ಸೌತ್ ನಟಿ ಸಮಂತಾ (Samantha) ನಟನೆಯ ಜೊತೆಗೆ ನಿರ್ಮಾಣ (Producer) ಕೂಡ ಮಾಡುತ್ತಿದ್ದಾರೆ. ಅವರ ನಿರ್ಮಾಣದ ‘ಶುಭಂ’ ಸಿನಿಮಾ ರಿಲೀಸ್ ರೆಡಿಯಿದೆ. ಇದರ ನಡುವೆ ಮಹಿಳೆಯರ ಪೀರಿಯಡ್ಸ್ (Periods) ಬಗ್ಗೆ ಮುಕ್ತವಾಗಿ ಸಂದರ್ಶನವೊಂದರಲ್ಲಿ ನಟಿ ಮಾತನಾಡಿದ್ದಾರೆ. ಇದನ್ನೂ ಓದಿ:ದಕ್ಷಿಣದ ಸಿನಿಮಾದಲ್ಲಿ ಬ್ಯುಸಿಯಾದ ಆಶಿಕಾ ರಂಗನಾಥ್

ಋತುಚಕ್ರ ಮುಜುಗರ ಅಥವಾ ಹಗುರವಾಗಿ ಪರಿಗಣಿಸುವ ವಿಚಾರವಲ್ಲ. ಇದು ನಮ್ಮ ಮನಸ್ಸು ಮತ್ತು ದೇಹದ ಮೇಲೆ ಪರಿಣಾಮ ಬೀರುತ್ತದೆ ಎಂಬುದನ್ನು ನಾವು ಪ್ರತಿ ವರ್ಷವೂ ನಿರಂತರವಾಗಿ ಕಲಿಯುತ್ತಲೇ ಇರುತ್ತೇವೆ ಎಂದು ನಟಿ ಮಾತನಾಡಿದ್ದಾರೆ.
ಅಂದಹಾಗೆ, ಅಲ್ಲು ಅರ್ಜುನ್ (Allu Arjun) ಮತ್ತು ಅಟ್ಲಿ ಕಾಂಬಿನೇಷನ್ ಸಿನಿಮಾಗೆ ಸಮಂತಾ ನಾಯಕಿಯಾಗಿ ಆಯ್ಕೆಯಾಗಿದ್ದಾರೆ ಎನ್ನಲಾದ ಸುದ್ದಿ ಚರ್ಚೆಗೆ ಗ್ರಾಸವಾಗಿದೆ. ಚಿತ್ರತಂಡದ ಕಡೆಯಿಂದ ಅಫಿಷಿಯಲ್ ಅಪ್‌ಡೇಟ್ ಸಿಗಲಿದೆಯಾ ಎಂಬುದನ್ನು ಕಾದುನೋಡಬೇಕಿದೆ.



