ನವದೆಹಲಿ: ಸಲಿಂಗ ವಿವಾಹ (Same Sex Marriages) ವಿಚಾರ ಸಂಸತ್ತಿನ ವ್ಯಾಪಿಗೆ ಬರುವ ಹಿನ್ನೆಲೆ ಅದಕ್ಕೆ ಮಾನ್ಯತೆ ನೀಡುವ ಬಗ್ಗೆ ಸಂಸತ್ತು ನಿರ್ಧರಿಸಬೇಕು, ಇದರಲ್ಲಿ ಸುಪ್ರೀಂಕೋರ್ಟ್ (Supreme Court) ಮಧ್ಯಪ್ರವೇಶ ಮಾಡಬಾರದು ಎಂದು ಕೇಂದ್ರ ಸರ್ಕಾರದ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಿದ್ದಾರೆ. ಒಂದು ವೇಳೆ ವಿಚಾರಣೆ ನಡೆಸುವುದಾದರೆ ಅರ್ಜಿ ಸಿಂಧುತ್ವದ ಬಗ್ಗೆ ಮೊದಲು ವಿಚಾರಣೆ ನಡೆಯಬೇಕು ಎಂದು ಅವರು ಆಗ್ರಹಿಸಿದರು.
ಸಲಿಂಗ ವಿವಾಹಗಳ ಕಾನೂನಿನ ಮಾನ್ಯತೆ ನೀಡುವ ಬಗ್ಗೆ ಸುಪ್ರೀಂಕೋರ್ಟ್‌ನ ಸಾಂವಿಧಾನಿಕ ಪೀಠದಲ್ಲಿ ವಿಚಾರಣೆ ಆರಂಭವಾಗಿದೆ. ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ನೇತೃತ್ವದಲ್ಲಿ ವಿಚಾರಣೆ ಆರಂಭವಾಗಿದೆ. ಇಂದು ವಿಚಾರಣೆ ವೇಳೆ ವಾದ ಆರಂಭಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಸುಪ್ರೀಂಕೋರ್ಟ್ ಮಧ್ಯಪ್ರವೇಶಕ್ಕೆ ಆಕ್ಷೇಪ ವ್ಯಕ್ತಪಡಿಸಿದರು. ಸಲಿಂಗ ವ್ಯಕ್ತಿಗಳು ಲೈಂಗಿಕ ಸಂಬಂಧ ಹೊಂದುವುದನ್ನು ಭಾರತೀಯ ಕುಟುಂಬ ಘಟಕದ ಪರಿಕಲ್ಪನೆಗೆ ಹೋಲಿಸಲಾಗುವುದಿಲ್ಲ ಎಂದರು.
Advertisement
Advertisement
ಇದಕ್ಕೆ ವಿರೋಧ ವ್ಯಕ್ತಪಡಿಸಿದ ಸಿಜೆಐ ಡಿ.ವೈ ಚಂದ್ರಚೂಡ್ ಮೊದಲು ನಾವು ಅರ್ಜಿದಾರರ ವಾದವನ್ನು ಆಲಿಸುತ್ತೇವೆ. ಆ ಬಳಿಕ ಮುಂದಿನ ಸಂಗತಿಗಳ ಬಗ್ಗೆ ನಿರ್ಧಾರ ಮಾಡುತ್ತೇವೆ ಎಂದು ತಿರುಗೇಟು ನೀಡಿದರು. ಅರ್ಜಿದಾರರ ಪರ ವಾದ ಮಂಡಿಸಿದ ವಕೀಲರು ಒಬ್ಬರ ಆಯ್ಕೆಯ ವ್ಯಕ್ತಿಯನ್ನು ಮದುವೆಯಾಗುವ ಹಕ್ಕನ್ನು LGBTQIA+ ನಾಗರಿಕರಿಗೂ ವಿಸ್ತರಿಸಬೇಕು ಎಂದು ವಾದಿಸಿದರು. ಇದನ್ನೂ ಓದಿ: ಅಣ್ಣಾಮಲೈ ವಿರುದ್ಧವೂ ಕಿಡಿಕಾರಿದ ಜಗದೀಶ್ ಶೆಟ್ಟರ್
Advertisement
Advertisement
ಇದಕ್ಕೆ ವಿರೋಧ ವ್ಯಕ್ತಪಡಿಸಿ ವಾದ ಮಂಡಿಸಿದ ಇಸ್ಲಾಮಿಕ್ ಧಾರ್ಮಿಕ ಸಂಸ್ಥೆ ಜಮಿಯತ್-ಉಲಮಾ-ಐ-ಹಿಂದ್ ಪರ ವಕೀಲ ಕಪಿಲ್ ಸಿಬಲ್, ಸಲಿಂಗ ವಿವಾಹದಂತಹ ಪರಿಕಲ್ಪನೆಗಳು ಪಾಶ್ಚಿಮಾತ್ಯ ಸಂಸ್ಕೃತಿಯಿಂದ ಹುಟ್ಟಿಕೊಂಡಿವೆ ಮತ್ತು ಅದು ಆಮೂಲಾಗ್ರ ನಾಸ್ತಿಕ ವಿಶ್ವ ದೃಷ್ಟಿಕೋನವನ್ನು ಹೊಂದಿದೆ. ಅದನ್ನು ಭಾರತದ ಮೇಲೆ ಹೇರಬಾರದು ಎಂದು ವಾದಿಸಿದರು. ಸಲಿಂಗ ವಿವಾಹಕ್ಕೆ ಮಾನ್ಯತೆ ಕೋರಿ 20 ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆಯಾಗಿದ್ದು ಇವುಗಳ ವಿಚಾರಣೆ ಮುಂದುವರಿದಿದೆ. ಇದನ್ನೂ ಓದಿ: ಸಿದ್ದು ಕುಟುಂಬದ ಮೂರನೇ ತಲೆಮಾರು ರಾಜಕೀಯ ಫೀಲ್ಡ್‌ಗೆ ಎಂಟ್ರಿ