ಟಾಲಿವುಡ್ (Tollywood) ನಟಿ ಸಮಂತಾ(Samantha) ಸದ್ಯ ʻಯಶೋದಾʼ ಚಿತ್ರದ ಟ್ರೈಲರ್ ಮೂಲಕ ಸೌಂಡ್ ಮಾಡುತ್ತಿದ್ದಾರೆ. ಈ ಬೆನ್ನಲ್ಲೇ ತಮ್ಮ ಆರೋಗ್ಯದ ಕುರಿತು ಸಮಂತಾ ಇದೀಗ ಮೌನ ಮುರಿದಿದ್ದಾರೆ. ಆರೋಗ್ಯದ ಸ್ಥಿತಿಯ ಬಗ್ಗೆ ನಟಿ ರಿವೀಲ್ ಮಾಡಿದ್ದಾರೆ.
Advertisement
`ಯಶೋದಾ'(Yashoda) ಚಿತ್ರದ ಟ್ರೈಲರ್ನಿಂದ ಸಮಂತಾ ಸಿಕ್ಕಾಪಟ್ಟೆ ಹೈಪ್ ಕ್ರಿಯೇಟ್ ಮಾಡಿದ್ದಾರೆ. `ಯಶೋದಾ’ ಚಿತ್ರದ ಟ್ರೈಲರ್ಗೆ ಒಳ್ಳೆಯ ಪ್ರತಿಕ್ರಿಯೆ ಬಂದಿದೆ. ಈ ವಿಚಾರವಾಗಿ ಅಭಿಮಾನಿಗಳಿಗೆ ಧನ್ಯವಾದವನ್ನ ತಿಳಿಸುವುದರ ಜೊತೆಗೆ ತಾವು ಮೈಯೋಸಿಟಿಸ್ ಎಂಬ ಅಪರೂಪದ ಕಾಯಿಲೆಯಿಂದ ಬಳಲುತ್ತಿರುವುದಾಗಿ ಫೋಟೋ ಜೊತೆ ಪೋಸ್ಟ್ ಮಾಡಿ ತಿಳಿಸಿದ್ದಾರೆ.
Advertisement
Advertisement
ವೈದ್ಯಕೀಯ ಸ್ಥಿತಿಯಲ್ಲಿ ರೆಕಾರ್ಡಿಂಗ್ ಸ್ಟುಡಿಯೋದಲ್ಲಿರುವ ತಮ್ಮ ಫೋಟೋವನ್ನ ಸಮಂತಾ ಶೇರ್ ಮಾಡಿ, ʻಯಶೋದಾʼ ಟ್ರೈಲರ್ಗೆ ಅಭಿಮಾನಿಗಳ ಪ್ರತಿಕ್ರಿಯೆ ಧನ್ಯವಾದ ತಿಳಿಸಿದ್ದಾರೆ. ಮೈಯೋಸಿಟಿಸ್ ಹೆಸರಿನ ಅಪರೂಪದ ಕಾಯಿಲೆ ಇದೆ. ಈ ಕಾಯಿಲೆ ಬಂದರೆ ವ್ಯಕ್ತಿ ಕುಗ್ಗುತ್ತಾನೆ. ದೇಹದಲ್ಲಿ ನೋವು ಕಾಣಿಸಿಕೊಳ್ಳುತ್ತದೆ. ಸ್ನಾಯು ಸೆಳೆತ ಶುರುವಾಗುತ್ತದೆ. ಸ್ವಲ್ಪ ದೂರ ನಡೆದರೂ ಸುಸ್ತು ಎನಿಸುತ್ತದೆ. 30-60ರ ವಯಸ್ಸಿನವರಲ್ಲಿ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಇದಕ್ಕೆ ಸರಿಯಾದ ಚಿಕಿತ್ಸೆ ಕೊಡದೆ ಇದ್ದರೆ ದಿನ ಕಳೆದಂತೆ ಪರಿಸ್ಥಿತಿ ಬೇರೆಯ ಹಂತಕ್ಕೆ ಹೋಗುತ್ತದೆ. ಈಗ ಸಮಂತಾ ಕೂಡ ಇದೇ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಈ ಬಗ್ಗೆ ಸಮಂತಾ ಸೋಶಿಯಲ್ ಮೀಡಿಯಾದಲ್ಲಿ ಹೇಳಿಕೊಂಡಿದ್ದಾರೆ. ಇದನ್ನೂ ಓದಿ:ಬಿಡುಗಡೆಯ ದಿನವೇ 2000 ಪ್ರದರ್ಶನ ಕಂಡ ಗಂಧದ ಗುಡಿ
Advertisement
View this post on Instagram
ನಾನು ಒಳ್ಳೆಯ ದಿನ ಮತ್ತು ಕೆಟ್ಟ ದಿನಗಳನ್ನ ಹೊಂದಿದ್ದೇನೆ. ದೈಹಿಕವಾಗಿ ಮತ್ತು ಭಾವನಾತ್ಮಕವಾಗಿ ಕೂಡ. ಇನ್ನೂ ಒಂದು ದಿನವನ್ನು ಎದುರಿಸಲು ಸಾಧ್ಯವಿಲ್ಲ ಎಂದು ಅನಿಸಿದಾಗಲೂ, ಹೇಗಾದರೂ ಆ ಕ್ಷಣ ಹಾದು ಹೋಗುತ್ತದೆ. ನಿಮ್ಮೆಲ್ಲರನ್ನೂ ನಾನು ಪ್ರೀತಿಸುತ್ತೇನೆ ಎಂದು ಸಮಂತಾ ಪೋಸ್ಟ್ ಮಾಡಿದ್ದಾರೆ. ನೆಚ್ಚಿನ ನಟಿ ಸಮಂತಾ ಆದಷ್ಟೂ ಬೇಗ ಗುಣಮುಖರಾಗಿ ಬರಲಿ ಎಂಬುದೇ ಅಭಿಮಾನಿಗಳ ಆಶಯ.
Live Tv
[brid partner=56869869 player=32851 video=960834 autoplay=true]