ಲಕ್ನೋ: ಕಿವಿ ಗಡಚಿಕ್ಕುವ ಧ್ವನಿವರ್ಧಕ ಬಳಸಿದ್ದಕ್ಕೆ ಸಂಭಲ್ ಈದ್ಗಾ ಮಸೀದಿ ಇಮಾಂಗೆ (Sambhal Mosque Imam) 2 ಲಕ್ಷ ರೂ. ದಂಡ ವಿಧಿಸಲಾಗಿದೆ.
ಈಚೆಗೆ, ಸಂಭಲ್‌ನಲ್ಲಿ ಮೊಘಲರ ಕಾಲದ ಮಸೀದಿಯ ಸಮೀಕ್ಷೆ ವೇಳೆ ನಡೆದ ಹಿಂಸಾಚಾರದಲ್ಲಿ ನಾಲ್ವರು ಬಲಿಯಾಗಿದ್ದರು. ಇದರ ಬೆನ್ನಲ್ಲೇ ಇಲ್ಲಿನ ಇನ್ನೊಂದು ಮಸೀದಿ ಸುದ್ದಿಯಲ್ಲಿದೆ. ಕೋಟ್ ಗರ್ವಿ ಪ್ರದೇಶದ ಅನಾರ್ ವಾಲಿ ಮಸೀದಿಯಲ್ಲಿ ಈ ಘಟನೆ ನಡೆದಿದೆ. ಇದನ್ನೂ ಓದಿ: ಒಂದು ದೇಶ ಒಂದು ಚುನಾವಣೆ- ಜಾಣ್ಮೆಯ ಹೆಜ್ಜೆಯಿಟ್ಟ ಕೇಂದ್ರ
Advertisement
Advertisement
ಮಸೀದಿಯಲ್ಲಿ ಹೆಚ್ಚಿನ ಧ್ವನಿಯಲ್ಲಿ ಧ್ವನಿವರ್ಧಕವನ್ನು ಬಳಸಲಾಗುತ್ತಿತ್ತು. ಈ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ಪ್ರೇರೇಪಿಸಿತು. 2 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ ಎಂದು ಸಂಭಾಲ್ ಸಬ್- ವಿಭಾಗೀಯ ಮ್ಯಾಜಿಸ್ಟ್ರೇಟ್ (SDM) ವಂದನಾ ಮಿಶ್ರಾ ತಿಳಿಸಿದ್ದಾರೆ.
Advertisement
Advertisement
ಕೋಟ್ ಗರ್ವಿ ಪ್ರದೇಶದಲ್ಲಿ ಮೊಘಲರ ಕಾಲದ ಶಾಹಿ ಜಾಮಾ ಮಸೀದಿಯ ಸಮೀಕ್ಷೆ ವೇಳೆ ಹಿಂಸಾಚಾರ ನಡೆದಿತ್ತು. ಸ್ಥಳೀಯರು ಮತ್ತು ಭದ್ರತಾ ಸಿಬ್ಬಂದಿಗಳ ನಡುವಿನ ಘರ್ಷಣೆಯ ಏರ್ಪಟ್ಟಿತ್ತು. ಇದನ್ನೂ ಓದಿ: ಕೋಲ್ಕತ್ತಾ ಟ್ರೈನಿ ವೈದ್ಯೆ ಅತ್ಯಾಚಾರ, ಕೊಲೆ ಕೇಸ್ – ಆರೋಪಿಗಳಿಗೆ ಜಾಮೀನು