ಬದುಕಿ ತೋರಿಸುತ್ತೇವೆ ಎಂದು ಸವಾಲು ಹಾಕಿ ಮದುವೆ ಆಗುತ್ತಾರೆ. ಮದುವೆ ನಂತರ ಇಬ್ಬರ ನಡುವೆ ನಡೆಯುವ ಜಗಳ ಶುರುವಾಗುತ್ತದೆ. ಆಗಿದ್ದರೆ ಮುಂದೇನಾಗುತ್ತದೆ ಅನ್ನೋವುದನ್ನು ನೀವು ಸಿನಿಮಾದಲ್ಲಿ ನೋಡಬೇಕು.
Web Stories