ಅಕ್ಕಿನೇನಿ ಕುಟುಂಬದಲ್ಲಿ ಮದುವೆ ಸಂಭ್ರಮ ಮನೆ ಮಾಡಿದೆ. ಸದ್ದಿಲ್ಲದೇ ನಾಗಚೈತನ್ಯ (Nagachaitanya) ಮತ್ತು ಶೋಭಿತಾ (Sobhita Dhulipala) ಮದುವೆಗೆ ತಯಾರಿ ನಡೆಯುತ್ತಿದೆ. ಈ ಜೋಡಿಯ ಮದುವೆ ಯಾವಾಗ ಎಂಬುದಕ್ಕೆ ಇದೀಗ ಉತ್ತರ ಸಿಕ್ಕಿದೆ. ಇದೇ ಡಿ.4ರಂದು ಹಸೆಮಣೆ ಏರೋದಕ್ಕೆ ಈ ಜೋಡಿ ಸಜ್ಜಾಗಿದೆ ಎಂಬ ವಿಚಾರ ಚರ್ಚೆಗೆ ಗ್ರಾಸವಾಗಿದೆ. ಇದನ್ನೂ ಓದಿ:ದರ್ಶನ್ ಭೇಟಿಯಾದ ನಿರ್ಮಾಪಕಿ ಶೈಲಜಾ ನಾಗ್, ಸಂಗೀತ ನಿರ್ದೇಶಕ ವಿ.ಹರಿಕೃಷ್ಣ
ಇತ್ತೀಚೆಗೆ ಸದ್ದಿಲ್ಲದೇ ಶೋಭಿತಾ ಜೊತೆ ನಾಗಚೈತನ್ಯ ಅವರ ನಿಶ್ಚಿತಾರ್ಥ ಜರುಗಿತ್ತು. ಇದೀಗ ಹೊಸ ಬಾಳಿಗೆ ಕಾಲಿಡಲು ರೆಡಿಯಾಗಿದ್ದಾರೆ. ಇದೇ ಡಿಸೆಂಬರ್ 4ರಂದು ಶೋಭಿತಾ ಜೊತೆ ಸಮಂತಾ ಮಾಜಿ ಪತಿ ನಾಗಚೈತನ್ಯ ಮದುವೆ ವಿದೇಶದಲ್ಲಿ ಜರುಗಲಿದೆ ಎನ್ನಲಾದ ಸುದ್ದಿಯೊಂದು ಹರಿದಾಡುತ್ತಿದೆ. ಆ ನಂತರ ಹೈದರಾಬಾದ್‌ನಲ್ಲಿ ಅದ್ಧೂರಿಯಾಗಿ ಆರತಕ್ಷತೆ ಕಾರ್ಯಕ್ರಮದಲ್ಲಿ ನಡೆಯಲಿದೆ ಎನ್ನಲಾಗಿದೆ. ಈ ಸುದ್ದಿ ಅದೆಷ್ಟರ ಮಟ್ಟಿಗೆ ನಿಜ ಎಂಬುದನ್ನು ಕುಟುಂಬಸ್ಥರು ಅಧಿಕೃತವಾಗಿ ತಿಳಿಸುವವರೆಗೂ ಕಾಯಬೇಕಿದೆ.
ಈ ಹಿಂದೆ 2017ರಲ್ಲಿ ಸಮಂತಾ ಜೊತೆ ನಾಗಚೈತನ್ಯ ಮದುವೆಯಾಗಿದ್ದರು. ಹಿಂದೂ ಮತ್ತು ಕ್ರಿಶ್ಚಿಯನ್ ಪಪದ್ಧತಿಯಂತೆ ಈ ಮದುವೆ ಜರುಗಿತ್ತು. ಆದರೆ ಕೆಲ ಮನಸ್ತಾಪಗಳಿಂದ 2021ರಲ್ಲಿ ಇಬ್ಬರೂ ಡಿವೋರ್ಸ್ ಪಡೆದು ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಿದರು.