ದಕ್ಷಿಣದ ಖ್ಯಾತ ತಾರೆ ಸಮಂತಾ ರುತ್ ಪ್ರಭು ಹೈದರಾಬಾದ್ ತೊರೆದಿದ್ದಾರೆ. ಇನ್ಮುಂದೆ ಅವರು ಮುಂಬೈನಲ್ಲಿ ನೆಲೆಸಲಿದ್ದಾರೆ. ಅದಕ್ಕಾಗಿ ಸಮಂತಾ ದುಬಾರಿಯ ಬೆಲೆಯ ಫ್ಲ್ಯಾಟ್ ಖರೀದಿ ಮಾಡಿದ್ದು, ಅದಕ್ಕೆ 15 ಕೋಟಿ ರೂಪಾಯಿ ನೀಡಿದ್ದಾರೆ. ಅದು ಮೂರು ಬೆಡ್ ರೂಮ್ ವುಳ್ಳ ಮನೆಯಾಗಿದೆ ಎಂದು ವರದಿ ಆಗಿದೆ. ಇನ್ಮುಂದೆ ಸಮಂತಾ ಅದೇ ಮನೆಯಲ್ಲಿ ವಾಸವಿರಲಿದ್ದಾರೆ.
ಅನಾರೋಗ್ಯದ ಕಾರಣದಿಂದಾಗಿ ಸ್ವಲ್ಪ ದಿನ ಸಿನಿಮಾ ರಂಗದಿಂದ ದೂರವಿದ್ದ ಸಮಂತಾ, ಇದೀಗ ಸಾಲು ಸಾಲು ಸಿನಿಮಾಗಳ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಮತ್ತಷ್ಟು ಸಿನಿಮಾಗಳನ್ನು ಒಪ್ಪಿಕೊಂಡಿದ್ದಾರೆ. ಜೊತೆಗೆ ವೆಬ್ ಸೀರಿಸ್ ಒಂದಕ್ಕೆ ಸಹಿ ಮಾಡಿರುವುದರಿಂದ ಮುಂಬೈನಲ್ಲೇ ಉಳಿಯಲಿದ್ದಾರೆ. ಅಲ್ಲಿಂದಲೇ ಚಿತ್ರೀಕರಣದಲ್ಲಿ ಪಾಲ್ಗೊಳ್ಳಲಿದ್ದಾರೆ ಎನ್ನುತ್ತಿವೆ ಮೂಲಗಳು. ಇದನ್ನೂ ಓದಿ:ಮದುವೆ ಫೋಟೋ ಹಂಚಿಕೊಂಡ ಬೆನ್ನಲ್ಲೇ ವೈರಲಾಯ್ತು ಸಿದ್- ಕಿಯಾರಾ ಆಮಂತ್ರಣ ಪತ್ರಿಕೆ
ಸಮಂತಾ ಎರಡನೇ ಹಿಂದಿ ಸಿನಿಮಾವನ್ನು ಒಪ್ಪಿಕೊಂಡಿದ್ದು, ಈ ಸಿನಿಮಾದ ಶೂಟಿಂಗ್ ಗಾಗಿಯೇ ಅವರು ಹೆಚ್ಚು ದಿನಗಳ ಕಾಲ ಮುಂಬೈನಲ್ಲಿ ಇರಬೇಕಾದ ಸನ್ನಿವೇಶ ಎದುರಾಗಿದೆ. ವರುಣ್ ಧವನ್ ಜೊತೆಗಿನ ಆ ಸಿನಿಮಾದಲ್ಲಿ ಸಮಂತಾ ನಾಯಕಿಯಾಗಿ ನಟಿಸುತ್ತಿದ್ದಾರೆ. ಈ ಎಲ್ಲ ಕಾರಣದಿಂದಾಗಿಯೇ ಅವರು ಮುಂಬೈಗೆ ಶಿಫ್ಟ್ ಆಗಿದ್ದಾರಂತೆ. ಜೊತೆಗೆ ಹೊಸ ವಾತಾವರಣವೂ ಅವರಿಗೆ ಬೇಕಾಗಿದ್ದರಿಂದ ಮುಂಬೈ ಸೂಕ್ತ ಎನಿಸಿದೆಯಂತೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k