ನವದೆಹಲಿ: ಸಲಿಂಗ ವಿವಾಹಕ್ಕೆ (Same-Sex Marriage) ಮಾನ್ಯತೆ ಕೋರಿ ಸುಪ್ರೀಂ ಕೋರ್ಟ್ (Supreme Court) ಸಂವಿಧಾನಿಕ ಪೀಠದ ವಿಚಾರಣೆಗೂ ಮುನ್ನ ಇದೀಗ ಕೇಂದ್ರ ಮತ್ತೆ ತನ್ನ ನಿಲುವನ್ನು ಸ್ಪಷ್ಟಪಡಿಸಿದೆ. ಸಲಿಂಗ ವಿವಾಹಕ್ಕೆ ಕಾನೂನಿನ ಮಾನ್ಯತೆ ನೀಡುವುದನ್ನು ವಿರೋಧಿಸಿದೆ.
Advertisement
ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರ ನೇತೃತ್ವದ ಪೀಠ ಏಪ್ರಿಲ್ 18ರಂದು ಈ ಕುರಿತು ವಿಚಾರಣೆ ನಡೆಸಲಿದೆ. ಈ ಬಗ್ಗೆ ವಿಚಾರಣೆಗೆ ಒಂದು ದಿನ ಬಾಕಿ ಇರುವಾಗಲೇ ಕೇಂದ್ರ ಸಲಿಂಗ ವಿವಾಹ ಸಾಮಾಜಿಕ ನೀತಿಗೆ ವಿರುದ್ಧವಾಗಿದೆ. ಇದನ್ನು ಸಮಾಜಮುಖಿಯಾಗಿ ಅನೇಕರು ವಿರೋಧ ಮಾಡುತ್ತಾರೆ ಎಂದು ಹೇಳಿದೆ.
Advertisement
Advertisement
ಇದು ಭಿನ್ನ ಲಿಂಗೀಯ ಮದುವೆಯ ಮೇಲೆ ದೊಡ್ಡ ಪರಿಣಾಮವನ್ನು ಉಂಟುಮಾಡುತ್ತದೆ. ಸಲಿಂಗಿಗಳ ಮದುವೆ ಪರಿಕಲ್ಪನೆ ಹೊಸ ಸಾಮಾಜಿಕ ಸಂಸ್ಥೆಯನ್ನು ರಚಿಸುತ್ತದೆ. ಇದು ಮೂಲಭೂತವಾಗಿ ಶಾಸಕಾಂಗದ ಕಾರ್ಯವಾಗಿದ್ದು ನ್ಯಾಯಾಲಯಗಳು ನಿರ್ಧರಿಸುವ ವಿಷಯವಲ್ಲ. ಜನರ ಹಿತದೃಷ್ಟಿಯಿಂದ ಈ ಬಗ್ಗೆ ಸಂಸತ್ತಿನಲ್ಲಿ ಚರ್ಚೆಯಾಗಬೇಕು ಹಾಗೂ ತೀರ್ಮಾನವನ್ನು ತೆಗೆದುಕೊಳ್ಳಬೇಕು ಎಂದು ತಿಳಿಸಿದೆ. ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ಕೋರಿ ಸಲ್ಲಿಸಲಾಗಿರುವ ಅರ್ಜಿಗಳನ್ನು ವಜಾಗೊಳಿಸುವಂತೆ ಕೇಂದ್ರ ಸರ್ಕಾರದ ಅರ್ಜಿಯಲ್ಲಿ ಮನವಿ ಮಾಡಿದೆ. ಇದನ್ನೂ ಓದಿ: ಸೇನಾ ನೆಲೆಯಲ್ಲಿ ಸೈನಿಕರಿಗೆ ಗುಂಡಿಕ್ಕಿ ಹತ್ಯೆ – ಓರ್ವ ಯೋಧನ ಬಂಧನ
Advertisement
ಡಿವೈ ಚಂದ್ರಚೂಡ್ ನೇತೃತ್ವದ 5 ನ್ಯಾಯಾಧೀಶರ ಸಂವಿಧಾನ ಪೀಠ ಭಾರತದಲ್ಲಿ ಸಲಿಂಗ ವಿವಾಹಗಳಿಗೆ ಕಾನೂನು ಮಾನ್ಯತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ಏಪ್ರಿಲ್ 18ರಿಂದ ವಿಚಾರಣೆ ನಡೆಸುವುದಾಗಿ ತಿಳಿಸಿದೆ. ಸಾಂವಿಧಾನಿಕ ಪೀಠದ ಇತರ ನಾಲ್ವರು ನ್ಯಾಯಾಧೀಶರು ಸಮಾಜದ ಮೇಲೆ ಪರಿಣಾಮ ಬೀರುವ ವಿಚಾರ ಹಾಗೂ ವಿವಾದಾತ್ಮಕ ವಿಷಯದ ವಿಚಾರಣೆ ನಡೆಸಲಿದ್ದಾರೆ. ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್, ನ್ಯಾಯಮೂರ್ತಿ ಎಸ್ ರವೀಂದ್ರ ಭಟ್, ನ್ಯಾಯಮೂರ್ತಿ ಪಿಎಸ್ ನರಸಿಂಹ ಹಾಗೂ ನ್ಯಾಯಮೂರ್ತಿ ಹಿಮಾ ಕೊಹ್ಲಿ ಈ ಬಗ್ಗೆ ವಿಚಾರಣೆ ನಡೆಸಲಿದ್ದಾರೆ. ಇದನ್ನೂ ಓದಿ: ಹೆಚ್‍ಡಿಡಿ ಮುಂದೆ ಗಳಗಳನೆ ಅತ್ತ ನಿಖಿಲ್ ಕುಮಾರಸ್ವಾಮಿ