ಚೆನ್ನೈ: ದಕ್ಷಿಣ ಭಾರತದ ಬಹುಬೇಡಿಕೆಯ ನಟಿ ಸಮಂತಾ ರುತ್ ಪ್ರಭು ಇದೇ ಮೊದಲ ಬಾರಿಗೆ ಐಟಂ ಸಾಂಗ್ ಗೆ ಸ್ಟೆಪ್ ಹಾಕಿದ್ದು, ರಿಲೀಸ್ ಆದ ಒಂದೇ ದಿನದಲ್ಲಿ 11 ಮಿಲಿಯನ್(1.1 ಕೋಟಿಗೂ) ಗೂ ಹೆಚ್ಚು ವ್ಯೂಸ್ ಪಡೆದುಕೊಂಡಿದೆ.
Advertisement
ಅಲ್ಲು ಅರ್ಜುನ್ ಮತ್ತು ರಶ್ಮಿಕಾ ಮಂದಣ್ಣ ನಟನೆಯ ‘ಪುಷ್ಪ’ ಸಿನಿಮಾದಲ್ಲಿ ಸಮಂತಾ ‘ಊ ಅಂತಾವಾ ಊ ಊ ಅಂತಾವಾ’ ಎಂಬ ಐಟಂ ಸಾಂಗ್ ಗೆ ಹೆಜ್ಜೆ ಹಾಕಿದ್ದಾರೆ. ಈ ಸಾಂಗ್ ನ ಲಿರಿಕಲ್ ವೀಡಿಯೋವನ್ನು ನಿನ್ನೆ ರಿಲೀಸ್ ಮಾಡಲಾಗಿತ್ತು. ಈ ಸಾಂಗ್ ನಲ್ಲಿ ಸ್ಯಮ್ ಬೋಲ್ಡ್ ಲುಕ್ ನೀಡಿದ್ದು, ಫುಲ್ ಜೋಶ್ ನಲ್ಲಿ ಡ್ಯಾನ್ಸ್ ಮಾಡಿದ್ದಾರೆ. ಈ ವೀಡಿಯೋ ನೋಡಿದ ಅವರ ಅಭಿಮಾನಿಗಳು ನಾಗಚೈತನ್ಯ ಜೊತೆಗಿನ ವಿಚ್ಛೇದನದ ಬಳಿಕ ಇದು ಇವರ ಕಾಮ್‍ಬ್ಯಾಕ್ ಎಂದು ಖುಷ್ ಆಗಿದ್ದಾರೆ. ಇದನ್ನೂ ಓದಿ: ಅರಿಶಿನ ಶಾಸ್ತ್ರ ಸಂಭ್ರಮದ ಫೋಟೋ ಹಂಚಿಕೊಂಡ ಕತ್ರಿನಾ ಕೈಫ್
Advertisement
Advertisement
ಈ ಸಾಂಗ್ ಅನ್ನು ಇಂದ್ರಾವತಿ ಚೌಹಾಣ್ ಹಾಡಿದ್ದು, ಖ್ಯಾತ ಸಂಗೀತ ನಿರ್ದೇಶಕ ದೇವಿ ಶ್ರೀಪ್ರಸಾದ್ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. ಈ ಸಾಂಗ್ ಗೆ ಸಮಂತಾ ಸಖತ್ ಆಗಿ ಹೆಜ್ಜೆ ಹಾಕಿದ್ದಾರೆ. ಅದು ಅಲ್ಲದೇ ಸಮಂತಾ ಇದೇ ಮೊಟ್ಟಮೊದಲ ಬಾರಿಗೆ ಐಟಂ ಸಾಂಗ್ ನಲ್ಲಿ ಕಾಣಿಸಿಕೊಂಡಿದ್ದು, ಸಮಂತಾ ಲುಕ್ ಸಿನಿರಸಿಕರ ಮೆಚ್ಚುಗೆಗೆ ಪಾತ್ರವಾಗಿದೆ.
Advertisement
‘ಪುಷ್ಪ’ ಸಿನಿಮಾ ಇದೇ ಡಿಸೆಂಬರ್ 17 ರಂದು ದೇಶಾದ್ಯಂತ ಬಹು ಭಾಷೆಗಳಲ್ಲಿ ಬಿಡುಗಡೆಗೆ ಸಿದ್ಧವಾಗಿದ್ದು, ಅಭಿಮಾನಿಗಳು ಈ ಸಿನಿಮಾಗಾಗಿ ಕಾಯುತ್ತಿದ್ದಾರೆ.