ನವದೆಹಲಿ: ಉತ್ತರ ಪ್ರದೇಶದ ಸಂಬಾಲ್‌ನಲ್ಲಿರುವ ವಿಚಾರಣಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಅಲಹಾಬಾದ್ ಹೈಕೋರ್ಟ್‌ಗೆ ತೆರಳುವಂತೆ ಜಾಮಾ ಮಸೀದಿಯ (Jama Masjid) ಶಾಹಿ ಈದ್ಗಾ ಸಮಿತಿಗೆ ಸುಪ್ರೀಂ ಕೋರ್ಟ್ ಇಂದು ಸೂಚಿಸಿದೆ. ಅಲ್ಲದೇ ಈದ್ಗಾ ಸಮಿತಿಯು ಹೈಕೋರ್ಟ್‌ಗೆ ತೆರಳುವವರೆಗೆ ಮಸೀದಿ ಸರ್ವೆ (Sambhal Mosque Survey) ಪ್ರಕರಣವನ್ನು ಮುಂದುವರಿಸದಂತೆ ವಿಚಾರಣಾ ನ್ಯಾಯಾಲಯಕ್ಕೆ ಶುಕ್ರವಾರ ಹೇಳಿದೆ.
Advertisement
ಮಸೀದಿಯ ಸರ್ವೆ ಕಾರ್ಯಕ್ಕೆ ಟ್ರಯಲ್ ಕೋರ್ಟ್ ನೀಡಿದ ಆದೇಶವನ್ನು ಪ್ರಶ್ನಿಸಿ ಸಂಭಾಲ್ ಶಾಹಿ ಜಾಮಾ ಮಸೀದಿ ಸಮಿತಿ ಸಲ್ಲಿಸಿದ್ದ ಮನವಿಯ ಮೇರೆಗೆ ಸುಪ್ರೀಂ ಕೋರ್ಟ್ (Supreme Court) ಈ ಆದೇಶ ನೀಡಿತು. ಇದನ್ನೂ ಓದಿ: ದೆಹಲಿಯಲ್ಲಿ ಮೋದಿ ಭೇಟಿಯಾದ ಸಿಎಂ – ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ಬಿಡುಗಡೆಗೆ ಮನವಿ
Advertisement
ಸಿಜೆಐ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಪಿ.ವಿ ಸಂಜಯ್ ಕುಮಾರ್ ಅವರಿದ್ದ ದ್ವಿಸದಸ್ಯ ಪೀಠವು ಪ್ರಕರಣದ ವಿಚಾರಣೆ ನಡೆಸಿತು. ಮಸೀದಿಯ ಸಮೀಕ್ಷೆಯನ್ನು ನಡೆಸಿದ ಆಯುಕ್ತರ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿಡಬೇಕು. ಮುಂದಿನ ಆದೇಶ ಬರುವವರೆಗೆ ವರದಿಯನ್ನು ತೆರೆಯಬಾರದು ಎಂದು ನ್ಯಾಯಪೀಠ ಹೇಳಿತು.
Advertisement
Advertisement
ಸದ್ಯಕ್ಕೆ ಸಂಭಾಲ್‌ನಲ್ಲಿ ಶಾಂತಿ ಮತ್ತು ಸೌಹಾರ್ದತೆ ಕಾಪಾಡಬೇಕು. ಅದಕ್ಕಾಗಿ ಕ್ರಮವನ್ನು ಕಾಯ್ದರಿಸುತ್ತೇವೆ. ಸಮೀಕ್ಷೆ ಆಗಬಾರದು ಎಂದಲ್ಲ. ಆದ್ರೆ ಸದ್ಯಕ್ಕೆ ಸಂಪೂರ್ಣವಾಗಿ ತಟಸ್ಥರಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಬೇಕು. ಹಾಗಾಗಿ ಜನವರಿ 8ರ ವರೆಗೆ ಯಾವುದೇ ಆದೇಶ ಪ್ರಕಟಿಸದಂತೆ ಎಂದು ಕೋರ್ಟ್ ತಿಳಿಸಿದೆ. ಇದನ್ನೂ ಓದಿ: 19ರ ಯುವತಿ ಮೇಲೆ ಅತ್ಯಾಚಾರ, ಕೊಲೆ – ಕರ್ನಾಟಕ ಸೇರಿ 4 ರಾಜ್ಯಗಳಿಗೆ ಬೇಕಿದ್ದ ಸರಣಿ ಹಂತಕ ಅರೆಸ್ಟ್
ಇದಕ್ಕೂ ಮುನ್ನ ವಿಚಾರಣಾ ನ್ಯಾಯಾಲಯದ ಆದೇಶವು ಈ ಸ್ಥಳದಲ್ಲಿ ಹಿಂದೆ ದೇವಾಲಯವಿತ್ತು ಎಂಬ ಅರ್ಜಿದಾರರ ಹಕ್ಕುಗಳ ಆಧಾರದ ಮೇಲೆ ಮಸೀದಿಯ ಸಮೀಕ್ಷೆಯನ್ನು ಕಡ್ಡಾಯಗೊಳಿಸಿತ್ತು. ಮುಂದಿನ ವಿಚಾರಣೆಯನ್ನು ಮುಂದೂಡಿತ್ತು. ಇದನ್ನೂ ಓದಿ: ಅಂಬುಲೆನ್ಸ್‌ನಲ್ಲಿ 16ರ ಬಾಲಕಿ ಮೇಲೆ ಗ್ಯಾಂಗ್ ರೇಪ್ – ಇಬ್ಬರು ಅರೆಸ್ಟ್