ನವದೆಹಲಿ: ಸಲಿಂಗ ವಿವಾಹ (Same sex marriage) ಕುರಿತಾಗಿ ಲೈಂಗಿಕ ಅಲ್ಪಸಂಖ್ಯಾತ ಸಮುದಾಯದ (LGBTQIA) ಸಲಹೆಗಳನ್ನು ಪರಿಗಣಿಸಲು ಸಮಿತಿಯನ್ನು ರಚಿಸುವುದಾಗಿ ಸುಪ್ರೀಂ ಕೋರ್ಟ್‍ಗೆ (Supreme Court) ಕೇಂದ್ರ ಸರ್ಕಾರ (Central Government) ಬುಧವಾರ ತಿಳಿಸಿದೆ.
ಲೈಂಗಿಕ ಅಲ್ಪಸಂಖ್ಯಾತ ಸಮುದಾಯ ಒಂದೇ ಲಿಂಗದ ವ್ಯಕ್ತಿಗಳೊಂದಿಗಿನ ಸಂಬಂಧದಲ್ಲಿ ಎದುರಿಸುತ್ತಿರುವ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಸಲಹೆಗಳನ್ನು ಪಡೆಯಲಾಗುವುದು. ಇದಕ್ಕಾಗಿ ಸಂಪುಟ ಕಾರ್ಯದರ್ಶಿ ನೇತೃತ್ವದ ಸಮಿತಿಯನ್ನು ರಚಿಸಲಾಗುತ್ತದೆ. ಇದರಿಂದ ಸಮುದಾಯದ ಎದುರಿಸುತ್ತಿರುವ ಸಮಸ್ಯೆಗಳನ್ನು ಕಲೆಹಾಕಲು ಅನುಕೂಲವಾಗುತ್ತದೆ ಎಂದು ಕೇಂದ್ರ ಹೇಳಿಕೊಂಡಿದೆ. ಇದನ್ನೂ ಓದಿ: ಪರಸ್ಪರ ಒಪ್ಪಿಗೆ ಇದ್ದಲ್ಲಿ ವಿಚ್ಛೇದನಕ್ಕೆ ಆರು ತಿಂಗಳ ಅಗತ್ಯವಿಲ್ಲ – ಸುಪ್ರೀಂ ತೀರ್ಪು
Advertisement
Advertisement
ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಸಲಿಂಗ ವಿವಾಹಗಳನ್ನು ಕಾನೂನುಬದ್ಧಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆಯ ಸಂದರ್ಭದಲ್ಲಿ ಕೇಂದ್ರದ ನಿರ್ಧಾರವನ್ನು ಪ್ರಕಟಿಸಿದರು.
Advertisement
ಅರ್ಜಿದಾರರು ಸಲಿಂಗ ವಿವಾಹಗಳನ್ನು ಕಾನೂನಿನಡಿಯಲ್ಲಿ ತರುವಂತೆ ವಾದಿಸಿತ್ತು. ಆದರೆ ಈ ಅರ್ಜಿಗಳಿಗೆ ಕೇಂದ್ರ ಸರ್ಕಾರ ವಿರೋಧ ವ್ಯಕ್ತಪಡಿಸಿತ್ತು. ಸುಪ್ರೀಂಗೆ ಸಲ್ಲಿಸಿದ ಅಫಿಡವಿಟ್‍ನಲ್ಲಿ ಕೇಂದ್ರವು, ಒಂದೇ ಲಿಂಗದ ವ್ಯಕ್ತಿಗಳು ಲೈಂಗಿಕ ಸಂಬಂಧ ಹೊಂದುವುದನ್ನು ಭಾರತೀಯ ಕುಟುಂಬದ ಪರಿಕಲ್ಪನೆಗೆ ಹೋಲಿಸಲಾಗುವುದಿಲ್ಲ ಎಂದು ಹೇಳಿತ್ತು.
Advertisement
ಏ.27 ರಂದು ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ ಸಲಿಂಗ ವಿವಾಹಗಳಿಗೆ ಕಾನೂನು ಮಾನ್ಯತೆ ನೀಡುವುದು ಶಾಸಕಾಂಗದ ವ್ಯಾಪ್ತಿಯಲ್ಲಿ ಬರುತ್ತದೆ ಎಂದು ಸುಪ್ರೀಂ ಹೇಳಿತ್ತು. ಸಲಿಂಗ ಸಂಬಂಧದಲ್ಲಿರುವ ಜನರು ಬಹಿಷ್ಕಾರಕ್ಕೊಳಗಾಗದಂತೆ ನೋಡಿಕೊಳ್ಳುವ ಪ್ರಾಮುಖ್ಯತೆಯನ್ನು ಸಿಜೆಐ ಮತ್ತಷ್ಟು ಒತ್ತಿ ಹೇಳಿದ್ದಾರೆ.
ಮುಖ್ಯ ನ್ಯಾಯಮೂರ್ತಿ (Chief Justice of India) ಡಿವೈ ಚಂದ್ರಚೂಡ್ (DY Chandrachud), ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಎಸ್ ರವೀಂದ್ರ ಭಟ್, ಪಿಎಸ್ ನರಸಿಂಹ ಮತ್ತು ಹಿಮಾ ಕೊಹ್ಲಿ ಅವರನ್ನು ಒಳಗೊಂಡ ಸಂವಿಧಾನಿಕ ಪೀಠ ದೇಶದಲ್ಲಿ ಸಲಿಂಗ ವಿವಾಹಗಳಿಗೆ ಕಾನೂನು ಮಾನ್ಯತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆ ನಡೆಸುತ್ತಿದೆ. ಇದನ್ನೂ ಓದಿ: ಕ್ರಿಶ್ಚಿಯನ್ ಮಿಷನರಿಗಳ ಧರ್ಮ ಪ್ರಚಾರ ಕಾನೂನುಬಾಹಿರವಲ್ಲ – ಸುಪ್ರೀಂಗೆ ತಮಿಳುನಾಡು ಸರ್ಕಾರ ಅಫಿಡವಿಟ್